ಲಸಿಕೆ ನೀಡುವಲ್ಲಿ ಕೇಂದ್ರ-ರಾಜ್ಯ ಸರಕಾರ ವಿಫಲ
Team Udayavani, Jun 3, 2021, 11:00 PM IST
ಕಡೂರು: ಕೊರೊನಾವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೊಳಿಸುವುದು ಅತ್ಯಗತ್ಯವಾಗಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಲಸಿಕೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶರತ್ ಕೃಷ್ಣಮೂರ್ತಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿಷಯದಲ್ಲಿ ದಿನಕ್ಕೊಂದು, ವಾರಕ್ಕೊಂದು ಹೊಸ ಹೊಸ ಮಾರ್ಗಸೂಚಿಗಳನ್ನು ಸರಕಾರ ಆದೇಶಿಸುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಮೊದಲನೇ ಮತ್ತು ಎರಡನೇ ಡೋಸ್ ನಡುವಿನ ಅಂತರ 28 ದಿನಗಳಾಗಿತ್ತು. ನಂತರ ಅದು 45 ದಿನ, 84 ಇದೀಗ 90 ದಿನಗಳ ಅಂತರಕ್ಕೆ ಬದಲಾಗುತ್ತಾ ಬಂದಿದೆ. ಆದರೂ ಸಿಗುತ್ತಿಲ್ಲ ಎಂದು ದೂರಿದರು.
ಲಸಿಕೆ ನೀಡುವ ಕಾರ್ಯವು ಮಂದಗತಿಯಲ್ಲಿ ನಡೆಯುತ್ತಿದ್ದು, ಸಾರ್ವಜನಿಕರಿಗೆ ಲಸಿಕೆ ನೀಡುವಲ್ಲಿ ವಿಳಂಬವಾಗುತ್ತಿದೆ. ಆದ್ಯತೆ ಪಟ್ಟಿ ತಯಾರಿಸಿಕೊಂಡು ನೀಡುತ್ತಿದ್ದೇವೆ ಎಂಬ ಮಾತು ಕೇಳಿ ಬರುತ್ತಿದೆ. ಯಾರ್ಯಾರಿಗೆ ಆದ್ಯತೆ ಎಂಬ ಮಾಹಿತಿ ಲಭ್ಯವಾಗುತ್ತಿಲ್ಲ. ಇದನ್ನು ಆಡಳಿತವು ಸ್ಪಷ್ಟವಾಗಿ ತಿಳಿಸಬೇಕು. ಲಸಿಕೆ ಅನುಷ್ಠಾನವು ಪಾರದರ್ಶಕತೆಯಿಂದ ಕೂಡಿರಬೇಕು.
ತಾಲೂಕಿನಲ್ಲಿ ಸೋಂಕಿತರ ಮತ್ತು ಸಾವಿಗೀಡಾದವರ ಅಂಕಿ ಅಂಶಗಳನ್ನು ಬಿಡುಗಡೆ ಮಾಡುತ್ತಿರುವಂತೆ ಲಸಿಕೆ ಪಡೆದವರ ವಿವರಗಳನ್ನು ನಿತ್ಯ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಕೋವಿಡ್-19ರ 3ನೇ ಅಲೆಯಿಂದ ಮಕ್ಕಳಿಗೆ ಅಪಾಯ ಎಂಬ ಮುನ್ಸೂಚನೆಗಳು ಬರುತ್ತಿದ್ದು, 18 ವರ್ಷ ಕೆಳಗಿನವರಿಗೆ ಲಸಿಕೆ ನೀಡುವ ವಿಚಾರದಲ್ಲಿ ಸರಕಾರದ ಮಾರ್ಗಸೂಚಿಗಳೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಪುರಸಭೆ ಸದಸ್ಯ ತೋಟದ ಮನೆ ಮೋಹನ್ ಮಾತನಾಡಿ, ಪುರಸಭೆ ಸೇರಿದಂತೆ ಇತರೆ ಜನಪ್ರತಿನಿಧಿಗಳಿಗೂ ಸಹ ಲಸಿಕೆ ನೀಡಲು ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. ಪುರಸಭೆ ಸದಸ್ಯೆ ಜ್ಯೋತಿ ಆನಂದ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಾಯಿತ್ರಿ ಕಿರಣ್, ಎಂ.ಸೋಮಶೇಖರ್, ಮಂಜುನಾಥ್, ಶರತ್ ಯಾದವ್, ನಾಗರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.