ವಿವಿಧ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ


Team Udayavani, Jun 6, 2021, 9:29 PM IST

6-17

ಶೃಂಗೇರಿ: ಮಹಾಮಾರಿ ಕೊರೊನಾ ಸಂಕಷ್ಟದ ಸಮಯದಲ್ಲಿ ತಾಲೂಕಿನ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕರ ಕೆಲಸ ನಿಗದಿತ ವೇಳೆಗೆ ಆಗದೆ ಸಾರ್ವಜನಿಕರು ಸಂಕಟಪಡುವಂತಾಗಿದೆ.

ತಾಲೂಕು ಸಾರ್ವಜನಿಕ ಆಸ್ಪತ್ರೆ: ತಾಲೂಕಿನಲ್ಲಿ ಸುಸಜ್ಜಿತ ಸಾರ್ವಜನಿಕ ಆಸ್ಪತ್ರೆ ಇದ್ದರೂ ರೋಗಿಗಳ ಸೇವೆ ಮಾತ್ರ ಮರೀಚಿಕೆಯಾಗಿದೆ. ತಜ್ಞ ವೈದ್ಯರು ಇಲ್ಲದೆ ಪಕ್ಕದ ಜಿಲ್ಲೆಯಾದ ಶಿವಮೊಗ್ಗ, ದ.ಕ. ಜಿಲ್ಲೆಗಳಿಗೆ ಹೋಗಬೇಕಾದ ಅನಿವಾರ್ಯ ಸ್ಥಿತಿ ಇದೆ. ಸುಮಾರು 35,520 ಜನಸಂಖ್ಯೆ ಹೊಂದಿರುವ ಪುಟ್ಟ ತಾಲೂಕು ಶೃಂಗೇರಿ. ಇಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳೇ ಜಾಸ್ತಿ. ಜೀವನ ನಿರ್ವಹಣೆಗೆ ಪರದಾಡುವಂತಹ ಪರಿಸ್ಥಿತಿ.

ಅಪಘಾತ, ಹೃದಯ ಸಂಬಂ ಧಿ ಕಾಯಿಲೆ, ಪಾರ್ಶ್ವವಾಯು ಮುಂತಾದ ಕಾಯಿಲೆಗಳು ಎದುರಾದರೇ ದೇವರೇ ಗತಿ. ತಾಲೂಕು ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾ ಧಿಕಾರಿ ಡಾ| ಮಂಜುನಾಥ, ಡಾ| ದಯಾನಂದ್‌ ಹಾಗೂ ಆಯುಷ್ಮಾನ್‌ ವಿಭಾಗದ ಡಾ| ವಿದ್ಯಾಶಂಕರ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯ ವೈದ್ಯಾ  ಧಿಕಾರಿ ಡಾ| ಮಂಜುನಾಥ್‌ ಇಷ್ಟರಲ್ಲೇ ನಿವೃತ್ತಿ ಹೊಂದಲಿದ್ದಾರೆ.

ಆಸ್ಪತ್ರೆಯಲ್ಲಿ ಒಟ್ಟು 6 ವೈದ್ಯರ ಹುದ್ದೆ ಖಾಲಿ ಇದೆ. ಪ್ರತಿ ದಿನ ಆಸ್ಪತ್ರೆಗೆ 100ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದಾರೆ. ಇದೀಗ ಕೊರೊನಾ ಸೋಂಕಿತರು ಸಾಕಷ್ಟು ಮಂದಿ ಬರುತ್ತಿದ್ದು ಸೋಂಕಿತರ ಸಂಖ್ಯೆ ಪ್ರತಿದಿನ ಹೆಚ್ಚಾಗುತ್ತಿದೆ. ಅವರ ತಪಾಸಣೆಯೂ ತುರ್ತಾಗಿ ಆಗಬೇಕಿದೆ. ಅಲ್ಲದೆ ಒಳರೋಗಿಗಳ ಆರೋಗ್ಯ ವಿಚಾರಣೆ, ಔಷಧೋಪಚಾರಗಳತ್ತ ಗಮನ ನೀಡಬೇಕಿದೆ. ಹೆರಿಗೆ, ಸಿಸೇರಿಯನ್‌ ಸಂದರ್ಭದಲ್ಲಿ ಅರಿವಳಿಕೆ ನೀಡಲು ವೈದ್ಯರಿಲ್ಲ.

ತಾಲೂಕು ಕಚೇರಿ: ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರ ಕೆಲಸವಾಗದೆ ಪ್ರತಿದಿನ ಸಾರ್ವಜನಿಕರು ಕಚೇರಿಗೆ ಅಲೆದಾಡುವಂತಾಗಿದೆ. ಅ ಧಿಕಾರಿಗಳು ಕೊರೊನಾ ರೋಗದ ನಿರ್ವಹಣೆಗೆ ತೆರಳಬೇಕಾಗಿರುವುದರಿಂದ ಕಚೇರಿಯ ಕೆಲಸಗಳು ಸ್ಥಗಿತಗೊಂಡಿದೆ. ತಾಲೂಕು 49 ಕಂದಾಯ ಗ್ರಾಮಗಳನ್ನು ಹೊಂದಿದ್ದು ತಾಲೂಕು ಕಚೇರಿಯಲ್ಲಿ 40 ಹುದ್ದೆಗಳಲ್ಲಿ 25 ಹುದ್ದೆಗಳು ಮಾತ್ರ ಭರ್ತಿಯಾಗಿವೆ.

ಶಿರಸ್ತೇದಾರ್‌, ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರು, ಗ್ರಾಮ ಲೆಕ್ಕಿಗರು, ಡಿ- ದರ್ಜೆ ನೌಕರರಿದ್ದರೂ ಇನ್ನಿತರ ಸಿಬ್ಬಂದಿ ಕೊರತೆಯಿಂದ ತೊಂದರೆ ಪಡುವಂತಾಗಿದೆ. ಇದರೊಂದಿಗೆ 8 ಅಧಿ ಕಾರಿಗಳು ಬೇರೆ ಇಲಾಖೆಗೆ ನಿಯೋಜನೆಗೊಂಡವರಾಗಿದ್ದಾರೆ. ಒಟ್ಟು 15 ಹುದ್ದೆಗಳು ಖಾಲಿ ಬಿದ್ದಿವೆ. ಸರ್ವೆ ಇಲಾಖೆ, ಉಪನೋಂದಣಿ, ಚುನಾವಣಾ ಕಚೇರಿ, ಆಹಾರ- ನಾಗರಿಕ ಪೂರೈಕೆ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ನೆಮ್ಮದಿ ಕೇಂದ್ರದಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಿದರೆ ಸರ್ವರ್‌ ಸಮಸ್ಯೆಯಿಂದಾಗಿ ದಾಖಲೆ ಪಡೆಯಲು ಕಾಲಮಿತಿಯೊಳಗೆ ಸಾಧ್ಯವಾಗುತ್ತಿಲ್ಲ.

ಈಗಾಗಲೇ ತಾಲೂಕಿನಲ್ಲಿ ಕೊರೊನಾ ಸೋಂಕಿಗೆ ಸಾಕಷ್ಟು ಜನರು ಬಲಿಯಾಗಿದ್ದು ತಾಲೂಕು ಆಡಳಿತ ಕೊರೊನಾ ನಿರ್ವಹಣೆಯಲ್ಲಿ ತೊಡಗಿದ್ದಾರೆ. ಆದರೆ ತಾಲೂಕಿನಲ್ಲೀಗ ಕೊರೊನಾ ಸಂಕಷ್ಟ ಸಂದರ್ಭ ಎದುರಿಸಬೇಕಾದ ಮುಖ್ಯಸ್ಥರಾದ ತಾಲೂಕು ದಂಡಾಧಿಕಾರಿಗಳೇ ಇಲ್ಲದೆ ತಾಲೂಕು ಆಡಳಿತವೇ ಮಸುಕಾಗಿದೆ. ಮುಖ್ಯ ದಂಡಾಧಿ ಕಾರಿ ತಹಶೀಲ್ದಾರ್‌ರಿಗೆ ಕೋವಿಡ್‌ ಪಾಸಿಟಿವ್‌ ಬಂದಿರುವುದರಿಂದ ರಜೆ ಮೇಲೆ ತೆರಳಿದ್ದಾರೆ ಎನ್ನಲಾಗಿದೆ. ಕೊಪ್ಪ ತಹಶೀಲ್ದಾರ್‌ಗೆ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇನ್ನು ಬೇರೆ ಬೇರೆ ಇಲಾಖೆಗಳಲ್ಲಿ ಹುದ್ದೆ ಖಾಲಿ ಇದ್ದು ಕ್ಷೇತ್ರ ಶಿಕ್ಷಣಾಧಿ ಕಾರಿ ಡಾ|ನಾಗರಾಜ್‌ ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟಿದ್ದು ಇವರ ಜಾಗಕ್ಕೆ ಇದೀಗ ಕ್ಷೇತ್ರ ಸಂಪನ್ಮೂಲ ಕೇಂದ್ರ ಅ ಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎನ್‌.ಜಿ. ರಾಘವೇಂದ್ರ ಅವರನ್ನು ಕ್ಷೇತ್ರ ಶಿಕ್ಷಣಾ  ಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇವರಿಗೆ ಈಗಾಗಲೇ ಕ್ಷೇತ್ರ ಸಂಪನ್ಮೂಲ ಕೇಂದ್ರದ ಹುದ್ದೆಯ ಜೊತೆಗೆ ಸಿಡಿಪಿಒ ಅ ಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದರೊಂದಿಗೆ ಈಗ ಕ್ಷೇತ್ರ ಶಿಕ್ಷಣಾಧಿ ಕಾರಿಯಾಗಿಯೂ ಕಾರ್ಯ ನಿರ್ವಹಿಸಬೇಕಾಗಿದೆ. ಒಟ್ಟಾರೆ ಮೂರು ಇಲಾಖೆಗಳಿಗೆ ಒಬ್ಬರೇ ಅ ಧಿಕಾರಿಯಾಗಿ ಹೊಣೆ ಹೊರಬೇಕಾಗಿರುವುದು ವಿಪರ್ಯಾಸವೇ ಸರಿ. ಕೊರೊನಾ ಸಂದರ್ಭದಲ್ಲಿ ತಾಲೂಕಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಹುದ್ದೆಗಳಿಗೆ ಸರ್ಕಾರ ಶೀಘ್ರವಾಗಿ ನೇಮಕ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.