ಮಹಾವೀರ ಗೋಶಾಲೆಗೆ ಆಹಾರ ವಿತರಣೆ


Team Udayavani, Jun 7, 2021, 10:12 PM IST

7-16

ಕಡೂರು: “ದಯವಿಲ್ಲದ ಧರ್ಮ ಯಾವುದಯ್ಯ ದಯವಿರಬೇಕು ಸಕಲ ಪ್ರಾಣಿಗಳಲ್ಲಿ ದಯವೇ ಧರ್ಮದ ಮೂಲವಯ್ಯ’ ಎಂಬ ಬಸವಣ್ಣ ಅವರ ವಚನದಂತೆ ಕೊರೊನಾ ಸಂಕಷ್ಟದಲ್ಲಿ ಜನರ ಆರೋಗ್ಯ ಮತ್ತು ಔಷಧಿಗೆ ಹೆಚ್ಚಿನ ಒತ್ತು ನೀಡಿದ್ದು, ಕಡೂರು- ಬಾಣಾವರ ಮಧ್ಯೆ ಇರುವ ಶ್ರೀ ಭಗವಾನ್‌ ಮಹಾವೀರ ಗೋಶಾಲೆಗೆ ಶಾಸಕ ಬೆಳ್ಳಿಪ್ರಕಾಶ್‌ ಭಾನುವಾರ ಭೇಟಿ ನೀಡಿ ಗೋವುಗಳಿಗೆ ಆಹಾರ ತಿನ್ನಿಸಿದರು.

ಮಾತು ಬಲ್ಲ ಮನುಷ್ಯ ತನ್ನ ಸಂಕಷ್ಟಗಳನ್ನು ಹೇಳಿಕೊಳ್ಳಬಹುದು. ಆದರೆ ಮೂಕಪ್ರಾಣಿಗಳ ಜೀವಕ್ಕೂ ಬೆಲೆ ಇದೆ ಎಂದು ಕೊರೊನಾ ಪರಿಸ್ಥಿತಿಯಲ್ಲಿ ನಡೆಸುತ್ತಿರುವ ಗೋಶಾಲೆಯ ಸಂಪೂರ್ಣ ಮಾಹಿತಿ ಪಡೆದ ಶಾಸಕರು ಒಂದು ಲೋಡ್‌ ಹಸಿ ಹುಲ್ಲು, 25 ಕ್ವಿಂಟಾಲ್‌ ಬೂಸವನ್ನು ಉಚಿತವಾಗಿ ನೀಡಿದರು.

ಗೋಶಾಲೆಯ ಪರವಾಗಿ ಮುರಳಿ ಕೊಠಾರಿ ಮತ್ತು ವ್ಯವಸ್ಥಾಪಕ ಮಹೇಶ್‌ ಶಾಸಕರ ಕೊಡುಗೆಯನ್ನು ಸ್ವೀಕರಿಸಿ ಮಾತನಾಡಿ, ಕಳೆದ 12 ವರ್ಷಗಳಿಂದ ಗೋ ಶಾಲೆಯನ್ನು ತೆರೆದಿದ್ದು ಇದೀಗ ಸುಮಾರು 238 ವಿವಿಧ ಬಗೆಯ ಎತ್ತು, ಹಸು, ಕರು, ಎಮ್ಮೆ ಮತ್ತಿತರ ರಾಸುಗಳಿವೆ. ವಾರ್ಷಿಕ 34 ಲಕ್ಷ ರೂ. ವೆಚ್ಚವಾಗುತ್ತಿದ್ದು ತಿಂಗಳಿಗೆ ಕನಿಷ್ಟ 3.5 ಲಕ್ಷ ರೂ.ಗಳು ರಾಸುಗಳ ಆರೈಕೆಗೆ ವೆಚ್ಚವಾಗುತ್ತಿದೆ.

ಇದನ್ನೆಲ್ಲಾ ದಾನಿಗಳಿಂದ ಭರಿಸುತ್ತಿದ್ದು ಇದುವರೆಗೂ ಯಾವುದೇ ಸಮಸ್ಯೆ ಇಲ್ಲದಂತೆ ನಡೆಯುತ್ತಿದೆ. ವರ್ಷದಿಂದ ವರ್ಷಕ್ಕೆ ರಾಸುಗಳ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿಗೆ ಯಾವುದೇ ರೈತರು ತಮ್ಮ ರಾಸುಗಳನ್ನು ತಂದು ಬಿಟ್ಟಿಲ್ಲ. ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿನ ಅನೇಕ ಪೊಲೀಸ್‌ ಠಾಣೆಗಳಲ್ಲಿ ರಕ್ಷಣೆ ಮಾಡಿದ್ದ ಗೋವುಗಳನ್ನು ತಂದು ಬಿಟ್ಟಿದ್ದಾರೆ.

ನಮ್ಮ ಟ್ರಸ್ಟ್‌ ಹಲವಾರು ಮೊಕದ್ದಮೆಯನ್ನು ಎದುರಿಸಿ ಗೋವುಗಳನ್ನು ರಕ್ಷಿಸಿದೆ ಎಂದರು. ಗೋಪಾಲಕರ 6 ಕುಟುಂಬಗಳು ಗೋವುಗಳ ರಕ್ಷಣೆ, ಪೋಷಣೆಯಲ್ಲಿ ತೊಡಗಿಕೊಂಡಿದ್ದು, ಅನೇಕ ದಾನಿಗಳು ಅವರ ಕುಟುಂಬಗಳ ಹುಟ್ಟುಹಬ್ಬ ಮತ್ತಿತರ ಶುಭ ಕಾರ್ಯಗಳಲ್ಲಿ ಇಲ್ಲಿಗೆ ಬಂದು ಗೋವುಗಳನ್ನು ಪೂಜಿಸಿ ದಾನ ನೀಡುವುದು ವಾಡಿಕೆಯಾಗಿದೆ.

ಟ್ರಸ್ಟ್‌ನ ಅಧ್ಯಕ್ಷ ಮಾಣಿಕ್‌ಚಂದ್‌, ಸದಸ್ಯರಾದ ಕಡೂರು ಕೊಠಾರಿ ಮುರಳಿ, ಸಂಪತ್‌ರಾಜ್‌, ಕಿಶೋರ್‌ ಕುಮಾರ್‌, ಡಾ| ದಿನೇಶ್‌, ಡಾ| ಎಸ್‌ .ವಿ. ದೀಪಕ್‌, ಡಾ| ರವಿಕುಮಾರ್‌, ಶಾಮಿಯಾನ ಚಂದ್ರು, ಎಪಿಎಂಸಿ ರವಿಕುಮಾರ್‌ ಇದ್ದರು.

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.