ಕೇಂದ್ರ ಬಜೆಟ್‌ನತ್ತ ಕಾಫಿನಾಡಿನ ಚಿತ್ತ

ಕಾಫಿ ಬೆಳೆ ಉತ್ತೇಜನ-ಸ್ಪೈಸ್‌ ಪಾರ್ಕ್‌ಗೆ ಅನುದಾನದ ನಿರೀಕ್ಷೆ

Team Udayavani, Feb 1, 2021, 6:45 PM IST

1-23

ಚಿಕ್ಕಮಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸೋಮವಾರ ಬಜೆಟ್‌ ಮಂಡನೆ ಮಾಡಲಿದ್ದು, ಕೇಂದ್ರ ಬಜೆಟ್‌ ಕಡೆ ಕಾಫಿನಾಡಿನ ಜನರ ಚಿತ್ತ ನಟ್ಟಿದೆ. ಜಿಲ್ಲೆಯ ಕಾಫಿಬೆಳೆ ಉತ್ತೇಜಿಸಲು ಕೇಂದ್ರ ಸರ್ಕಾರ ಅನುದಾನ ನೀಡಲಿದೆಯೇ ಎಂದು ನೋಡಬೇಕಿದೆ.
ಜಿಲ್ಲೆ ಕಾಫಿಗೆ ಪ್ರಸಿದ್ಧಿ ಪಡೆದಿದ್ದು, ಕಳೆದ ಐದಾರು ವರ್ಷಗಳಿಂದ ಕಾಫಿ ಉದ್ಯಮ ಕಷ್ಟಕ್ಕೆ ಸಿಲುಕಿದೆ.

ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರೀತ್ಯ, ಅಕಾಲಿಕ ಮಳೆ, ಬೆಲೆ ಕುಸಿತ, ರಸಗೊಬ್ಬರ ರಾಸಾಯನಿಕಗಳ ಬೆಲೆ ಏರಿಕೆ, ಕಾರ್ಮಿಕರ ಸಮಸ್ಯೆ, ಬ್ಯಾಂಕ್‌ ಸಾಲ ಹೀಗೆ ಅನೇಕ ಸಮಸ್ಯೆಗಳಿಂದ ಬೆಳೆಗಾರರು ಹೈರಾಣಾಗಿ ಹೋಗಿದ್ದಾರೆ. ಜಿಲ್ಲೆಯಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಕಾಫಿ ಬೆಳೆಯಲಾಗುತ್ತಿದೆ. ಈ ಉದ್ಯಮ ಅವಲಂಬಿಸಿ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ.

ಆದರೆ ಉದ್ಯಮ ಅನೇಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದು, ಇದನ್ನೇ ನಂಬಿ ಜೀವನ ನಡೆಸುತ್ತಿದ್ದ ಕಾರ್ಮಿಕರ ಬದುಕು ದುಸ್ತರವಾಗಿದೆ. ಕಾಫಿ ಬೆಳೆಗಾರರ ಮತ್ತು ಉದ್ಯಮದ ರಕ್ಷಣೆಗೆ ವಿದರ್ಭ ಪ್ಯಾಕೇಜ್‌ ಮಾದರಿಯಲ್ಲಿ ಕೇಂದ್ರ ಸರ್ಕಾರ ಅನುದಾನ ನೀಡಬೇಕು ಹಾಗೂ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕೆಂದು ಬೆಳೆಗಾರರು ಅನೇಕ ಬಾರಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದು, ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕಾಫಿ ಬೆಳೆಗಾರರ ರಕ್ಷಣೆಗೆ ಅನುದಾನ ಅಥವಾ ವಿಶೇಷ ಅನುದಾನ ಘೋಷಣೆಯಾಗಲಿದೆಯೇ ಎಂದು ನೋಡಬೇಕಿದೆ. ಜಿಲ್ಲೆಯಲ್ಲಿ ಕಾಫಿ ಬೆಳೆಯ ಜೊತೆಗೆ ಸಾಂಬಾರು ಪದಾರ್ಥಗಳಾದ ಕಾಳುಮೆಣಸು, ಏಲಕ್ಕಿ ಹಾಗೂ ಟೀಯನ್ನು ಬೆಳೆಯಲಾಗುತ್ತಿದೆ. ಈ ಬೆಳೆಗಳ ವ್ಯಾಪಾರ- ವಹಿವಾಟಿಗೆ ಅನುಕೂಲವಾಗುವಂತೆ ಸ್ಪೈಸ್‌ಪಾರ್ಕ್‌ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಅನೇಕ ವರ್ಷಗಳಿಂದ ಕೇಳಿ ಬರುತ್ತಿದೆ.

ಈ ಹಿಂದೆ ನಿರ್ಮಲಾ ಸೀತಾರಾಮನ್‌ ಅವರು ವಾಣಿಜ್ಯ ಸಚಿವರಾಗಿದ್ದಾಗ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಪೈಸ್‌ ಪಾರ್ಕ್‌ ನಿರ್ಮಾಣದ ಭರವಸೆ ನೀಡಿದ್ದು, ಈ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪವಾಗಲಿದೆಯೇ ಎಂದು ನೋಡಬೇಕಿದೆ. ಜಿಲ್ಲೆಯಲ್ಲಿ ರೈಲು ಸಂಚಾರವಿದ್ದರೂ ನೇರವಾಗಿ ಚಿಕ್ಕಮಗಳೂರು ನಗರದಿಂದ ಬೆಂಗಳೂರಿಗೆ ರೈಲುಗಾಡಿ ಓಡಾಡುತ್ತಿಲ್ಲ. ಇದರಿಂದ ಬೆಂಗಳೂರಿಗೆ ಓಡಾಡಬೇಕಾದರವರಿಗೆ ತೊಂದರೆಯಾಗುತ್ತಿದ್ದು, ಚಿಕ್ಕಮಗಳೂರು ಮತ್ತು ಬೆಂಗಳೂರು ನಗರಕ್ಕೆ ರಾತ್ರಿ ರೈಲುಗಾಡಿ ಬಿಡುವಂತೆ ಜನರು ಅನೇಕ ಬಾರಿ ಒತ್ತಾಯಿಸಿದ್ದಾರೆ. ಚಿಕ್ಕಮಗಳೂರು ನಗರದಿಂದ ಬೇಲೂರು ವರೆಗೂ ರೈಲುಮಾರ್ಗ ನಿರ್ಮಿಸಿ ಹಾಸನ ಜಿಲ್ಲೆಗೆ ಸಂಪರ್ಕ ಕಲ್ಪಿಸಬೇಕೆಂಬ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಅನೇಕ ಬಾರಿ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಾರ್ಕಳ, ಶೃಂಗೇರಿ ಹಾಗೂ ಶಿವಮೊಗ್ಗಕ್ಕೆ ರೈಲುಮಾರ್ಗ ನಿರ್ಮಿಸಲು ಸಮೀಕ್ಷೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಬಜೆಟ್‌ ನಲ್ಲಿ ಉಲ್ಲೇಖ ಮಾಡಲಿದೆಯೇ ಎಂದು ಜನರು ಕಾತುರರಾಗಿದ್ದಾರೆ.

ಜಿಲ್ಲೆ ವಾಣಿಜ್ಯೋದ್ಯಮಕ್ಕೆ ಹೆಸರು ಪಡೆದಿದ್ದು, ಜಿಲ್ಲೆಯಲ್ಲಿ ಕಿರು ವಿಮಾನ ನಿಲ್ದಾಣದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಿರುವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಕೆಲವೊಂದಿಷ್ಟು ಕಾಮಗಾರಿ ನಡೆದು ಅರ್ಧಕ್ಕೆ ನಿಂತಿದೆ. ಕಿರು ವಿಮಾನ ನಿಲ್ದಾಣ ಕಾಮಗಾರಿ ಮುಂದುವರಿಸಲು ಬಜೆಟ್‌ನಲ್ಲಿ ಹಣ ನೀಡಲಿದೆಯೇ ಎಂದು ನೋಡಬೇಕಿದೆ. ಈ ಎಲ್ಲಾ ಕಾರಣಗಳಿಂದ ಇಂದು ಮಂಡನೆಯಾಗುವ ಕೇಂದ್ರ ಬಜೆಟ್‌ನತ್ತಾ ಇಡೀ ಜಿಲ್ಲೆಯ ಜನತೆಯ ಚಿತ್ತ ನೆಟ್ಟಿದೆ.

ಓದಿ: ಸಶಕ್ತ ದೇಶದ ಪರಿಕಲ್ಪನೆಗೆ ಪೂರಕ ಬಜೆಟ್: ಸಿ.ಟಿ ರವಿ

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.