ಮುಂಗಾರು ಆರ್ಭಟ; ಶುರುವಾಯ್ತು ಸಂಕಷ್ಟ

Team Udayavani, Jun 17, 2021, 10:27 PM IST

17-16

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರಗೊಳ್ಳುತ್ತಿದ್ದು, ಬುಧವಾರ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಬಯಲುಸೀಮೆ ಭಾಗದಲ್ಲಿ ಮೋಡ ಕವಿದ ವಾತವರಣದಲ್ಲಿ ಶೀತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ಬುಧವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಧರೆ ಕುಸಿತವಾಗಿದೆ. ವಿದ್ಯುತ್‌ ಸ್ಥಗಿತಗೊಂಡಿದ್ದು, ಹೊಲ-ಗದ್ದೆಗಳಿಗೆ ನೀರು ನುಗ್ಗಿರುವ ಘಟನೆಗಳು ನಡೆದಿವೆ.

ಐದು ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೂ ಮಳೆಯಾಗಿದೆ. ಹಾಗಾಗಿ, ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಹಳ್ಳಕೊಳ್ಳಗಳಲ್ಲಿ ನೀರು ತುಂಬಿಕೊಂಡಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ, ಕೊಟ್ಟಿಗೆಹಾರ, ಬಾಳೂರು, ಬಣಕಲ್‌, ಗಬಲ್‌, ಹಿರೇಬೈಲು, ಕಳಸ, ಹೊರನಾಡು, ಕುದುರೆಮುಖ, ಭೈರಾಪುರ, ಸುಂಕಸಾಲೆ ಭಾಗದಲ್ಲಿ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ರಭಸವಾಗಿ ಬೀಸಿದ ಗಾಳಿಗೆ ಮರಗಳು ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಇದರಿಂದ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್‌ ಕಡಿತಗೊಂಡಿದೆ.

ನೀರಿನಲ್ಲಿ ಕೊಚ್ಚಿಹೋದ ವಾಹನ: ಮೂಡಿಗೆರೆ ತಾಲೂಕು ಕನ್ನೇಹಳ್ಳಿ ಗ್ರಾಮದಲ್ಲಿ ಹರಿಯುವ ಜಪಾವತಿ ನದಿ ತುಂಬಿ ಹರಿಯುತ್ತಿದ್ದು, ಕೊಗ್ರಳ್ಳಿ ರಿವರ್‌ ಕಂಟ್ರಿ ರೆಸಾರ್ಟ್‌ಗೆ ಸೇರಿದ ಪಿಕ್‌ಅಪ್‌ ವಾಹನ ಸೇತುವೆ ದಾಟುವಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಆದರೆ, ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ವಾಹನ ನೀರಿನಲ್ಲಿ ಕೊಚ್ಚಿಹೋಗಿದೆ. ಬಿನ್ನಡಿ ಗ್ರಾಮದಲ್ಲಿ ರಸ್ತೆ ಬದಿ ಧರೆ ಕುಸಿದು ರಸ್ತೆ ಸಂಚಾರಕ್ಕೆ ಕೆಲಕಾಲ ಅಡ್ಡಿಯಾಗಿತ್ತು. ಸ್ಥಳೀಯರು ರಸ್ತೆ ಮೇಲಿದ್ದ ಮಣ್ಣು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಭಾಗದಲ್ಲಿ ವಾರದಿಂದ ಮಳೆಯಾಗುತ್ತಿದ್ದು, ಹೇಮಾವತಿ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದ ಕೆಲ ಹೊಲಗದ್ದೆಗಳಿಗೆ ನೀರು ನುಗ್ಗಿದೆ ಎಂದು ತಿಳಿದು ಬಂದಿದೆ.

ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು, ಕಳಸ, ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ ಭದ್ರಾ ನದಿಯಲ್ಲಿ ಮುಳುಗಲು ಕೆಲವೇ ಅಡಿಗಳು ಮಾತ್ರ ಬಾಕಿ ಇದೆ. ಇದೇ ರೀತಿ ಮಳೆ ಮುಂದುವರೆದರೆ ಸೇತುವೆ ನದಿ ನೀರಿನಲ್ಲಿ ಮುಳುಗಿ ಕಳಸ-ಹೊರ ನಾಡು ಸಂಪರ್ಕ ಕಡಿತಗೊಳ್ಳಲಿದೆ. ಮೂಡಿಗೆರೆ ತಾಲೂಕಿನ ಬಣಕಲ್‌ ಹಾಗೂ ಕೊಟ್ಟಿಗೆಹಾರ ಸಂಪರ್ಕದ ಹೆದ್ದಾರಿಯಲ್ಲಿ ಹಳ್ಳವೊಂದರ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ಕೊಪ್ಪ ತಾಲೂಕಿನ ಜಯಪುರದಿಂದ ಬಸರಿಕಟ್ಟೆಗೆ ಸಾಗುವ ಮಾರ್ಗದಲ್ಲಿ ರಸ್ತೆ ಬದಿ ಇದ್ದ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲೂ ಭಾರೀ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಸುತ್ತಮುತ್ತ ಸಾಧಾರಣ ಮಳೆಯಾಗಿದ್ದು, ಕಡೂರು, ಬೀರೂರು, ತರೀಕೆರೆ ಭಾಗದಲ್ಲಿ ಸಾಧಾರಣ ಮಳೆಯೊಂದಿಗೆ ಮೋಡ ಕವಿದ ವಾತಾವರಣ, ಶೀತ ಗಾಳಿ ಬೀಸುತ್ತಿದೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.