ಭಾಷಾ ಕಲಿಕೆಗೆ 3 ವರ್ಷ ಅವಕಾಶ ನೀಡಿ


Team Udayavani, Jun 19, 2021, 9:20 PM IST

19-15

ಚಿಕ್ಕಮಗಳೂರು: ಪದವಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಭಾಷಾ ಕಲಿಕೆಗೆ ಕನಿಷ್ಟ 3 ವರ್ಷ ಅವಕಾಶ ನೀಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ಶುಕ್ರವಾರ ಅಪರ ಜಿಲ್ಲಾಧಿಕಾರಿ ಬಿ.ಆರ್‌. ರೂಪ ಅವರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಈ ಕುರಿತು ಮನವಿ ಸಲ್ಲಿಸಿದರು. ಈ ಹಿಂದೆ 3 ವರ್ಷಗಳ ಪದವಿ ಶಿಕ್ಷಣದಲ್ಲಿ ಭಾಷಾ ಕಲಿಕೆಗೆ 2 ವರ್ಷ ಅವಕಾಶವಿತ್ತು. ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯ, ಆಲೋಚನಾ ಶಕ್ತಿ, ತಾರ್ಕಿಕ ಶಕ್ತಿ, ಮಾತೃಭಾಷೆಯ ಬಗ್ಗೆ ಆಳವಾದ ಜ್ಞಾನ ಬೆಳೆಯುತ್ತಿತ್ತು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದೀಗ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪದವಿ ಶಿಕ್ಷಣಕ್ಕೆ 4 ವರ್ಷ ನಿಗ ದಿಪಡಿಸಲಾಗಿದ್ದು, ಅದರಲ್ಲಿ ಭಾಷಾ ಶಿಕ್ಷಣಕ್ಕೆ ಕೇವಲ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಬಗ್ಗೆ ಆಳವಾದ ಜ್ಞಾನ, ಅಭಿಮಾನ, ಸಾಹಿತ್ಯದ ಅಧ್ಯಯನ, ಕನ್ನಡದ ಸಂಸ್ಕೃತಿ ಮತ್ತು ಪರಂಪರೆ ಬೆಳೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಗೂಗಲ್‌ ಸೇರಿದಂತೆ ಅನೇಕ ಕಡೆ ಕನ್ನಡ ಭಾಷೆಗೆ ಇತ್ತೀಚಿನ ವರ್ಷಗಳಲ್ಲಿ ಅಪಮಾನ ಮತ್ತು ಕುತ್ತು ಬರುತ್ತಿದೆ. ಈಗ ಸರ್ಕಾರದಿಂದಲೇ ಕುತ್ತು ಬರುತ್ತಿರುವುದು ದುರಂತ. 4 ವರ್ಷಗಳ ನೂತನ ಪದವಿ ಶಿಕ್ಷಣದಲ್ಲಿ ಇನ್ನಷ್ಟು ಅವಧಿಯ ಭಾಷಾ ಭೋಧನೆಯನ್ನು ಹೆಚ್ಚಿಸುವ ಬದಲು ಒಂದು ವರ್ಷಕ್ಕೆ ಇಳಿಸಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಪದವಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಭಾಷಾ ಕಲಿಕೆಗೆ ಕನಿಷ್ಟ 3 ವರ್ಷಗಳ ಅವ ಧಿ ನಿಗ ದಿಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್‌, ಸಂಗಮ ಪ್ರತಿಷ್ಠಾನದ ಸಂಚಾಲಕ ಎಂ.ಸಿ. ಶಿವಾನಂದಸ್ವಾಮಿ, ಶರಣ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ರವೀಶ್‌ ಬಸಪ್ಪ, ನವ ಕರ್ನಾಟಕ ಯುವಶಕ್ತಿ ವೇದಿಕೆಯ ಅಧ್ಯಕ್ಷ ಸಿ.ಆರ್‌. ರಘು, ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ. ರಾಜೇಗೌಡ, ಶಂಕರೇಗೌಡ, ಜಿಲ್ಲಾ ಡಾ| ರಾಜ್‌ ಕುಮಾರ್‌ ಅಭಿಮಾನಿಗಳ ಸಂಘದ ಸ್ಥಾಪಕ ಅಧ್ಯಕ್ಷ ಬಿ.ಎಂ. ಕುಮಾರ್‌, ಓಂಕಾರೇಗೌಡ, ಎಲ್‌.ವಿ. ಕೃಷ್ಣಮೂರ್ತಿ, ಕಸಾಪ ತಾಲೂಕು ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.