ತೌಕ್ತೆ ಚಂಡಮಾರುತ ಹಾನಿ ವರದಿ ಕೇಂದ್ರಕ್ಕೆ ಸಲ್ಲಿಕೆ
Team Udayavani, Jun 20, 2021, 8:54 PM IST
ಚಿಕ್ಕಮಗಳೂರು: ಚಂಡಮಾರುತದಿಂದ ಜಿಲ್ಲೆಯಲ್ಲಿ ಹಾನಿಯಾದ ರಸ್ತೆಗಳ ಪರಿಶೀಲನೆ ನಡೆಸಲಾಗಿದ್ದು, ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರದ ವಿಪತ್ತು ಮತ್ತು ನಿರ್ವಹಣಾ ತಂಡದ ಆಯುಕ್ತ ಮನೋಜ್ ರಾಜನ್ ತಿಳಿಸಿದರು.
ಶನಿವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅ ಧಿಕಾರಿಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ಮೇ ತಿಂಗಳಿನಲ್ಲಿ ತೌಖೆ ಚಂಡಮಾರುತದಿಂದ ಉಂಟಾದ ಹಾನಿಯ ಕುರಿತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಮಾಹಿತಿಯನ್ನು ಆಧರಿಸಿ 5 ಇಲಾಖೆಗಳನ್ನು ಒಳಗೊಂಡ ತಜ್ಞರ ತಂಡವು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ ಎಂದರು.
ಕಾರವಾರದಿಂದ ಆಗಮಿಸಿದ ತಂಡವು ಎರಡು ವಿಭಾಗಗಳಾಗಿ ಒಂದು ತಂಡ ಉತ್ತರ ಕನಾಟಕದ ಕಡೆ ತೆರಳಿದರೆ, ಮತ್ತೂಂದು ತಂಡವು ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತೌಖೆ¤ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದೆ ಎಂದ ಅವರು, ರಾಜ್ಯದಲ್ಲಿ 209 ಕೋಟಿ ನಷ್ಟವಾಗಿರುವುದರ ಬಗ್ಗೆ ವರದಿ ನೀಡಿದ್ದು, ಪ್ರಕೃತಿ ವಿಕೋಪ ನಿಯಮದನ್ವಯ 10 ಕೋಟಿ 63 ಲಕ್ಷ ರೂ. ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.
ವಿಪತ್ತು ನಿರ್ವಹಣೆಯಿಂದ ಉಂಟಾಗುವ ಹಾನಿಯನ್ನು ನಿಯಂತ್ರಿಸು ವುದು ಮುಖ್ಯ ಉದ್ದೇಶವಾಗಿದೆ. ನದಿ ಪಕ್ಕದಲ್ಲಿ ಯಾವೆಲ್ಲಾ ಗ್ರಾಮಗಳು ಮುಳುಗಡೆಯಾಗುತ್ತದೆ ಎಂಬುದನ್ನು ಗುರುತಿಸಿ ಅದಕ್ಕೆ ಅನುಗುಣವಾಗಿ ಜಿಲ್ಲೆಯಲ್ಲಿ ಯಾವ ಯಾವ ಕ್ರಮಗಳನ್ನು ಕೈಗೊಳ್ಳಬಹು ದು ಎಂದು ತಿಳಿಸಿದ್ದೇವೆ ಎಂದರು. ವಿಪತ್ತು ನಿರ್ವಹಣೆಯಲ್ಲಿ ಗ್ರಾಪಂ ಮಟ್ಟದಲ್ಲಿ ಸಮುದಾಯವು ಒಳಗೊಂಡಂತೆ ಪೂರ್ವ ತಯಾರಿ, ತಂಡಗಳ ರಚನೆ, ಸ್ವಯಂ ಸೇವಕರಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದ 924 ಗ್ರಾಪಂ ಮಟ್ಟದಲ್ಲಿ ವಿಪತ್ತು ನಿರ್ವಾಹಣೆಗಾಗಿ ತರಬೇತಿಯನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿಯೂ ಕೂಡ ಉಂಟಾಗಬಹುದಾದ ರಸ್ತೆ, ವಿದ್ಯುತ್ ಸಂಪರ್ಕ ಕಡಿತ ಸೇರಿದಂತೆ ವಿಪತ್ತಿನಿಂದ ಸಂಭವಿಸಬಹುದಾದ ಹಾನಿಗಳನ್ನು ನಿಯಂತ್ರಿಸುವಲ್ಲಿ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು ಹಾಗೂ ವಿಪತ್ತು ನಿರ್ವಹಣೆಯನ್ನು ಸಮರ್ಥವಾಗಿ ಎದುರಿಸುವ ಜಿಲ್ಲೆಗಳಿಗೆ ಅಂಕಗಳನ್ನು ನೀಡಲಾಗುವುದು ಎಂದರು.
ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ಮಾತನಾಡಿ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಪರ ಜಿಲ್ಲಾ ಧಿಕಾರಿ ಬಿ.ಆರ್. ರೂಪ, ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಎಸ್. ಪೂವಿತ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಎಂ.ಎಚ್. ಅಕ್ಷಯ್, ಉಪವಿಭಾಗಾ ಧಿಕಾರಿ ಡಾ| ಎಚ್.ಎಲ್. ನಾಗರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.