ಕಾಫಿ ಮಂಡಳಿ ಕಚೇರಿ ಮುಚ್ಚಲು ಬೆಳೆಗಾರರ ವಿರೋಧ
ಪ್ರಾದೇಶಿಕ ಕಚೇರಿ ರದ್ದತಿ ಪ್ರಸ್ತಾಪ ಹಿಂಪಡೆಯದಿದ್ದರೆ ದೆಹಲಿ ಮಾದರಿ ಹೋರಾಟದ ಎಚ್ಚರಿಕೆ
Team Udayavani, Feb 2, 2021, 3:33 PM IST
ಚಿಕ್ಕಮಗಳೂರು: ಕಾಫಿ ಮಂಡಳಿ ಝೋನಲ್ ಕಚೇರಿ ರದ್ದತಿ ಪ್ರಸ್ತಾಪ ಹಿಂಪಡೆಯದಿದಲ್ಲಿ ಮುಂದಿನ ದಿನಗಳಲ್ಲಿ ದೆಹಲಿ ರೈತರ ಹೋರಾಟದ ಮಾದರಿಯಲ್ಲಿ ಜಿಲ್ಲೆಯಲ್ಲಿ ಹೋರಾಟ ರೂಪಿಸಲಾಗುವುದು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್. ದೇವರಾಜ್ ಎಚ್ಚರಿಸಿದರು. ಸೋಮವಾರ ನಗರದ ಜಿಪಂ ಸಮೀಪದಲ್ಲಿರುವ ಕಾಫಿ ಮಂಡಳಿಗೆ ಮುತ್ತಿಗೆ ಹಾಕಿದ ಕಾಫಿ ಬೆಳೆಗಾರರು ಝೋನಲ್ ಕಚೇರಿ ರದ್ದತಿ ಪ್ರಸ್ತಾಪ
ಹಿಂಪಡೆಯಬೇಕು ಹಾಗೂ ಕಾಫಿ ಬೆಳೆಗಾರರ ನೆರವಿಗೆ ಕಾಫಿಮಂಡಳಿ ಬರಬೇಕು ಎಂದು ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಅವರು
ಮಾತನಾಡಿದರು.
ಅತಿವೃಷ್ಟಿ, ಅಕಾಲಿಕ ಮಳೆ, ಬೆಲೆ ಕುಸಿತ, ಕಾರ್ಮಿಕರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಇಂದು ಕಾಫಿ ಬೆಳೆಗಾರರು ನಲುಗಿ ಹೋಗಿದ್ದಾರೆ. ಕಾಫಿ ಉದ್ಯಮವೇ ನಶಿಸುವ ಸ್ಥಿತಿಗೆ ಬಂದಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಕಾಫಿ ಬೆಳೆಗಾರರ ನೆರವಿಗೆ ಬರಬೇಕಾದ ಕಾಫಿ ಮಂಡಳಿ ಕಣ್ಮುಚ್ಚಿಕೊಂಡಿದ್ದು ನಷ್ಟದ ನೆಪವೊಡ್ಡಿ ಝೋನಲ್ ಕಚೇರಿಗಳನ್ನು ಮುಚ್ಚಲು ಮುಂದಾಗಿರುವುದು ಎಷ್ಟರ ಮಟ್ಟಿಗೆ ಸರಿ
ಎಂದು ಪ್ರಶ್ನಿಸಿದರು.
ಝೋನಲ್ ಕಚೇರಿಗಳಿಂದ ಸಣ್ಣಪುಟ್ಟ ಕಾಫಿ ಬೆಳೆಗಾರರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಕಾಫಿ ಬೆಳೆಗಾರರಿಗೆ ಸಿಗುವ ಸಬ್ಸಿಡಿ, ಕಾμಗಿಡ, ರೈತರಿಗೆ ಸಿಗುವ ರಸಗೊಬ್ಬರ ಮಾಹಿತಿ ಸ್ಥಳೀಯವಾಗಿ ದೊರೆಯುವುದರಿಂದ ಸಣ್ಣ ಬೆಳೆಗಾರರಿಗೆ ನೆರವಾಗಿತ್ತು. ಈಗ ಈ ಕಚೇರಿಗಳನ್ನು
ರದ್ದುಪಡಿಸುವುದರಿಂದ ಸಣ್ಣ ಮತ್ತು ಅತೀ ಸಣ್ಣ ರೈತರು ದೂರದ ಪ್ರದೇಶದಿಂದ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಲಿದೆ.
ಇದರಿಂದ ಹಣ ಮತ್ತು ಸಮಯದ ವ್ಯರ್ಥವಾಗಲಿದೆ ಹಾಗೂ ಸಮಯಕ್ಕೆ ಸರಿಯಾಗಿ ಅಧಿರಿಗಳು ಲಭ್ಯವಾಗದಿರುವುದರಿಂದ ಕಚೇರಿಗೆ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕಚೇರಿಗಳನ್ನು ಮುಚ್ಚಬಾರದು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಸಂಪೂರ್ಣ ರೈತ ವಿರೋಧಿಯಾಗಿದೆ. ಕಳೆದ ಎರಡು ತಿಂಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ
ನಡೆಸುತ್ತಿದ್ದಾರೆ. ಅನೇಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೂ ಸರ್ಕಾರ ಅವರ ಮೇಲೆ ಜಲ ಪಿರಂಗಿ ಗುಂಡು ಹೊಡೆಯುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅದೇ ರೀತಿ ಕಾಫಿ ಬೆಳೆಗಾರರನ್ನು ಕೂಡ ನಿರ್ಲಕ್ಷ ಮಾಡಲಾಗುತ್ತಿದೆ ಎಂದು
ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಇಬ್ರಾಹಿಂ ಅವರ ರಾಜ್ಯದ 26 ಸಂಸದರು ಜನರ ರಕ್ಷಣೆಗಾಗಿ ಇಲ್ಲ, ಅವರೆಲ್ಲ ಭಕ್ಷಕರಾಗಿದ್ದಾರೆ ಎಂದು ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, ಸಂಸದೆ ಶೋಭಾ ಕರಂದ್ಲಾಜೆ 2 ಬಾರಿ ಸಂಸದರಾಗಿದ್ದಾರೆ. ಇದುವರೆಗೂ ಕಾಫಿ ಬೆಳೆಗಾರರ ಸಮಸ್ಯೆ ಬಗ್ಗೆ ಮಾತನಾಡಿಲ್ಲ ಎಂದ ಅವರು, ಎಲ್ಲಿ ಕೋಮು ಗಲಭೆ ನಡೆಯುತ್ತಿದೆಯೋ ಅಲ್ಲಿ ಹಾಜರಾಗುವುದಷ್ಟೇ ಅವರ ಕೆಲಸವಾಗಿದೆ ಎಂದು ಟೀಕಿಸಿದರು.
ಬೆಳೆಗಾರರು ಬ್ಯಾಂಕ್‌ಗಳಲ್ಲಿ ಸಾಲ ಪಡೆದುಕೊಂಡಿದ್ದು, ಸಾಲ ಮರುಪಾವತಿ ಮಾಡದ ಸ್ಥಿತಿಯಲ್ಲಿ ಬೆಳೆಗಾರರಿದ್ದಾರೆ. ಬ್ಯಾಂಕ್‌ಗಳು ಸಾಲ ಸೂಲಿಗೆ ನೋಟಿಸ್ ನೀಡುತ್ತಿವೆ. ಯಾರೂ ಧೃತಿಗೆಡಬಾರದು ಎಂದ ಅವರು, ಶೋಭಾ ಕರಂದ್ಲಾಜೆ ಪಾರ್ಲಿಮೆಂಟ್‌ನಲ್ಲಿ ಬೆಳೆಗಾರರ ಪರಧ್ವನಿ
ಎತ್ತದೆ ಬೆಳೆಗಾರರಿಗೆ ಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಫಿ ಬೆಳೆಗಾರ ಎಂ.ಎಸ್. ಭೋಜೇಗೌಡ ಅವರೇ ಮಂಡಳಿ ಅಧ್ಯಕ್ಷರಾಗಿದ್ದಾರೆ. ಬೆಳೆಗಾರರ ಸಮಸ್ಯೆ ಅರಿತು ಝೋನಲ್ ಕಚೇರಿಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಮುಚ್ಚಲು ಮುಂದಾದರೆ ದೆಹಲಿ ರೈತರ ಹೋರಾಟ ಮಾದರಿಯಲ್ಲಿ ಹೋರಾಟ ನಡೆಸುವುದಾಗಿ ಹೇಳಿದರು.
ಕಾಫಿ ಬೆಳೆಗಾರ ಎಚ್.ಎಂ. ಕೃಷ್ಣೇಗೌಡ ಮಾತನಾಡಿ, ಕಾ ಪಿ ಬೆಳೆಗಾರರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಪಡೆದುಕೊಳ್ಳಲು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಈ ಕಚೇರಿಗಳಿಂದ ಅನುಕೂಲವಾಗುತ್ತಿದೆ. ಯಾವುದೇ ಕಾರಣಕ್ಕೂ ಕಚೇರಿಗಳನ್ನು
ರದ್ದುಪಡಿಸಬಾರದು ಎಂದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್. ಚಂದ್ರಪ್ಪ, ಮಂಜಪ್ಪ, ಯುವ ಘಟಕದ ಜಿಲ್ಲಾಧ್ಯಕ್ಷ ವಿನಯ್‌ರಾಜ್, ಹೊಲದಗದ್ದೆ ಗಿರೀಶ್, ಹುಣಸೆಮಕ್ಕಿ ಗಣೇಶ್, ಎಂ.ಡಿ. ರಮೇಶ್, ಜಯರಾಜ್ ಅರಸ್, ರವಿ ನಿಡುವಾಳೆ ಮತ್ತಿತರರು ಇದ್ದರು.
ಓದಿ : ಮಹಾನಗರ ಪಾಲಿಕೆ ಟೌನ್ ಪ್ಲಾನಿಂಗ್ ನ ಜಂಟಿ ನಿರ್ದೇಶಕ ಜಯರಾಜ್ ಅವರ ಮನೆ ಮೇಲೆ ಎಸಿಬಿ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.