ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಜನ್ಮದಿನಾಚರಣೆ

Team Udayavani, Jun 25, 2021, 10:42 PM IST

25-15

ಕಡೂರು : ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರ 68 ನೇ ಜನ್ಮದಿನವನ್ನು ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಅಲ್ಲಲ್ಲಿ ಸಡಗರ- ಸಂಭ್ರಮದಿಂದ ಆಚರಿಸಲಾಯಿತು. 68 ನೇ ವಯಸ್ಸಿಗೆ ಪಾದಾರ್ಪಣೆ ಮಾಡಿದ ದತ್ತ ಅವರು ತಮ್ಮ ಸುದೀರ್ಘ‌ ರಾಜಕೀಯ ಜೀವನದಲ್ಲಿ ಮಾಜಿ ಪ್ರದಾನಿ ಎಚ್‌.ಡಿ.ದೇವೆಗೌಡರ ಮಾನಸ ಪುತ್ರ ಎಂದೇ ಖ್ಯಾತಿ ಪಡೆದಿದ್ದಾರೆ.

ಕಡೂರು ಕ್ಷೇತ್ರದಲ್ಲಿ ಅವರ ಅಭಿಮಾನಿಗಳು, ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ವಿವಿಧ ರೀತಿಯಲ್ಲಿ ದತ್ತ ಅವರ ಜನ್ಮದಿನವನ್ನು ಆಚರಿಸಿದರು. ಪಟ್ಟಣದ ರಾಜೀವ್‌ ಗಾಂಧಿ  ಬಡಾವಣೆಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಯುವ ಮುಖಂಡ ಕೆ.ವಿ. ಮಂಜುನಾಥ್‌ ಅಭಿಷೇಕ ಮಾಡಿ ನಂತರ ಬೆಣ್ಣೆ ಅಲಂಕಾರ ಮಾಡಿ ದತ್ತ ಅವರ ಕುಟುಂಬಕ್ಕೆ ಆರೋಗ್ಯ ಸಮೃದ್ಧಿ ನೀಡಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದರು. ಪಟ್ಟಣದ ಕುವೆಂಪು ನಗರದ ಸಂತೆ ಮೈದಾನದ ಶ್ರೀ ಅಂತರಘಟ್ಟಮ್ಮ ದೇವಾಲಯದಲ್ಲಿ ದತ್ತ ಅವರ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.

ರೈಲ್ವೆ ಗೇಟ್‌ ಬಳಿ ಅವರ ಅಭಿಮಾನಿ ವಿಷ್ಣು ತಮ್ಮ ಬಾಳೆಮಂಡಿಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಪ್ರತಿಯೊಬ್ಬರಿಗೂ ಬಾಳೆಹಣ್ಣನ್ನು ಉಚಿತವಾಗಿ ನೀಡಿದರು. ಎಂಎಸ್‌ಆರ್‌ ವೃತ್ತದಲ್ಲಿರುವ ರಸುಲ್‌ ಎಂಬ ಮುಸ್ಲಿಂ ಕಾರ್ಯಕರ್ತ ತಮ್ಮ ನಾಯಕ ದತ್ತ ಅವರ ಜನ್ಮದಿನವನ್ನು ಜನರಿಗೆ ಬಾದಾಮಿ ಹಾಲು ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು. ಈ ಮದ್ಯೆ ರಾಜ್ಯ ಯುವ ಜನತಾದಳದ ಪ್ರಧಾನ ಕಾರ್ಯದರ್ಶಿ ಸಿ.ಎಚ್‌. ಪ್ರೇಮ್‌ಕುಮಾರ್‌ ಸುಮಾರು 20 ಜನರಿಗೆ ಆಹಾರ ಪದಾರ್ಥಗಳ ಕಿಟ್‌ ಹಾಗೂ ಸಿಹಿಯನ್ನು ಹಂಚಿ ಆಚರಿಸಿದರು.

ತಾಲೂಕಿನ ವಿವಿಧೆಡೆ ದತ್ತ ಅವರ ಜನ್ಮದಿನ ಆಚರಿಸಿದ ಮಾಹಿತಿ ಲಭಿಸಿದ್ದು ಉಡುಗೆರೆಯಲ್ಲಿ ಯುವ ಮುಖಂಡ ಚಂದನ್‌ ನೇತೃತ್ವದಲ್ಲಿ, ಕಂಸಾಗರದಲ್ಲಿ ರೇವಣ್ಣ, ಚನ್ನವೀರಪ್ಪ ಅವರ ನೇತೃತ್ವದಲ್ಲಿ ಹಾಗೂ ಯಗಟಿಪುರದಲ್ಲಿ ಯುವ ಮುಖಂಡರ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.

ಪುರಸಭೆಯ ಸದಸ್ಯ ಮನು ಮರುಗುದ್ದಿ, ಪಿಸಿ ಗಂಗಾಧರ್‌, ಅಂಚೆ ಚೋಮನಹಳ್ಳಿ ಮಂಜು, ಮನೋಜ್‌ ಗೌಡ, ದರ್ಗಾ ಸಮಿತಿಯ ಸೈಯದ್‌ ಮುಜೀಬ್‌, ರಸೆಲ್‌,ಫರಾಕ್‌, ಚೋಟ್‌, ತಬರಸ್‌, ಅಡಕೆ ಸಮೀಹುಲ್ಲಾ ಇತ್ತಿತರರು ಆಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.