ಸಾಂಕ್ರಾಮಿಕ ರೋಗ ತಡೆಗೆ ಕ್ರಮ ವಹಿಸಿ


Team Udayavani, Jul 1, 2021, 10:22 PM IST

1-19

ಚಿಕ್ಕಮಗಳೂರು: ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜನಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗ ಡೆಂಘೀ, ಮಲೇರಿಯಾ, ಚಿಕೂನ್‌ಗುನ್ಯಾ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌, ನಗರಾಭಿವೃದ್ಧಿ ಪ್ರಾ ಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಮೀನುಗಾರಿಕೆ, ಕೈಗಾರಿಕೆ, ನೀರಾವರಿ, ಕಂದಾಯ ಗಣಿ ಮತ್ತು ಭೂವಿಜ್ಞಾನ, ರಾಜ್ಯ ರಸ್ತೆ ಸಾರಿಗೆ, ಮಾಲಿನ್ಯ ನಿಯಂತ್ರಣ ಮಂಡಳಿ, ಪಶುಸಂಗೋಪನೆ, ಪ್ರವಾಸೋದ್ಯಮ, ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಇತರೆ ಇಲಾಖೆಗಳು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಘನತ್ಯಾಜ್ಯ ಸಮರ್ಪಕವಾಗಿ ವಿಲೇವಾರಿಯಾಗಬೇಕು. ರೋಗ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಸೊಳ್ಳೆನಾಶಕ ದ್ರಾವಣ ಸಿಂಪಡಣೆ, ಉದ್ಯಾನವನಗಳಲ್ಲಿ ನೀರು ಸಂಗ್ರಹವಾಗದಂತೆ ನಿರ್ವಹಿಸಬೇಕು. ಮೀನುಗಾರಿಕೆ ಇಲಾಖೆ ಸಹಕಾರದೊಂದಿಗೆ ಲಾರ್ವ ಹಾರಿ ಮೀನುಮರಿಗಳನ್ನು ಬಿಡಬೇಕು ಎಂದು ಪೌರಾಯುಕ್ತ ಬಿ.ಸಿ. ಬಸವರಾಜ್‌ ಅವರಿಗೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರ ಪಾತ್ರ ಮಹತ್ವದಾಗಿದೆ. ಶಾಲೆಗಳಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ನಿಯಂತ್ರಣದ ಬಗ್ಗೆ ಪಠ್ಯಕ್ರಮ ಅಳವಡಿಸಬೇಕು. ಶಾಲಾ ಆವರಣದಲ್ಲಿ ಸ್ವತ್ಛತೆ ಹಾಗೂ ನೈಮಲ್ಯì ಕಾಪಾಡುವುದು. ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲೂ ಜಾಗೃತಿ ಮೂಡಿಸಬೇಕು ಎಂದರು.

ಮನೆಗಳ ಮುಂದೆ ಚರಂಡಿ, ಕಲ್ಲುಕ್ವಾರಿ, ಕುಡಿಯುವ ನೀರಿನ ಬಾವಿಗಳು, ನೀರಿನ ತೊಟ್ಟಿ, ಬಸ್‌ ಡಿಪೋಗಳಲ್ಲಿ ಅನುಪಯುಕ್ತವಾಗಿರುವಂತಹ ಟೈರ್‌ಗಳಲ್ಲಿ, ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾ ಧಿಕಾರಿ ಡಾ|ಹರೀಶ್‌ಬಾಬು ಮಾತನಾಡಿ, ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಸಾಚರಣೆಯನ್ನು ಜೂನ್‌ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಲೇರಿಯಾ ನಿವಾರಣೆಗೆ ಮುನ್ನೆಚ್ಚರಿಕೆ ಹಾಗೂ ನಿಯಂತ್ರಣ ವಿಧಾನಗಳೇ ನಮ್ಮ ಅಸ್ತ್ರವಾಗಬೇಕು ಎಂದ ಅವರು, ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್‌, ಜಿಲ್ಲಾ ಸರ್ಜನ್‌ ಡಾ|ಮೋಹನ್‌ ಕುಮಾರ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.