ಉತ್ತಮ ಯೋಜನೆಗಳಿಗೆ ಹಣ ವಿನಿಯೋಗಿಸಿ


Team Udayavani, Jul 6, 2021, 10:08 PM IST

6-18

ಚಿಕ್ಕಮಗಳೂರು: ಶಾಸಕರ ಪ್ರದೇಶಾಭಿವೃದ್ಧಿ ನಿಧಿ  14.78 ಕೋಟಿ ರೂ. ಹಾಗೂ ಸಂಸದರ ನಿ ಧಿಯಿಂದ ಮಂಜೂರಾಗಿರುವ 8.30 ಕೋಟಿ ರೂ. ಅನುದಾನ ಖರ್ಚಾಗದೇ ಹಾಗೇ ಉಳಿದಿದ್ದು ಶೀಘ್ರ ಅಧಿಕಾರಿಗಳು ಜಿಲ್ಲೆಯಲ್ಲಿ ಉತ್ತಮ ಯೋಜನೆಗಳಿಗೆ ವಿನಿಯೋಗಿಸಬೇಕು.

ಇಲ್ಲದಿದ್ದರೆ ಅನುದಾನ ಸರ್ಕಾರಕ್ಕೆ ಹಿಂದುರುಗಿ ಹೋಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖೀಕ ಖಾತೆ ಸಚಿವ ನಾರಾಯಣ ಗೌಡ ಅ ಧಿಕಾರಿಗಳಿಗೆ ತಿಳಿಸಿದರು.

ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖೀಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿ , ಸಂಸದರ ನಿಧಿ  ಹಾಗೂ ರಾಜ್ಯಸಭಾ ಸದಸ್ಯರ ನಿಧಿಯಿಂದ ಜಿಲ್ಲೆಗೆ ವಿವಿಧ ಕಾಮಗಾರಿಗಳಿಗಾಗಿ ಮಂಜೂರಾದ ಅನುದಾನ ಅಧಿ ಕಾರಿಗಳ ನಿರ್ಲಕ್ಷéದಿಂದ ಹಾಗೆಯೇ ಉಳಿದಿದೆ.

ಸಕಾಲದಲ್ಲಿ ಅಧಿ ಕಾರಿಗಳು ಕ್ರಿಯಾಯೋಜನೆ ಸಲ್ಲಿಸದ ಪರಿಣಾಮ ಅನುದಾನದ ಸದ್ಬಳಕೆ ಸಾಧ್ಯವಾಗಿಲ್ಲ. ಶೀಘ್ರ ಖರ್ಚು ಮಾಡದಿದ್ದ ಅನುದಾನ ಸರ್ಕಾರಕ್ಕೆ ಹಿಂದುರುಗಲಿದೆ. ಆದ್ದರಿಂದ ಸಂಬಂಧಿ ಸಿದ ಇಲಾಖಾಧಿಕಾರಿಗಳು ಜಿಲ್ಲೆಯಲ್ಲಿರುವ ಅಗತ್ಯ ಇರುವ ಕಾಮಗಾರಿಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಶೀಘ್ರ ಅನುದಾನದ ಸದ್ಬಳಕೆಗೆ ಮುಂದಾಗಬೇಕು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕಿ ಮುಂಜುಳಾ ಹುಲ್ಲಹಳ್ಳಿ ಮಾತನಾಡಿ, ಖೇಲೋ ಇಂಡಿಯಾ ಯೋಜನೆಯಡಿ ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಸಿಂಥಟಿಕ್‌ ಟ್ರಾÂಕ್‌ ನಿರ್ಮಾಣಕ್ಕೆ 7 ಕೋಟಿ ರೂ. ಮಂಜೂರಾಗಿದ್ದು, ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಚಿಕ್ಕಮಗಳೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪೆವಿಲಿಯನ್‌ ನಿರ್ಮಾಣಕ್ಕೆ 1.20 ಕೋಟಿ ರೂ. ಮಂಜೂರಾಗಿದ್ದು, 30 ಲಕ್ಷ ರೂ. ಬಿಡುಗಡೆಯಾಗಿದೆ. ಕಾಮಗಾರಿ ಶೀಘ್ರ ಆರಂಭವಾಗಲಿದೆ.

ಮೂಡಿಗೆರೆ ಪಟ್ಟಣದ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 1.20 ಕೋಟಿ ರೂ. ಮಂಜೂರಾಗಿದ್ದು, 40 ಲಕ್ಷ ರೂ. ಬಿಡು ಗಡೆಯಾಗಿದೆ. ಕಡೂರು ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 31ಲಕ್ಷ ರೂ. ಮಂಜೂರಾಗಿದ್ದು, 20 ಲಕ್ಷ ರೂ. ಬಿಡುಗಡೆಯಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. 2020-21ನೇ ಸಾಲಿನಲ್ಲಿ ಕ್ರೀಡಾ ಇಲಾಖೆಯಿಂದ ನಗರದಲ್ಲಿ ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ 150 ಕೋಟಿ ರೂ. ಹಾಗೂ ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೆ 50ಲಕ್ಷ ರೂ. ಬಿಡುಗಡೆಯಾಗಿದೆ.

ಅಯ್ಯನಕೆರೆಯಲ್ಲಿ ಜಲಸಾಹಸ ಕ್ರೀಡೆಗಳ ಅಭಿವೃದ್ಧಿಗೆ 4.50 ಕೋಟಿ. ರೂ. ಅನುದಾನ ಮಂಜೂರಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಶಾಸಕ ಸಿ.ಟಿ. ರವಿ ಮಾತನಾಡಿ, ಜಿಲ್ಲಾ ಶತಮಾನೋತ್ಸವನ ಕ್ರೀಡಾಂಗಣದಲ್ಲಿರುವ ಸಿಂಥಟಿಕ್‌ ಟ್ರಾÂಕ್‌ ಸಂಪೂರ್ಣವಾಗಿ ಹಾಳಾಗಿದೆ. ಈ ಕಾರಣಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಬಳಿ ಚರ್ಚಿಸಿ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರಿಂದ 7 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.

ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಮೂಡಿಗೆರೆ ಪಟ್ಟಣದ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 1.20 ಕೋಟಿ ರೂ. ಮಂಜೂರಾಗಿದ್ದು, ಕ್ರೀಡಾಂಗಣದಲ್ಲಿ ಓಪನ್‌ ಥಿಯೇಟರ್‌ ನಿರ್ಮಾಣಕ್ಕೆ ಹೆಚ್ಚುವರಿ 50 ಲಕ್ಷ ರೂ. ವೆಚ್ಚದಲ್ಲಿ ಕ್ರಿಯಾಯೋಜನೆಗೆ ಸಲ್ಲಿಸಲು ಸೂಚಿಸಿದ್ದು, ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿಲ್ಲ ಎಂದರು. ಮಧ್ಯ ಪ್ರವೇಶಿಸಿದ ಸಚಿವ ನಾರಾಯಣ ಗೌಡ 1.20 ಕೋಟಿ ರೂ. ಕ್ರಿಯಾ ಯೋಜನೆಗೆ ಹೆಚ್ಚುವರಿ 50 ಲಕ್ಷ ರೂ. ಅನುದಾನ ಸೇರಿಸಿ ಪರಿಷ್ಕೃತ ಕ್ರಿಯಾಯೋಜನೆ ಸಲ್ಲಿಸಬೇಕೆಂದು ಸಂಬಂ ಧಿಸಿದ ಇಂಜಿನಿಯರ್‌ಗೆ ಸೂಚಿಸಿದರು.

ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಮಾತನಾಡಿ, ಯೋಜನೆ ಅನುಷ್ಠಾನಕ್ಕೆ ಅರಣ್ಯ ಇಲಾಖೆಯಿಂದ ಸಮಸ್ಯೆ ಇತ್ತು. ಈ ಸಮಸ್ಯೆ ಪರಿಹಾರಕ್ಕೆ ಇಲಾಖಾಧಿಕಾರಿಗಳೊಂದಿಗೆ ಮಾತನಾಡಿದ್ದು, ಅರಣ್ಯ ಇಲಾಖೆಯ ಜಾಗದ ಬಳಕೆ ಹಿನ್ನೆಲೆಯಲ್ಲಿ 37 ಎಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಯೋಜನೆ ಅನುಷ್ಠಾನಕ್ಕಿದ್ದ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.

ಸಚಿವ ನಾರಾಯಣ ಗೌಡ ಮಾತನಾಡಿ, ಖರ್ಚಾಗದೇ ಉಳಿದಿರುವ ಅನುದಾನದಲ್ಲಿ ಜಿಲ್ಲೆಯಲ್ಲಿ ಅಗತ್ಯ ಇರುವ ಯೋಜನೆಗಳ ಅನುಷ್ಠಾನಕ್ಕೆ ಶೀಘ್ರ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು. ಸಭೆಯಲ್ಲಿ ವಿಧಾನ ಪರಿಷತ್‌ ಉಪಾಧ್ಯಕ್ಷ ಎಂ.ಕೆ. ಪ್ರಾಣೇಶ್‌, ಕಡೂರು ಕ್ಷೇತ್ರದ ಶಾಸಕ ಬೆಳ್ಳಿಪ್ರಕಾಶ್‌, ಜಿಪಂ ಸಿಇಒ ಎಸ್‌. ಪೂವಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು ಇದ್ದರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.