ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ: ರಂಭಾಪುರಿ ಶ್ರೀ
Team Udayavani, Jul 8, 2021, 10:51 PM IST
ಬಾಳೆಹೊನ್ನೂರು: ಮನುಷ್ಯ ಜೀವನದಲ್ಲಿ ಆಶಾವಾದಿಯಾಗಿ ಬದುಕಬೇಕಲ್ಲದೇ, ನಿರಾಶಾವಾದಿ ಯಾಗಿ ಬಾಳಬಾರದು. ಸತ್ಕಾರ್ಯಗಳಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ|ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ತಿಪಟೂರು ಶ್ರೀ ಜಗದ್ಗುರು ರೇಣುಕ ಮಂದಿರದ ಆವರಣದಲ್ಲಿ ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಮಂಗಲ ಭವನದ ಭೂಮಿ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ವೀರಶೈವ ಧರ್ಮ ಉದಾತ್ತವಾದ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತಾ ಬಂದಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ವಿಶ್ವಬಂಧುತ್ವದ ಆದರ್ಶ ಚಿಂತನಗಳನ್ನು ಬೋಧಿಸಿದ್ದು ನಮ್ಮೆಲ್ಲರಿಗೆ ದಾರಿದೀಪ.
ಬಾಳೆಹೊನ್ನೂರು ಧರ್ಮ ಪೀಠದಿಂದ ನಗರದಲ್ಲಿ ಸಭಾಭವನ ನಿರ್ಮಾಣಗೊಳ್ಳಬೇಕೆಂಬ ಬಹಳ ದಿನಗಳ ಕನಸು ಇಂದು ಸಾಕಾರಗೊಳ್ಳುತ್ತಿರುವುದು ಸಂತೋಷದ ಸಂಗತಿ. ಸಾಸಲು ಮರುಳಸಿದ್ಧಪ್ಪ ಮತ್ತು ಮಕ್ಕಳು ದಾನ ಮಾಡಿದ ವಿಶಾಲ ನಿವೇಶನದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಲ ಭವನ ನಿರ್ಮಾಣಗೊಳಿಸುವ ಉದ್ದೇಶವಿದೆ. ಅವಿನಾಭಾವ ಸಂಬಂಧ ಹೊಂದಿದ ಶ್ರೀ ರಂಭಾಪುರಿ ಪೀಠದ ಸತ್ಕಾರ್ಯಗಳಿಗೆ ಭಕ್ತರ ಸಹಕಾರ ಅವಶ್ಯಕ. ಎಲ್ಲರ ಸಹಕಾರದಿಂದ ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸುವ ಉದ್ದೇಶವಿದೆ ಎಂದರು.
ಸಮಾರಂಭದಲ್ಲಿ ಪಾಲ್ಗೊಂಡ ಶಾಸಕ ಬಿ.ಸಿ.ನಾಗೇಶ ಮಾತನಾಡಿ, ಧರ್ಮ ಪೀಠಗಳ ಮಾರ್ಗದರ್ಶನ ನಮ್ಮೆಲ್ಲರಿಗೆ ಆಶಾಕಿರಣ. ಧಾರ್ಮಿಕ ಕಾರ್ಯಗಳ ಜೊತೆಗೆ ಜನಹಿತಾತ್ಮಕ ಕಾರ್ಯಗಳನ್ನು ರಂಭಾಪುರಿ ಪೀಠ ಮಾಡುತ್ತಾ ಬಂದಿದೆ. ಮಾನವ ಧರ್ಮಕ್ಕೆ ಜಯವಾಗಲೆಂಬ ಉದಾತ್ತ ಸಂದೇಶ ಶ್ರೀ ಪೀಠ ಕೊಟ್ಟಿದೆ. ನಿರ್ಮಾಣಗೊಳ್ಳಲಿರುವ ಮಂಗಲ ಭವನಕ್ಕೆ ಶಾಸಕರ ಅನುದಾನದಲ್ಲಿ ಸಹಕರಿಸುವುದಾಗಿ ತಿಳಿಸಿದರು.
ನೊಣವಿನಕೆರೆ ಕರಿವೃಷಭ ಶಿವಯೋಗಿಶ್ವರ ಸ್ವಾಮಿಗಳು, ದೊಡ್ಡಗುಣಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು, ಹೊನ್ನವಳ್ಳಿ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು. ನಗರಸಭಾಧ್ಯಕ್ಷ ರಾಮಮೋಹನ್, ನಗರಸಭಾ ಸದಸ್ಯ ಸಂಗಮೇಶ ಮುಖ್ಯ ಅತಿಥಿಗಳಾಗಿದ್ದರು.
ಮಹೇಶ್ವರಯ್ಯ, ಟಿ.ಎಸ್.ಪರಶಿವಯ್ಯ, ಉಮಾಪತಿ, ಎಸ್.ಎಂ. ಸರ್ವೇಶ ಸೇರಿದಂತೆ ವೀರಶೈವ ಸಮಾಜದ ಗಣ್ಯರು ಮತ್ತು ದಾನಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಗದಿಗೆಯ್ಯ ಹಿರೇಮಠರಿಂದ ವೇದಘೋಷ, ಗಂಗಾಧರಸ್ವಾಮಿ ಇವರಿಂದ ಭಕ್ತಿಗೀತೆ, ನಂದಕುಮಾರ್ ಸ್ವಾಗತಿಸಿ, ತೋಂಟದಾರ್ಯ ನಿರೂಪಿಸಿ, ಎನ್. ಬಸವಯ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.