ಪ್ರವಾಸಿ ತಾಣಗಳೀಗ ಫುಲ್ ರಶ್!
Team Udayavani, Jul 12, 2021, 10:26 PM IST
ಚಿಕ್ಕಮಗಳೂರು: ಕೋವಿಡ್ ಲಾಕ್‌ಡೌನ್‌ನಿಂದ ಮೌನ ವಹಿಸಿದ್ದ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಶನಿವಾರ ಮತ್ತು ಭಾನುವಾರ ಪ್ರವಾಸಿಗರು ಹಾಗೂ ಭಕ್ತರ ದಂಡೇ ಹರಿದು ಬಂದಿದೆ.
ಕೋವಿಡ್ ಸೋಂಕು ಉಲ್ಬಣಗೊಂಡ ಬಳಿಕ ಜಿಲ್ಲೆಯ ಪ್ರವಾಸಿ ತಾಣ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಯಾರೂ ಬರದಂತೆ ಜಿಲ್ಲಾಡಳಿತ ನಿರ್ಬಂಧ ವಿ ಧಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ದೇವಸ್ಥಾನಗಳು ಮತ್ತು ಪ್ರೇಕ್ಷಣೀಯ ಸ್ಥಳಗಳು ಬಿಕೋ ಎನ್ನುತ್ತಿದ್ದವು.
ಸದ್ಯ ಸರ್ಕಾರ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದ್ದು, ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಾ, ಕೆಮಣ್ಣುಗುಂಡಿ, ದೇವರ ಗುಡ್ಡ, ಗಾಳಿಕೆರೆ ಸೇರಿದಂತೆ ಧಾರ್ಮಿಕ ಕ್ಷೇತ್ರ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಮತ್ತು ಶೃಂಗೇರಿಯ ಶಾರದಾ ಪೀಠ, ಕಳಸೇಶ್ವರ ದೇವಸ್ಥಾನಗಳಿಗೆ ಭಕ್ತರ ದಂಡೇ ನೆರೆದಿತ್ತು. ಹೋಂ ಸ್ಟೇ, ರೆಸಾರ್ಟ್, ಲಾಡ್ ಗಳು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಕ ರ್ಯನಿರ್ವಹಿಸುವಂತೆ ಜಿಲ್ಲಾಡಳಿತ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಜನರು ಪ್ರೇಕ್ಷಣೀಯ ಸ್ಥಳಗಳಿಗೆ ಈ ವಾರಾಂತ್ಯದಲ್ಲಿ ಲಗ್ಗೆ ಇಟ್ಟಿದ್ದು, ಪ್ರೇಕ್ಷಣೀಯ ಸ್ಥಳಗಳಿಗೆ ಸಾಗುವ ಮಾರ್ಗಗ ಳಲ್ಲಿ ಟ್ರಾμಕ್ ಜಾಮ್ ಉಂಟಾಗಿದ್ದು ಅಲ್ಲಲ್ಲಿ ಕಂಡು ಬಂದಿದೆ.
ಶನಿವಾರ ಮತ್ತು ಭಾನುವಾರ ವಾರಾಂತ್ಯದ ರಜಾ ದಿನವಾದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕಿದ್ದು, ಸ್ಥಳೀಯರಿಗಿಂತ ಹೊರ ಜಿಲ್ಲೆ, ಹೊರರಾಜ್ಯಗಳಾದ ಆಂದ್ರಪ್ರದೇಶ, ಉತ್ತರ ಪ್ರದೇಶ, ಹರಿಯಾಣ, ಗೋವಾ, ತಮಿಳುನಾಡು, ಕೇರಳ ರಾಜ್ಯಗಳಿಂದಲೂ ಪ್ರವಾಸಿಗರು ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಇಲ್ಲಿಯ ಪ್ರಕೃತಿ ಸೌಂದರ್ಯವನ್ನು ಸವಿದಿದ್ದಾರೆ. ಈಗಾಗಲೇ ಜಿಲ್ಲಾದ್ಯಂತ ಮಳೆ ಆರಂಭವಾಗಿದ್ದು, ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಇದು ಸಕಾಲವಾಗಿದೆ. ಅದರಂತೆ ಕೋವಿಡ್ ಲಾಕ್‌ಡೌನ್ ನಿರ್ಬಂಧ ಸಡಿಲಗೊಂಡ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಸಿಗರ ದಂಡು ಹರಿದು ಬಂದಿದ್ದು, ಮುಳ್ಳಯ್ಯನಗಿರಿ, ದತ್ತಪೀಠ ಸುತ್ತಮುತ್ತಲ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಂಡರು.
ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಂಡು ನೆರೆದಿದ್ದ ಪರಿಣಾಮ ಇಲ್ಲಿನ ವ್ಯಾಪಾರ- ವಹಿವಾಟು ಚೇತರಿಕೆ ಕಂಡಿದೆ. ಒಮ್ಮೆದೇ ಭಾರೀ ಪ್ರಮಾಣದಲ್ಲಿ ಪ್ರವಾಸಿಗರು ರಾಜ್ಯ, ಹೊರರಾಜ್ಯದಿಂದ ಬಂದ ಪರಿಣಾಮ ಚಿಕ್ಕಮಗಳೂರು ನಗರದಲ್ಲೂ ವಾಹನ ದಟ್ಟಣೆ ಜಾಸ್ತಿಯಾಗಿತ್ತು. ಧಾರ್ಮಿಕ ಸ್ಥಳಗಳಲ್ಲೂ ಜನಸಾಗರ: ಕೋವಿಡ್ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರು ಪ್ರವೇಶಿಸದಂತೆ ರಾಜ್ಯ ಸರ್ಕಾರ ನಿರ್ಬಂಧ ವಿಧಿ ಸಿತ್ತು. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ನಿಯಮಗಳನ್ನು ಪಾಲಿಸಿಕೊಂಡು ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಹಾಗೂ ಶೃಂಗೇರಿ ಶಾರದಾ ಪೀಠ ಸೇರಿದಂತೆ ಇತರೆ ಧಾರ್ಮಿಕ ಕ್ಷೇತ್ರಗಳಿಗೂ ಶನಿವಾರ ಮತ್ತು ಭಾನುವಾರ ಭಕ್ತರ ದಂಡು ಹರಿದು ಬಂದಿದೆ.
ಚಾರ್ಮಾಡಿ ಘಾಟಿಯಲ್ಲಿ ಜಲಕನ್ಯೆಯರ ನರ್ತನ: 2-3 ದಿನಗಳಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಪಾತಗಳಲ್ಲಿ ನೀರಿನ ಹರಿವು ಜಾಸ್ತಿಯಾಗಿದ್ದು, ಪ್ರವಾಸಿಗರು ಜಿಲ್ಲೆಯ ಜಲಪಾತಗಳಿಗೆ ಮುಗಿ ಬೀಳುತ್ತಿದ್ದಾರೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ಸಾಗುವ ಮಾರ್ಗದ ಅಲ್ಲಲ್ಲಿ ಜನಕನ್ಯೆಯರು ನರ್ತಿಸುತ್ತಿದ್ದು ಈ ಪರಿಸರವನ್ನು ವೀಕ್ಷಿಸಲು ಜನ ಮುಗಿ ಬಿದ್ದಿದ್ದಾರೆ. ಜಲಪಾತಗಳನ್ನು ಕಣ್ತುಂಬಿಕೊಂಡು ಮೋಜು-ಮಸ್ತಿ ಮಾಡುತ್ತಿದ್ದಾರೆ.
ಹರಿದು ಬಂದ ಪ್ರವಾಸಿಗರು, ಸ್ಥಳಿಯರಲ್ಲಿ ಕೋವಿಡ್ ಭೀತಿ: ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆ ಕೋವಿಡ್ ಪಾಸಿಟಿವಿಟಿ ರೇಟ್‌ನಲ್ಲಿ ರಾಜ್ಯದಲ್ಲೇ ಅಗ್ರಸ್ಥಾನಕ್ಕೆ ಏರಿತ್ತು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ನಿರಂತರ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ರಾಜ್ಯಸರ್ಕಾರ ಲಾಕ್‌ಡೌನ್ ನಿರ್ಬಂಧಗಳನ್ನು ಜಿಲ್ಲೆಯಲ್ಲಿ ಸಡಲಿಕೆ ಮಾಡಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ವಾರಾಂತ್ಯದಲ್ಲಿ ಪ್ರವಾಸಿಗರ ದಂಡು ಹರಿದು ಬಂದಿದ್ದು, ಮತ್ತೆ ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಸುವ ಭೀತಿಯೂ ಸ್ಥಳೀಯರಲ್ಲಿ ಎದುರಾಗಿದೆ.
ಬಹುತೇಕ ಲಾಡ್ಜ್ ಗಳು, ಹೋಮ್ ಸ್ಟೇ, ರೆಸಾರ್ಟ್‌ಗಳಲ್ಲಿ ದೂರದ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ಹೊರರಾಜ್ಯದಿಂದ ಜನರು ಬಂದು ತಂಗುತ್ತಿರುವುದು ಸ್ಥಳೀಯರಲ್ಲಿ ಕೋವಿಡ್ ಭೀತಿಯನ್ನು ಉಂಟು ಮಾಡಿದೆ.
ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ ಪ್ರವಾಸಿಗರು: ಪ್ರವಾಸಿ ತಾಣಗಳಿಗೆ ಬೇಟಿನೀಡುವ ಪ್ರವಾಸಿಗರು ಕಡ್ಡಾಯವಾಗಿ ಕೋವಿಡ್ ನಿಯಮ ಗಳನ್ನು ಪಾಲನೆ ಮಾಡುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ. ಆದರೆ, ವಾರಾಂತ್ಯದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಪ್ರವಾಸಿಗರು ಸಾಮಾಜಿಕ ಅಂತರ ಉಲ್ಲಂಘಿಸಿ ಮಾಸ್ಕ್ ಧರಿಸದೆ ಮೈ ಮರೆತು ಪ್ರಕೃತಿ ಸೌಂದರ್ಯವನ್ನು ವೀಕ್ಷಿಸಿದರು.
ಟ್ರಾಫಿಕ್ ಜಾಮ್: ಜಿಲ್ಲೆಯ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಶನಿವಾರ 1,023 ಕಾರು, 425 ಬೈಕ್, 46 ಟಿಟಿ-ಮಿನಿ ಬಸ್‌ನಲ್ಲಿ ಸಾವಿರಾರು ಪ್ರವಾಸಿಗರು ಬಂದಿದ್ದು ಮುಳ್ಳಯ್ಯನಗಿರಿ ಪ್ರದೇಶಕ್ಕೆ ಸಾಗುವ ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಭಾನುವಾರ ಬೆಳಗ್ಗೆ 6ಗಂಟೆಯಿಂದ ಸಂಜೆವರೆಗೂ 496 ಬೈಕ್, 1,172 ಕಾರು, 56 ಟಿಟಿ ವಾಹನ ಮತ್ತು ಮಿನಿ ಬಸ್‌ಗಳಲ್ಲಿ 5 5 ರಿಂದ 6ಸಾವಿಕರಕ್ಕೂ ಹೆಚ್ಚು ಜನರು ಮುಳ್ಳಯ್ಯನಗಿರಿ ಮಾರ್ಗವಾಗಿ ಸಂಚರಿಸಿದ್ದು ಮಾರ್ಗದುದ್ದಕ್ಕೂ ಟ್ರಾμಕ್ ಜಾಮ್ ಉಂಟಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
Mundugaru:ನಕ್ಸಲ್ ಪೀಡಿತ ಪ್ರದೇಶದಲ್ಲಿ ಪೇಜಾವರ ಶ್ರೀಗಳ ಸಂಚಾರ; ಕಾಡಿನಲ್ಲಿ ರಾಮಮಂತ್ರ ಘೋಷ
Chikkamagaluru: ದತ್ತ ಜಯಂತಿ ಶೋಭಾಯಾತ್ರೆ ಆರಂಭ
MUST WATCH
ಹೊಸ ಸೇರ್ಪಡೆ
Highway: ಅಂಬಲಪಾಡಿ ಅಂಡರ್‌ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Malpe: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್ ನಾರ್ವೆಗೆ ಹಸ್ತಾಂತರ
Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್‌ನಲ್ಲಿ ಶೇ.1.89ಕ್ಕಿಳಿಕೆ
Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.