ಜೆಡಿಎಸ್‌ಗೆ ಮತ್ತೆ ಅಧಿಕಾರ
Team Udayavani, Jul 14, 2021, 9:23 PM IST
ಚಿಕ್ಕಮಗಳೂರು: ಜೆಡಿಎಸ್ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸುಧಾಕರ್ ಎಸ್. ಶೆಟ್ಟಿ ತಿಳಿಸಿದರು. ಸೋಮವಾರ ನಗರದ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ.
ಇಂಧನ, ಅಡುಗೆ ಅನಿಲ, ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ರೋಸಿ ಹೋಗಿದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅವ ಧಿಯ ಜನಪರವಾದ ಅಭಿವೃದ್ಧಿ ಕಾರ್ಯಗಳು ಮತ್ತು ಯೋಜನೆಗಳು ಜನರಿಗೆ ಮನವರಿಕೆಯಾಗಿದ್ದು ಜೆಡಿಎಸ್‌ರಾಜ್ಯದಲ್ಲಿ ಮತ್ತೆ ಅಧಿ ಕಾರ ಹಿಡಿಯಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
2013ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಪಕ್ಷದ ಜಿಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಈಗಿನಿಂದಲೇ ಸಕಲ ಸಿದ್ಧತೆ ನಡೆಸಬೇಕು. ತಳಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಲು ಮುಂದಾಗಬೇಕು. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.
ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಿ.ಬಿ. ನಿಂಗಯ್ಯ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಲಾಗುವುದು. ಪಕ್ಷ ಸದೃಢವಾಗಬೇಕಾದರೆ ಪಕ್ಷದ ವರಿಷ್ಠರು ಕಾರ್ಯಕರ್ತರ ನೋವು ಮತ್ತು ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್. ದೇವರಾಜ್ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿ ಸಬೇಕಾದರೆ ಹೊರಗಡೆಯಿಂದ ಬಂದವರನ್ನು ಮತ್ತು ಪಕ್ಷಕ್ಕೆ ಸಂಬಂಧವೇ ಇಲ್ಲದವರನ್ನು ಅಭ್ಯರ್ಥಿಗಳಾಗಿ ಮಾಡುವ ಪರಿಪಾಠವನ್ನು ಮೊದಲು ಕೈ ಬಿಡಬೇಕು ಮತ್ತು ಸ್ಥಳೀಯ ನಾಯಕರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಈಗಲೇ ಘೋಷಿಸಬೇಕು. ಮತ್ತು ಪಕ್ಷದಿಂದ ವಲಸೆ ಹೋದವರನ್ನು ಮತ್ತೆ ಪಕ್ಷಕ್ಕೆ ಕರೆತರಬೇಕು ಹಾಗೂ ಪಕ್ಷದಲ್ಲಿದ್ದು ತಟಸ್ಥರಾಗಿರುವರನ್ನು ವಿಶ್ವಾಸಕ್ಕೆ ಪಡೆದುಕೊಳ್ಳುವ ಕೆಲಸವಾಗಬೇಕು ಎಂದು ಹೇಳಿದರು.
ಸಭೆಯಲ್ಲಿ ಪಕ್ಷದ ಮುಖಂಡರಾದ ಜಿ.ಎಸ್. ಚಂದ್ರಪ್ಪ, ಹೊಲದಗದ್ದೆ ಗಿರೀಶ್, ಬೈರೇಗೌಡ, ಮಂಜಪ್ಪ, ಎಂ.ಡಿ.ರಮೇಶ್, ಕೃಷ್ಣೇಗೌಡ, ಜಯರಾಜ್ ಅರಸ್, ಸಿ.ಎನ್.ದೇವರಾಜ್ ಅರಸ್, ಜಾಕೀರ್ ಹುಸೇನ್, ಹಳೇಹಟ್ಟಿ ಆನಂದನಾಯ್ಕ, ಮಾನು ಮಿರಾಂಡ, ಹುಣಸೆಮಕ್ಕಿ ಲಕ್ಷ್ಮಣ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.