ಅಧಿಕಾರಿಗಳಿಂದ ಕಲ್ಲು ಕ್ವಾರಿ ಪರಿಶೀಲನೆ
ಹುಣಸೋಡು ಸ್ಫೋಟ ಘಟನೆ ಹಿನ್ನೆಲೆಕ್ರಷರ್ಗಳಿಗೆ ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಭೇಟಿ
Team Udayavani, Feb 6, 2021, 5:06 PM IST
ಚಿಕ್ಕಮಗಳೂರು: ಮಲೆನಾಡಿನ ಹೆಬ್ಟಾಗಿಲು ಎಂದು ಖ್ಯಾತಿ ಪಡೆದಿರುವ ಶಿವಮೊಗ್ಗ ಜಿಲ್ಲೆಯ ಹುಣಸೋಡು ಕಲ್ಲುಕ್ವಾರಿಯಲ್ಲಿ ಸ್ಫೋಟ ಪ್ರಕರಣ ಬಳಿಕ ಕಾಫಿನಾಡಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚೆತ್ತುಕೊಂಡು ಕಲ್ಲುಕ್ವಾರಿಗಳಲ್ಲಿ ಸ್ಫೋಟಕ ವಸ್ತು ಸಂಗ್ರಹಿ ಸಲಾಗಿದೆಯೇ ಪರವಾನಗಿ ಪಡೆಯಲಾಗಿದೆಯೇ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿ ಕಾರಿಗಳ ತಂಡ ಪರಿಶೀಲನೆಗೆ ಮುಂದಾಗಿದೆ.
ಜಿಲ್ಲೆಯ ತರೀಕೆರೆ ತಾಲೂಕು ಕಲ್ಲುಕ್ವಾರಿಯಿಂದ ಪೊಲೀಸ್ ಇಲಾಖೆ ಮತ್ತು ಹಿರಿಯ ಭೂವಿಜ್ಞಾನಿಗಳ ತಂಡ ಪರಿಶೀಲನೆ ಆರಂಭಗೊಳಿಸಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ, ಮೂರು ಮಂದಿ ತಾಂತ್ರಿಕ ಸಿಬ್ಬಂದಿ, ಪೊಲೀಸ್ ಇಲಾಖೆ ಠಾಣಾಧಿಕಾರಿ ಹಾಗೂ ಡಿವೈಎಸ್ಪಿ ತಂಡದಲ್ಲಿದ್ದರು.
ಕಲ್ಲುಕ್ವಾರಿ ಮತ್ತು ಕ್ರಷರ್ಗಳಿಗೆ ಭೇಟಿ ನೀಡಿ ಇಲಾಖೆಯಿಂದ ಅನುಮತಿ ಪಡೆಯಲಾಗಿದೆಯೇ, ಪರವಾನಗಿ ಇದ್ದರೂ ನವೀಕರಣ ಮಾಡಲಾಗಿದೆಯೇ, ಗಣಿಗಾರಿಕೆ ಅಧಿಕೃತವೋ, ಅನಧಿಕೃತವೋ, ಬಂಡೆ ಒಡೆಯಲು ಸೊ#ಧೀಟಕ ವಸ್ತುಗಳನ್ನು ಬಳಕೆ ಮಾಡಲಾಗುತ್ತಿದೆಯೇ, ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದೆಯೇ ಎಂದು ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ 87 ಕಲ್ಲು ಕ್ವಾರಿ ಇದ್ದು, 30ಕಲ್ಲು ಕ್ವಾರಿ ಎನ್ ಒಸಿ ಪಡೆದುಕೊಂಡಿವೆ. ಕೆಲ ಕಾರಣಗಳಿಂದ 22 ಕಲ್ಲುಕ್ವಾರಿ ಸ್ಥಗಿತಗೊಂಡಿವೆ. 10 ಅಲಂಕಾರಿಕಾ ಶಿಲೆ ತಗೆಯಲಾಗುತ್ತಿದೆ. 25 ಜನರು ಎನ್ಒಸಿಗೆ ಅರ್ಜಿ ಸಲ್ಲಿಸಿದ್ದಾರೆಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿ ಕಾರಿ ಎನ್.ಎಂ. ವಿಂಧ್ಯಾ ತಿಳಿಸಿದರು. ಜಿಲ್ಲೆಯಲ್ಲಿ 38 ಜಲ್ಲಿ ಕ್ರಷರ್ಗಳು ಕಾರ್ಯ ನಿರ್ವಹಿಸುತ್ತಿವೆ. 1 ಕ್ವಾರಿ ಸರ್ಕಾರಿ ಕೆಲಸಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಶಿವಮೊಗ್ಗ- ಅರಸೀಕೆರೆ ರಾಷ್ಟ್ರೀಯ ಹೆದ್ದಾರಿ 4ನೇ ಹಂತದ ರಸ್ತೆ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿಗೆ ಜಲ್ಲಿ ಪೂರೈಕೆ ಮಾಡುತ್ತಿದೆ ಎಂದು ತಿಳಿಸಿದರು. ಪರಿಶೀಲನಾ ತಂಡದಲ್ಲಿ
ತರೀಕೆರೆ ಡಿವೈಎಸ್ಪಿ ಏಗೇನಗೌಡರ್, ಪಿಎಸ್ಐ ಲಿಂಗರಾಜ್, ಭೂವಿಜ್ಞಾನಿಗಳಾದ ದಯಾನಂದ್, ವಸಂತ, ಕಾರ್ತಿಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.