ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ


Team Udayavani, Jul 19, 2021, 6:29 PM IST

19-18

ಕಡೂರು: ಕಡೂರು ತಾಲೂಕು ಕಡೂರು- ಬೀರೂರು ಶೈಕ್ಷಣಿಕ ವಲಯಗಳನ್ನು ಹೊಂದಿದ್ದು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿಶೇಷ ಕೋವಿಡ್‌ ನಿಯಮಗಳನ್ನು ಅಳವಡಿಸಿಕೊಂಡಿದ್ದು ಕೊರೊನಾ ಸೋಂಕಿರುವ ಇಬ್ಬರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಕಡೂರು ಬಿಇಒ ಜಿ. ರಂಗನಾಥಸ್ವಾಮಿ ಹಾಗೂ ಬೀರೂರು ಬಿಇಒ ಎಸ್‌.ರಾಜಕುಮಾರ್‌ ಹೇಳಿಕೆ ನೀಡಿದ್ದಾರೆ.

ಸೋಮವಾರ ಕೋರ್‌ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆದರೆ ಜು. 22 ರಂದು ಭಾಷಾ ವಿಷಯಗಳಾದ ಕನ್ನಡ ,ಇಂಗ್ಲಿಷ್‌ ಮತ್ತು ಹಿಂದಿ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಕಡೂರು ಶೈಕ್ಷಣಿಕ ವಲಯವು 16 ಪರೀûಾ ಕೇಂದ್ರಗಳನ್ನು ಹೊಂದಿದ್ದು ಒಟ್ಟು 227 ಕೊಠಡಿಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಕೊಠಡಿಗೆ 12 ಜನ ವಿದ್ಯಾರ್ಥಿಗಳು ಅವರನ್ನು 6 ಅಡಿ ಅಂತರದಲ್ಲಿ ಕೂರಿಸಲಾಗುವುದು. ಈ ಬಾರಿ ಹೊಸ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 2,489 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇವರಲ್ಲಿ ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಮಕ್ಕಳು ಸೇರಿದ್ದಾರೆ. ಈ ಬಾರಿ ಕೊರೊನಾ ಅಲೆಯಿಂದ 6 ಪರೀûಾ ಕೇಂದ್ರಗಳನ್ನು ಹೆಚ್ಚುವರಿಯಾಗಿ ತೆರೆಯಲಾಗಿದೆ ಮಕ್ಕಳಿಗೆ ಯಾವುದೇ ಭಯ, ಆತಂಕ, ಅಡ್ಡಿ ಇಲ್ಲದೆ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಡೂರು ಬಿಇಒ ಜಿ.ರಂಗನಾಥಸ್ವಾಮಿ ತಿಳಿಸಿದರು.

ಬೀರೂರು ಶೈಕ್ಷಣಿಕ ವಲಯ: ಬೀರೂರು ಶೈಕ್ಷಣಿಕ ವಲಯದಲ್ಲಿ ಒಟ್ಟು 10 ಕೇಂದ್ರಗಳನ್ನು ತೆರೆದಿದ್ದು ಹೊಸ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 1,408 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 10 ಕೇಂದ್ರಗಳಿಂದ 132 ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಕೊಠಡಿಗೂ ಸ್ಯಾನಿಟೈಸ್‌ ಮಾಡಲಾಗಿದ್ದು, ಮಕ್ಕಳಿಗೆ ಕುಡಿಯಲು ಶುದ್ಧ ನೀರು,ಅವಶ್ಯಕತೆ ಇದ್ದವರಿಗೆ ಎನ್‌- 95 ಮಾಸ್ಕ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸಮಸ್ಯೆಗಳಿಲ್ಲದೆ ಇಲಾಖೆಯ ಸಿಬ್ಬಂದಿ ಶಿಕ್ಷಕರ ಸಹಕಾರದೊಂದಿಗೆ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಬೀರೂರು ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌. ರಾಜಕುಮಾರ್‌ ಪತ್ರಿಕೆಗೆ ಮಾಹಿತಿ ನೀಡಿದರು.

ಕೋವಿಡ್‌ ವಿಶೇಷ ಪರೀûಾ ಕೇಂದ್ರ: ಕಡೂರು ಶೈಕ್ಷಣಿಕ ವಲಯದ ಗಿರಿತಿಮ್ಲಾಪುರ ಗ್ರಾಮದ ವಿದ್ಯಾರ್ಥಿ ಮೃತ್ಯುಂಜಯ ಪ್ರೌಢಶಾಲೆ ವಡೇರಹಳ್ಳಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೋವಿಡ್‌ ಪಾಸಿಟಿವ್‌ ಹಿನ್ನೆಲೆಯಲ್ಲಿ ಕಡೂರು ಪಟ್ಟಣದ ಹೈವೇ ರಸ್ತೆಯಲ್ಲಿರುವ ಬಾಯ್ಸ ಹಾಸ್ಟೆಲ್‌ನಲ್ಲಿ ವಿಶೇಷವಾಗಿ ತೆರೆದಿರುವ ಪರೀûಾ ಕೇಂದ್ರಕ್ಕೆ ಗ್ರಾಮದಿಂದಲೇ ಆ್ಯಂಬುಲೆನ್ಸ್‌ ಮೂಲಕ ಕರೆತಂದು ಪರೀಕ್ಷೆ ಬರೆಸಲು ಸಿದತೆ ಮಾಡಲಾಗಿದೆ.

ಬೀರೂರು ಶೈಕ್ಷಣಿಕ ವಲಯದ ಸೈದುಖಾನ್‌ ಗ್ರಾಮದ ವಿದ್ಯಾರ್ಥಿ ಬಳ್ಳಾವರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು ಸೋಂಕು ತಗುಲಿದ್ದು ಈ ವಿದ್ಯಾರ್ಥಿಯ ತರೀಕೆರೆ ಪಟ್ಟಣದ ವಿಶೇಷ  ಕೇಂದ್ರದಲ್ಲಿ ಪರೀಕ್ಷೆ ಬರೆಸಲು ಸಿದ್ಧತೆ ಮಾಡಲಾಗಿದೆ ಎಂಬ ಮಾಹಿತಿಯನ್ನು ರಾಜಕುಮಾರ್‌ ನೀಡಿದರು

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.