ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮ:ಡಿಸಿ
Team Udayavani, Aug 3, 2021, 6:34 PM IST
ಚಿಕ್ಕಮಗಳೂರು: ನೆರೆಯ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳಿಂದ ಬರುವ ವಾಹನಗಳನ್ನು ಕಡ್ಡಾಯವಾಗಿ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಗೆ ಒಳಪಡಿಸಲಾಗುವುದು. ಆರ್‌ಟಿಪಿಸಿಆರ್ ವರದಿ ಕಡ್ಡಾಯವಾಗಿ ಇರಬೇಕು. ಇಲ್ಲದಿದ್ದರೆ ಜಿಲ್ಲೆ ಪ್ರವೇಶಕ್ಕೆ ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.
ಸೋಮವಾರ ನಗರದ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿ ಸಲಾಗಿದೆ. ನಿರ್ದಿಷ್ಟ ವಾಹನಗಳು ಮತ್ತು ನಿಗ ದಿತ ಸಮಯದ ವರೆಗೆ ಮಾತ್ರ ಪ್ರವಾಸಿ ತಾಣಗಳಲ್ಲಿ ಇರಲು ಅವಕಾಶ ನೀಡಲಾಗಿದೆ. ನಿಗ ದಿತ ಪ್ರವಾಸಿ ತಾಣಕ್ಕೆ 300 ವಾಹನಗಳಿಗೆ ಮಾತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಜಿಲ್ಲೆಯ ಹೋಂ ಸ್ಟೇ ಮತ್ತು ರೆಸಾರ್ಟ್, ಲಾಡ್ಜ್ಗಳಿಗೆ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರು ಇದ್ದಲ್ಲಿ ಅವರಿಗೂ ಸಹ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಪಾಲನೆ ಮಾಡಬೇಕು ಎಂದು ಈಗಾಗಲೇ ಸೂಚಿಸಲಾಗಿದೆ ಎಂದರು.
ನರಸಿಂಹರಾಜಪುರ, ಕೊಪ್ಪ ಭಾಗದಲ್ಲಿ ಕೇರಳ ನಂಟು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಈ ಭಾಗದಲ್ಲಿ ಕಂಡುಬರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವಂತೆ ಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ನರಸಿಂಹರಾಜಪುರ ಮತ್ತು ಕೊಪ್ಪ ಹೊರತುಪಡಿಸಿದರೆ ಬೇರೆ ತಾಲೂಕುಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಕೇರಳ, ದಕ್ಷಿಣ ಕನ್ನಡ, ಉಡುಪಿ ಭಾಗದಿಂದ ಹೆಚ್ಚಿನ ಜನರು ಬರುವ ಕಾರಣ ಸೋಂಕು ಹರಡುವ ಪ್ರಮಾಣ ಹೆಚ್ಚುತ್ತಿದೆ ಎಂಬ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.
ಸೋಂಕು ಕಡಿಮೆ ಇರುವ ತಾಲೂಕುಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಹಾಗೂ ಕಂಟೈನ್ಮೆಂಟ್ ಝೋನ್ ಮಾಡಲಾಗುವುದು. ಸೋಂಕಿತರು ಕಂಡುಬರುವ ಮನೆಗಳಿಗೆ ಸ್ಟಿಕ್ಕರ್ ಅಂಟಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲಾಗಿದ್ದು, 5ರಿಂದ 10 ಸೋಂಕು ಇರುವ 10 ಗ್ರಾಮಗಳು ಮತ್ತು 15 ಸೋಂಕಿತರಿರುವ 4 ಗ್ರಾಮಗಳನ್ನು ಈಗಾಗಲೇ ಗುರುತಿಸಿದ್ದು, ಸಣ್ಣ ಪ್ರದೇಶದಲ್ಲಿ ಅತೀ ಹೆಚ್ಚು ಸೋಂಕಿತರು ಕಂಡು ಬಂದರೆ ಆ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಮಾಡುವ ನಿಟ್ಟಿನಲ್ಲಿ ಚಿಂತಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.