ನೋಂದಣಿ ಸ್ಥಗಿತಗೊಂಡಿದ್ದರೂ ಪಡಿತರ ವಿತರಣೆ


Team Udayavani, Aug 12, 2021, 6:28 PM IST

12-18

ಚಿಕ್ಕಮಗಳೂರು: ಜಿಲ್ಲಾದ್ಯಂತ ಪಡಿತರ ಚೀಟಿ ಇ-ಕೆವೈಸಿ ನೋಂದಣಿ ಸ್ಥಗಿತಗೊಂಡಿದ್ದರೂ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲೂ ಪಡಿತರ ಚೀಟಿದಾರರಿಗೆ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಈ ಸಂಬಂಧ ಬುಧವಾರ ಇಲಾಖೆ ಕಚೇರಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಸರಕಾರದ ಆದೇಶದಂತೆ ಜಿಲ್ಲಾದ್ಯಂತ ಇ-ಕೆವೈಸಿ ನೋಂದಣಿಗೆ ಎಲ್ಲ ನ್ಯಾಯಬೆಲೆ ಅಂಗಡಿಗಳ ಮೂಲಕ ವ್ಯಾಪಕ ಪ್ರಚಾರ ನೀಡಲಾಗಿದೆ. ಆದರೆ ಸರ್ವರ್‌ ಸಮಸ್ಯೆ ಹಾಗೂ ಇತರ ಕಾರಣಗಳಿಂದಾಗಿ ಇ-ಕೆವೈಸಿ ನೋಂದಣಿ ಜಿಲ್ಲೆಯಲ್ಲಿ ಸಂಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರ ಇ-ಕೆವೈಸಿ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಿದೆ. ಈ ಸಂಬಂಧ ಇಲಾಖೆಯಿಂದ ಇನ್ನೂ ಆದೇಶ ಬಂದಿಲ್ಲ.

ಶೀಘ್ರ ಆದೇಶ ಹೊರಬೀಳಲಿದೆ ಎಂದರು. ಇ-ಕೆವೈಸಿಗೆ ಆ.10 ಕೊನೆ ದಿನವಾಗಿದ್ದರಿಂದ ನೋಂದಣಿಯನ್ನು ಸದ್ಯ ಜಿಲ್ಲೆಯಲ್ಲಿ ಸ್ಥಗಿತಗೊಳಿಸಲಾಗಿದೆ. ಸರಕಾರದ ಆದೇಶದನ್ವಯ ಕ್ರಮವಹಿಸಲಾಗುತ್ತದೆ. ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದ್ದರೂ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಆ.11ರಿಂದ ಪಡಿತರ ವಿತರಣೆಗೆ ಕ್ರಮವಹಿಸಲಾಗಿದೆ. ಇ-ಕೆವೈಸಿ ನೋಂದಣಿ ಮಾಡಿಸದವರಿಗೂ ಪಡಿತರ ವಿತರಣೆ ಮಾಡಲಾಗುತ್ತಿದೆ. ಈ ಬಗ್ಗೆ ಯಾವುದೇ ಗೊಂದಲಕ್ಕೊಳಗಾಗಬೇಕಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ರಾಜ್ಯ ಸರಕಾರ ಸೀಮೆಎಣ್ಣೆ ಮುಕ್ತ ರಾಜ್ಯ ಮಾಡುವ ಗುರಿ ಹೊಂದಿದ್ದು, ಜಿಲ್ಲೆಯ ಮಲೆನಾಡು ಭಾಗದ ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ, ಎನ್‌.ಆರ್‌. ಪುರ ಹಾಗೂ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಅವಶ್ಯಕತೆ ಇದ್ದವರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ 1 ಲೀ. ಸೀಮೆಎಣ್ಣೆ ವಿತರಿಸಲಾಗುತ್ತಿದೆ. ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳು ಈಗಾಗಲೇ ಸೀಮೆಎಣ್ಣೆ ಮುಕ್ತ ತಾಲೂಕುಗಳಾಗಿವೆ.

ಇನ್ನು ಹೆಚ್ಚೆಂದರೆ 3 ತಿಂಗಳವರೆಗೆ ಸೀಮೆಎಣ್ಣೆ ಅಗತ್ಯ ಇದ್ದವರಿಗೆ ಸಿಗಲಿದ್ದು, ನಂತರ ಯಾರಿಗೂ ಸೀಮೆಎಣ್ಣೆ ಸಿಗಲ್ಲ. ಇದರ ಬದಲಾಗಿ ಸೀಮೆಎಣ್ಣೆ ಬಳಸುತ್ತಿರುವ ಕುಟುಂಬ ಗುರುತಿಸಿ ಅಡುಗೆ ಅನಿಲ ವಿತರಣೆಗೆ ಸರಕಾರ ಕ್ರಮವಹಿಸಲಿದೆ ಎಂದರು.

ಟಾಪ್ ನ್ಯೂಸ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.