ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ- ಗ್ರಾಮಸ್ಥರಿಂದ ಜೈಕಾರ
ಚಿಕ್ಕಮಗಳೂರು: ಗ್ರಾಮಕ್ಕೆ ಆಗಮಿಸಿದ ಯೋಧ ಚಂದ್ರಶೇಖರ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.
Team Udayavani, Feb 8, 2021, 6:13 PM IST
ಚಿಕ್ಕಮಗಳೂರು: ಭಾರತೀಯ ಸೇನೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಗ್ರಾಮಕ್ಕೆ ಬಂದ ಯೋಧನಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದರು.
ಜಿಲ್ಲೆಯ ಕಡೂರು ತಾಲೂಕು ಎಸ್. ಬಿದರೆ ಗ್ರಾಮದ ಚಂದ್ರಶೇಖರ್ ಕಳೆದ 21ವರ್ಷ ಗಳಿಂದ ಬಿಎಸ್‌ಎಫ್ ಯೋಧನಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದು ಗ್ರಾಮಕ್ಕೆ ಬಂದಿದ್ದಾರೆ. ಅವರನ್ನು ಗ್ರಾಮಸ್ಥರು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಅದ್ಧೂರಿಯಾಗಿ ಬರಮಾಡಿಕೊಂಡರು.
ಚಂದ್ರಶೇಖರ್ 21 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ಕಾಶ್ಮೀರ, ಪಂಜಾಬ್, ಪಶ್ಚಿಮ ಬಂಗಾಳ, ಪಾಕಿಸ್ತಾನದ ಗಡಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಯೋಧ ಚಂದ್ರಶೇಖರ್ ಗ್ರಾಮಕ್ಕೆ ಬರುವ ವಿಷಯ ತಿಳಿದ ಗ್ರಾಮದ ಯುವಕರು ಮತ್ತು ಅವರ ಸ್ನೇಹಿತರು ತೆರೆದ ವಾಹನವನ್ನು ಹೂವುಗಳಿಂದ ಸಿಂಗರಿಸಿ ಸಿದ್ಧತೆ ಮಾಡಿಕೊಂಡಿದ್ದರು. ಯೋಧ ಚಂದ್ರಶೇಖರ್ ಗ್ರಾಮದ ದ್ವಾರಕ್ಕೆ ಬರುತ್ತಿದ್ದಂತೆ ಹೂವಿನ
ಹಾರ ಹಾನಿ ತಬ್ಬಿಕೊಂಡು ಸ್ವಾಗತಿಸಿದರು. ನಂತರ ತೆರೆದ ವಾಹನದಲ್ಲಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
ಗ್ರಾಮದಲ್ಲಿ ಮೆರವಣಿಗೆ ಸಾಗುತ್ತಿದ್ದಂತೆ ಶಾಲಾ ಮಕ್ಕಳು, ಗ್ರಾಮಸ್ಥರು ಜೈಕಾರ, ಘೋಷಣೆ ಕೂಗಿ ಬರಮಾಡಿಕೊಂಡರು. ಯೋಧ ಚಂದ್ರಶೇಖರ್ ಮಾತನಾಡಿ, ಕಾಶ್ಮೀರದ ಹಿಮಪಾತದಲ್ಲಿ ಸಿಲುಕಿ ಮೂರು ದಿನ 1 ಲೀಟರ್ ನೀರು ಕುಡಿದು ಬದುಕಿ ಬಂದ ಘಟನೆ ಹಾಗೂ ಯೋಧರು ಎಷ್ಟು ಕಷ್ಟಪಡುತ್ತಾರೆಂಬ ತಮ್ಮ ಅನುಭವವನ್ನು ಹಂಚಿಕೊಂಡರು.
ಮುಂದಿನ ದಿನಗಳಲ್ಲೂ ನಾನು ಯೋಧನಾಗಿರುತ್ತೇನೆ. ನಮ್ಮ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಯಾರೇ ಬಂದರೂ ಅವರಿಗೆ ಸೈನ್ಯಕ್ಕೆ ಸೇರಲು ತರಬೇತಿ ನೀಡಲು ಸಿದ್ಧ. ಜೀವವನ್ನು ಲೆಕ್ಕಿಸದೆ ಗಡಿಕಾಯುವ ಯೋಧನಿಗೆ ಈ ರೀತಿ ಭವ್ಯ ಸ್ವಾಗತ ನೀಡುತ್ತಿರುವುದು ಸಂತೋಷ ತಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’
KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
MUST WATCH
ಹೊಸ ಸೇರ್ಪಡೆ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.