ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿ: ಪೂವಿತಾ

|ಕುರುಬರ ಬೂದಿಹಾಳ್‌ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮ

Team Udayavani, Feb 21, 2021, 5:35 PM IST

21-26

ಚಿಕ್ಕಮಗಳೂರು: ಸರ್ಕಾರಿ ಅಧಿ ಕಾರಿಗಳು ಗ್ರಾಮಕ್ಕೆ ಭೇಟಿ ನೀಡುವುದರಿಂದ ಜನರ ಸಮಸ್ಯೆಯ ಅರಿವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ “ಅ ಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ’ ಕಾರ್ಯಕ್ರಮ ಆಯೋಜಿಸಿದ್ದು, ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಎಸ್‌. ಪೂವಿತಾ ಕರೆ ನೀಡಿದರು.

ಶನಿವಾರ ತಾಲೂಕಿನ ಲಕ್ಯಾ ಹೋಬಳಿ ವ್ಯಾಪ್ತಿಯ ಕುರುಬರ ಬೂದಿಹಾಳ್‌ ಗ್ರಾಮದಲ್ಲಿ ಕಂದಾಯ ಇಲಾಖೆ, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ “ಜಿಲ್ಲಾ ಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸುವುದು ಸುಲಭದ ಕೆಲಸವಲ್ಲ. ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಹಳ್ಳಿಯ ಜನರು ದಿನ ನಿತ್ಯ ಕಚೇರಿಗೆ ಅಲೆದಾಡುತ್ತಾರೆ. ಸರ್ಕಾರಿ ಅಧಿಕಾರಿಗಳು ಗ್ರಾಮದಲ್ಲಿ ಸಿಗುವುದರಿಂದ ರೈತರ ಸಮಸ್ಯೆ ಅರ್ಥವಾಗುತ್ತದೆ. ರೈತರ, ಜನರ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ಸರ್ಕಾರ ಸರ್ಕಾರ ಕಾರ್ಯಕ್ರಮ ರೂಪಿಸಿದ್ದು ಕಂದಾಯ ಇಲಾಖೆ ಅ ಧಿಕಾರಿಗಳು, ಜಿಲ್ಲಾ ಮಟ್ಟದ ಅಧಿ  ಕಾರಿಗಳು ಸ್ಥಳೀಯವಾಗಿ ಸಿಗುವುದರಿಂದ ಸಮಸ್ಯೆಯನ್ನು ಬಗೆಹರಿಸಬಹುದು. ಜನರ ಹಾಗೂ ರೈತರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದ ಅವರು, ಸಮಸ್ಯೆಗಳ ಪರಿಹಾರಕ್ಕೆ ಸಲಹೆ- ಸೂಚನೆ ನೀಡಲಾಗುವುದು ಎಂದರು.

ಕಂದಾಯ ಇಲಾಖೆ ಉಪವಿಭಾಗಾಧಿ ಕಾರಿ ಡಾ| ಎಚ್‌.ಎಲ್‌. ನಾಗರಾಜ್‌ ಮಾತನಾಡಿ, ಕಂದಾಯ ಇಲಾಖೆ ಎಲ್ಲಾ ಇಲಾಖೆಗಳ ತಾಯಿ. ಈ ಇಲಾಖೆಗೆ ಸಂಬಂಧಿ ಸಿದ ಸಮಸ್ಯೆಗಳೇ ಹೆಚ್ಚಿರುತ್ತವೆ. ಕಂದಾಯ ಇಲಾಖೆ ಅ ಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಿದಲ್ಲಿ ಜನರ ಸಮಸ್ಯೆಗೆ ಸಮರ್ಪಕ ಪರಿಹಾರ ಕಲ್ಪಿಸಲು ಸಾಧ್ಯವಾಗುತ್ತದೆ. ಕಚೇರಿಗಳಿಗೆ ಜನರ ಅಲೆದಾಟ ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.

ರಾಜ್ಯ ಸರ್ಕಾರ ಜಿಲ್ಲಾ ಕೇಂದ್ರದಿಂದ ದೂರದಲ್ಲಿರುವ ಹಿಂದುಳಿದ ಗ್ರಾಮಗಳ ಜನರ ಬಳಿಗೆ ಜಿಲ್ಲಾ ಧಿಕಾರಿ ಸೇರಿದಂತೆ ಎಲ್ಲಾ ಇಲಾಖೆ ಅಧಿ ಕಾರಿಗಳನ್ನು ಕಳುಹಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಪ್ರತೀ ತಿಂಗಳ ಮೂರನೇ ಶನಿವಾರ ಜಿಲ್ಲಾಡಳಿತವೇ ಜನರ ಬಳಿಗೆ ತೆರಳುವಂತಹ ಯೋಜನೆಗೆ ಚಾಲನೆ ನೀಡಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂ ಧಿಸಿದ ಸಮಸ್ಯೆಗಳೇ ಹೆಚ್ಚಿವೆ. ರೈತರ ಜಮೀನಿನ ಪಹಣಿ, ಮ್ಯುಟೇಶನ್‌, ಪೌತಿ ಖಾತೆಗಳ
ತಿದ್ದುಪಡಿ ಸೇರಿದಂತೆ ಹಲವಾರು ಸಮಸ್ಯೆಗಳು ಬಾಕಿ ಇದ್ದು, ಕಾರ್ಯಕ್ರಮದ ಮೂಲಕ ಪರಿಹಾರ ಒದಗಿಸಲಾಗುವುದು. ಚಿಕ್ಕಮಗಳೂರು ಕಂದಾಯ ಉಪ ವಿಭಾಗದಲ್ಲಿ 12,500 ಪೌತಿ ಖಾತೆಗಳಿದ್ದು, ಇಂತಹ ಖಾತೆಗಳಿಗೆ ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌ಗಳು ಸಿಗದೇ ಪೌತಿ ಖಾತೆಗಳ ವಾರಸುದಾರರಿಗೆ ಬೆಳೆ ಪರಿಹಾರ ಸಿಕ್ಕಿರಲಿಲ್ಲ. ಪೌತಿ ಖಾತೆಗಳ ಆಂದೋಲನದ ಮೂಲಕ ಇಂತಹ 4,600 ಪೌತಿ ಖಾತೆಗಳನ್ನು ಅವರ ವಾರಸುದಾರರ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡಲಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಜಮೀನು ದಾಖಲೆಗಳಲ್ಲಿನ ದೋಷ ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕೆಂದರು.

ಗ್ರಾಮದ ಮುಖಂಡ ಸತ್ಯಮೂರ್ತಿ ಮಾತನಾಡಿ, ಕೆ.ಬಿ. ಹಾಳ್‌ ಗ್ರಾಪಂ ಚಿಕ್ಕಮಗಳೂರು ಜಿಲ್ಲೆಯ ಗಡಿಯಲ್ಲಿದ್ದು, ಗ್ರಾಪಂ ಗ್ರಾಮಠಾಣಾ ಜಾಗ ಗುರುತು ಮಾಡದಿರುವುದರಿಂದ ಸರ್ಕಾರಿ ಜಾಗದ ಬಗ್ಗೆ ಗೊಂದಲ ಏರ್ಪಟ್ಟಿದೆ. ಕಂದಾಯ ಅರಣ್ಯ ಜಾಗಗಳ ಬಗ್ಗೆ ಗೊಂದಲವಿದ್ದು, ಜಿಲ್ಲಾಡಳಿತ ಗ್ರಾಮಠಾಣಾ ಜಾಗ ಗುರುತು ಮಾಡುವುದರೊಂದಿಗೆ ಸರ್ಕಾರಿ ಉದ್ದೇಶಕ್ಕಾಗಿ ಗ್ರಾಪಂಗೆ 10 ಎಕರೆ ಕಂದಾಯ ಜಾಗವನ್ನು ಮಂಜೂರು
ಮಾಡಬೇಕು. ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲವಾಗಿದ್ದು, ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಜಾನುವಾರುಗಳು ಹೆಚ್ಚಿದ್ದು, ಪಶು ಆಸ್ಪತ್ರೆಯನ್ನು ಮಂಜೂರು ಮಾಡಬೇಕು. ಕೆ.ಬಿ.ಹಾಳ್‌ ಗ್ರಾಮದಲ್ಲಿ ಸಂಚರಿಸುವ ಚಿಕ್ಕಮಗಳೂರು- ಜಾವಗಲ್‌ ಸಾರಿಗೆ ಬಸ್‌ಗಳಿಗೆ ನಿಲುಗಡೆ ಕಡ್ಡಾಯ ಮಾಡಬೇಕು. ಗ್ರಾಪಂ ವ್ಯಾಪ್ತಿಯಲ್ಲಿರುವ ಎಲ್ಲಾ ಕೆರೆಗಳ ಅಭಿವೃದ್ಧಿಗಾಗಿ ಕೆರೆಗಳನ್ನು ಜಿಪಂ ಇಲ್ಲವೇ ಸಣ್ಣ ನೀರಾವರಿ ಇಲಾಖೆಗೆ ಸೇರಿಸಬೇಕು. ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆ ಶಿಥಿಲಗೊಂಡಿದ್ದು, ದುರಸ್ತಿಗೆ ಕ್ರಮ
ವಹಿಸಿ, ಪ್ರಾಥಮಿಕ ಶಾಲೆಗೆ ಕಾಂಪೌಂಡ್‌ ನಿರ್ಮಿಸುವುದು ಹಾಗೂ ಕೋಟಿಗನಹಳ್ಳಿ ಗ್ರಾಮದ 22 ಕುಟುಂಬಗಳ ಜಮೀನಿಗೆ ಸಾಗುವಳಿ ಚೀಟಿ ನೀಡಬೇಕೆಂದು ಆಗ್ರಹಿಸಿದರು.

ಜಿಪಂ ಸದಸ್ಯ ಬೆಳವಾಡಿ ರವೀಂದ್ರ ಮಾತನಾಡಿದರು. ಪಶು ಸಂಗೋಪನಾ ಇಲಾಖಾ ಧಿಕಾರಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಕುರಿತು ವಿವರಿಸಿದರು. ವೇದಿಕೆ ಕಾರ್ಯಕ್ರಮದ ಬಳಿಕ ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಸಲ್ಲಿಸಿದ್ದ ಅರ್ಜಿಗಳ ವಿಲೇವಾರಿ, ಚರ್ಚೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ತಾಪಂ ಸದಸ್ಯೆ ಶುಭಾ ಸತ್ಯಮೂರ್ತಿ, ಗ್ರಾಪಂ ಅಧ್ಯಕ್ಷ ಶಿವಕುಮಾರ್‌, ಉಪಾಧ್ಯಕ್ಷೆ ಶಾರದಮ್ಮ, ತಹಶೀಲ್ದಾರ್‌ ಡಾ|ಕಾಂತರಾಜ್‌, ತಾಪಂ ಇಒ ತಾರಾನಾಥ್‌, ಸಮಾಜ ಕಲ್ಯಾಣಾ ಧಿಕಾರಿ ಮಲ್ಲಿಕಾರ್ಜುನ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಸೀಮಾ ಸೇರಿದಂತೆ ಕೃಷಿ, ಪಶು ಸಂಗೋಪನೆ, ಅರಣ್ಯ, ಕೆಎಸ್‌ಆರ್‌ಟಿಸಿ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅ ಧಿಕಾರಿಗಳು ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಅಧಿಕಾರಿಗಳು, ಜನಪ್ರತಿನಿ ಧಿಗಳು ಶಾಲಾ ಮಕ್ಕಳೊಂದಿಗೆ ಮೆರವಣಿಯಲ್ಲಿ ಗ್ರಾಮದ ವಿವಿಧ ರಸ್ತೆ ಬಡಾವಣೆಗಳಲ್ಲಿ ಸಾಗಿ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿದರು.

ಓದಿ : ಹಳ್ಳಿ ಜನರ ಸಮಸ್ಯೆಗೆ ಜಿಲ್ಲಾಧಿಕಾರಿ ಸ್ಪಂದನೆ

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.