ಸಂಘ ಪರಿವಾರದ ವಿರುದ್ಧ ಮೊಕದ್ದಮೆಗೆ ಒತ್ತಾಯ
Team Udayavani, Apr 11, 2021, 5:52 PM IST
ಚಿಕ್ಕಮಗಳೂರು: ಗುಂಪು ಘರ್ಷಣೆಯಲ್ಲಿ ಯುವಕ ಮೃತಪಟ್ಟ ಘಟನೆಯನ್ನು ಕೋಮು ಗಲಭೆಯಂತೆ ಬಿಂಬಿಸಿ ನಗರದಲ್ಲಿ ಅಂಗಡಿ- ಮುಂಗಟ್ಟುಗಳನ್ನು ದಿಢೀರ್ ಮುಚ್ಚಿಸಿ ಭೀತಿ ವಾತಾವರಣ ಸೃಷ್ಟಿಸಿದ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.
ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಪಕ್ಷ ಮತ್ತು ಸಂಘಟನೆಗಳ ಸಭೆ ನಡೆಸಿದ ಮುಖಂಡರು ಆರೋಪಿಗಳನ್ನು ಬಂ ಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಮೃತಪಟ್ಟ ಯುವಕ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು. ಎರಡು ಸ್ನೇಹಿತರ ಗುಂಪುಗಳ ನಡುವೆ ನಡೆದ ಘರ್ಷಣೆಯಾಗಿದೆ. ಕೋಮುಗಲಭೆಯಲ್ಲ ಎಂದು ಅಭಿಪ್ರಾಯಿಸಿದರು.
ಘಟನೆಯನ್ನು ಮುಂದಿಟ್ಟುಕೊಂಡು ಕೋಮುಗಲಭೆ ಎಂಬಂತೆ ಬಿಂಬಿಸಿ ನಗರದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಮತ್ತು ಸಂಘ ಪರಿವಾರ ಮುಂದಾಗಿದ್ದು ಖಂಡನೀಯ. ಅಶಾಂತಿ ಸೃಷ್ಟಿಸಲು ಕಾರಣವಾಗುವಂತಹ ಹೇಳಿಕೆ ನೀಡಿರುವ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸರ ಅನುಮತಿ ಇಲ್ಲದೆ ಮೆರವಣಿಗೆ ನಡೆಸಿ ಕಾನೂನು ಉಲ್ಲಂಘಿಸಿರುವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್. ದೇವರಾಜ್, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಜಿ.ಎಸ್. ಚಂದ್ರಪ್ಪ, ಕಾಂಗ್ರೆಸ್ ಮುಖಂಡ ರವೀಶ್ ಕ್ಯಾತನಬೀಡು, ರೂಬಿನ್ ಮೊಸೆಸ್, ಸಿಪಿಐ ಮುಖಂಡ ಎಚ್.ಎಂ. ರೇಣುಕಾರಾಧ್ಯ, ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಪಿ. ವೇಲಾಯುಧನ್, ರೈತ ಮುಖಂಡ ಗುರುಶಾಂತಪ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಕರವೇ ಅಧ್ಯಕ್ಷ ತೇಗೂರು ಜಗದೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.