ಅಂತರ್ಜಾತಿ ವಿವಾಹಿತರಿಗೆ ಚೆಕ್ ವಿತರಣೆ
Team Udayavani, Apr 14, 2021, 6:00 PM IST
ಕಡೂರು: ತಾಲೂಕಿನ ಆಲಘಟ್ಟ ಚಟ್ನಹಳ್ಳಿಯ ಯುವಕ ಭರತ್ ಸಿ.ಕೆ. ಮತ್ತು ಉಡೆವು ಗ್ರಾಮದ ದಿವ್ಯ ಆರ್. ಅವರು ಅಂತರ್ಜಾತೀಯ ವಿವಾಹ ಮಾಡಿಕೊಂಡ ಹಿನ್ನೆಲೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ನೀಡುವ 3 ಲಕ್ಷದ ಸಹಾಯ ಧನದ ಚೆಕ್‌ನ್ನು ಶಾಸಕ ಬೆಳ್ಳಿಪ್ರಕಾಶ್ ವಿತರಣೆ ಮಾಡಿದರು.
ಚೆಕ್ ವಿತರಿಸಿ ಮಾತನಾಡಿದ ಶಾಸಕ ಬೆಳ್ಳಿಪ್ರಕಾಶ್ ಅವರು ಸರ್ಕಾರ ನೀಡುವ ಸಹಾಯಧನವನ್ನು ನಿಮ್ಮ ಜೀವನ ನಿರ್ವಹಣೆ ಅಥವಾ ಉತ್ತಮ ಕೆಲಸ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳಿ ಎಂದು ಯುವ ಜೋಡಿಗೆ ಕರೆ ನೀಡಿ ಆಶೀರ್ವದಿಸಿದರು.
ತಾಲೂಕು ಸಮಾಜ ಕಲ್ಯಾಣಾ ಧಿಕಾರಿ ಶಂಕರಮೂರ್ತಿ ಮಾತನಾಡಿ, ಕಳೆದ ಸಾಲಿನಲ್ಲಿ ಸುಮಾರು 51 ಅಂತರ್ಜಾತಿ ವಿವಾಹಗಳು ನೊಂದಣಿಯಾಗಿದ್ದು ಎಲ್ಲರಿಗೂ ಸರ್ಕಾರದಿಂದ ಸೌಲಭ್ಯಗಳನ್ನು ನೀಡಲಾಗಿದೆ. ಈ ಬಾರಿ 38 ಅಂತರ್ಜಾತೀಯ ವಿವಾಹಗಳು ನಡೆದಿದ್ದು ಭರತ್ ಮತ್ತು ದಿವ್ಯ ಅವರ ಜೋಡಿಗೆ 3 ಲಕ್ಷ ರೂ. ಸಹಾಯಧನ ಮಂಜೂರಾಗಿದ್ದು 1.5 ಲಕ್ಷ ನಗದು, ಉಳಿದ 1.5 ಲಕ್ಷ ಕೆನರಾ ಬ್ಯಾಂಕಿನಲ್ಲಿ ಇವರಿಬ್ಬರ ಹೆಸರಿನಲ್ಲಿ ಠೇವಣಿಯಾಗಿ ಇಡಲಾಗಿದೆ. 3 ವರ್ಷ ಮುಗಿದ ನಂತರ ಠೇವಣಿ ಹಣ ಅವರು ಪಡೆಯಲು ಸಾಧ್ಯವಿದೆ ಎಂದರು. ಜಿಪಂ ಸದಸ್ಯ ಕೆ.ಆರ್. ಮಹೇಶ್ ಒಡೆಯರ್, ಪಾಟೀಲ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.