ಔಷಧ ದರ ಹೆಚ್ಚಿಸಿದರೆ ಕ್ರಮ ಕೈಗೊಳ್ಳಿ


Team Udayavani, Apr 20, 2021, 5:59 PM IST

20-18

ಚಿಕ್ಕಮಗಳೂರು: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಔಷ ಧ ದರವನ್ನು ಹೆಚ್ಚಿಸುವಂತಿಲ್ಲ. ಹೆಚ್ಚಿಸಿದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅ ಧಿಕಾರಿಗಳಿಗೆ ಶಾಸಕ ಸಿ.ಟಿ. ರವಿ ಸೂಚಿಸಿದರು. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣ ಕ್ರಮಗಳ ಕುರಿತು ಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್‌ ರೋಗಿಗಳಿಗೆ ಮೀಸಲಿಡಬೇಕು. ಇತರೆ ಕಾಯಿಲೆಗಳಿಗೆ ಸಂಬಂ ಧಿಸಿದ ರೋಗಿಗಳನ್ನು ನಿರ್ಲಕ್ಷಿಸದೆ, ಪರ್ಯಾಯ ಮಾರ್ಗಗಳನ್ನು ರೂಪಿಸಬೇಕು. ಔಷ ಧ ದರಗಳನ್ನು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಈ ಸಂಬಂಧ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅ ಧಿಕಾರಿಗಳಿಗೆ ತಿಳಿಸಿದರು.

ರಾಜ್ಯಾದ್ಯಂತ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಧಿ  ಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. 24×7 ಹೆಲ್ಪ್ಲೈನ್‌ ಡೆಸ್ಕ್ಗಳನ್ನು ಸ್ಥಾಪಿಸಬೇಕು ಎಂದರು. ಮನೆಯಲ್ಲಿ ಕ್ವಾರಂಟೈನ್‌ನಲ್ಲಿರುವವರಿಗೆ ಸಹಾಯವಾಣಿ ಮೂಲಕ ಸಂಪರ್ಕಿಸಿ ಅವರಿಗೆ ಸಲಹೆಗಳನ್ನು ನೀಡುವುದರ ಜೊತೆಗೆ ಧೈರ್ಯ ತುಂಬಬೇಕು. ಇದರಿಂದ ಆಸ್ಪತ್ರೆಗಳ ಮೇಲೆ ಬೀಳುವ ಹೊರೆ ಕಡಿಮೆಯಾಗುತ್ತದೆ ಎಂದ ಅವರು, ಜಿಲ್ಲೆಯಲ್ಲಿ ಲಸಿಕೆ ಹಾಕುವ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದರು. ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವಂತೆ ಜನತೆಯಲ್ಲಿ ಅರಿವು ಮೂಡಿಸಬೇಕು. ಕೋವಿಡ್‌ ಪ್ರಕರಣಗಳು ಹೆಚ್ಚಾದಲ್ಲಿ ಹೆಚ್ಚುವರಿ ಹಾಸಿಗೆ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅ ಧಿಕಾರಿಗಳು ಕ್ರಮ ಕೈಗೊಳ್ಳಬೇ ಕೆಂದು ತಿಳಿಸಿದರು.

ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಹೆಚ್ಚಿನ ಜನರು ಭೇಟಿ ನೀಡುವುದರಿಂದ, ಅರ್ಚಕರಿಗೆ, ಮುಲ್ಲಾ, ಫಾದರ್‌ಗಳಿಗೆ ಮೊದಲ ಆದ್ಯತೆಯಾಗಿ ಲಸಿಕೆ ನೀಡಬೇಕು. ಅದೇ ರೀತಿ ಆಟೋ ಚಾಲಕರು,  ಲಸಿಕೆ ನೀಡುವಂತೆ ತಿಳಿಸಿದರು. ಕಲ್ಯಾಣ ಮಂಟಪಗಳಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವುದರಿಂದ ಹೆಚ್ಚು ಜನರು ಸೇರುತ್ತಾರೆ. ಈಗಾಗಲೇ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳನ್ವಯ ಹೆಚ್ಚು ಜನರು ಸೇರದಂತೆ ನಿಗಾ ವಹಿಸಬೇಕು. ಕಲ್ಯಾಣ ಮಂಟಪಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಮದುವೆಗೆ ಹಾಜರಾಗುವವರಿಗೆ ಥರ್ಮಲ್‌ ಸ್ಕಾನಿಂಗ್‌ ಹಾಗೂ ಸ್ಯಾನಿಟೈಸರ್‌ ಬಳಕೆ ಮಾಡುವಂತೆ ಕಲ್ಯಾಣ ಮಂಟಪದ ಮಾಲೀಕರಿಗೆ ಸೂಚನೆ ನೀಡಬೇಕು. ಈ ನಿಯಮಗಳನ್ನು ಪಾಲಿಸದ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಮಾತನಾಡಿ, ಕೋವಿಡ್‌ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಜಿಲ್ಲೆಯಲ್ಲಿ ಈ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳ ಲಾಗುತ್ತದೆ ಎಂದು ಹೇಳಿದರು.

ಕೋವಿಡ್‌ ಸೋಂಕು ನಿಯಂತ್ರಿಸಲು ಸ್ವಯಂಪ್ರೇರಿತವಾಗಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಸ್ವಯಂಸೇವಕರು ನೋಂದಣಿ ಮಾಡಿಕೊಂಡು ಕಾರ್ಯ ನಿರ್ವಹಿಸಬಹುದಾಗಿದ್ದು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾ  ಧಿಕಾರಿ ಎಂ.ಎಚ್‌. ಅಕ್ಷಯ್‌, ಅಪರ ಜಿಲ್ಲಾ ಧಿಕಾರಿ ಬಿ.ಆರ್‌. ರೂಪಾ, ತಹಶೀಲ್ದಾರ್‌ ಡಾ|ಕಾಂತರಾಜ್‌, ಜಿಲ್ಲಾ ಆರೋಗ್ಯ ಮತ್ತು ಕುಂಟಬ ಕಲ್ಯಾಣಾ  ಧಿಕಾರಿ ಡಾ| ಉಮೇಶ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಮೋಹನ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಎಚ್‌.ಕೆ. ಮಂಜುನಾಥ್‌, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿ ಕಾರಿ ಡಾ| ಬಾಲಕೃಷ್ಣ ಮತ್ತಿತರರು ಇದ್ದರು.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.