ಮಾತೃಭಾಷಾ ಶಿಕ್ಷಣ ನೀತಿ ಜಾರಿಗೊಳಿಸಿ
ಮುಖ್ಯಮಂತ್ರಿಗಳು ಕನ್ನಡಿಗರು ಹೆಚ್ಚಿರುವ ಕೊಲ್ಲಾಪುರ- ಸೊಲ್ಲಾಪುರದಲ್ಲಿ ಕನ್ನಡ ಬಾವುಟ ಹಾರಿಸುವ ನಿಲುವು ಕೈಗೊಳ್ಳಲಿ: ಮುಖ್ಯಮಂತ್ರಿ ಚಂದ್ರು
Team Udayavani, Jan 26, 2021, 5:28 PM IST
ಅಜ್ಜಂಪುರ: 1-5 ನೇ ತರಗತಿಯವರೆಗೆ ಮಾತೃಭಾಷೆಯಲ್ಲಿ ಶಿಕ್ಷಣ ಎಂಬ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿ ಕಾರದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕೇಂದ್ರಕ್ಕೆ ಹಕ್ಕೊತ್ತಾಯ ಮಂಡಿಸಿದರು.
ತಾಲೂಕಿನ ಬುಕ್ಕಾಂಬು ಧಿಯಲ್ಲಿ ಸೋಮವಾರ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಸಾಧ್ಯವಾದಷ್ಟು ಪ್ರಾದೇಶಿಕ ಭಾಷೆ. ಇದು ಈಗಿರುವ ಶಿಕ್ಷಣ ನೀತಿ. ಇದನ್ನು ಬದಲಿಸಿ, ಶಿಕ್ಷಣದಲ್ಲಿ ಪ್ರಾದೇಶಿಕ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದರು. ಶಿವಮೊಗ್ಗದಲ್ಲಿ ನಡೆದ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಹಿಂದಿ, ಇಂಗ್ಲಿಷ್ ಬಳಸಲಾಗಿತ್ತು. ಕನ್ನಡಕ್ಕೆ ಆದ್ಯತೆ ಇರಲಿಲ್ಲ. ವೇದಿಕೆಯಲ್ಲಿದ್ದ ಮುಖ್ಯಮಂತ್ರಿಗಳು ಕೂಡ ಆಗಿರುವ ಲೋಪ ಸರಿಪಡಿಸಲಿಲ್ಲ. ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಬದಲಿಗೆ
ಸಮರ್ಥಿಸಿಕೊಳ್ಳಲು ಮುಂದಾದರು. ಇದು ದುರದೃಷ್ಟಕರ ಎಂದು ವಿಷಾದಿಸಿದರು.
ಹಿಂದಿ ಹೇರಿಕೆ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ, ಕನ್ನಡದ ವೇದಿಕೆಯಲ್ಲಿಯೇ ನಿಂತು ಹಿಂದಿ ಭಾಷೆಯನ್ನು ತಬ್ಬಿಕೊಳ್ಳಬೇಕು ಎಂದು ಹೇಳಿಕೆ ನೀಡಿರುವ ದೊಡ್ಡರಂಗೇಗೌಡರ ದೋರಣೆ ಪ್ರಶ್ನಾರ್ಹ. ಕೂಡಲೇ ಗೌಡರು ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಮನವಿ ಮಾಡಿದರು.
ಈ ಬಾರಿಯ ದೆಹಲಿಯ ಗಣರಾಜ್ಯೋತ್ಸವಕ್ಕೆ, ಕರ್ನಾಟಕದ ವಿಜಯನಗರ ಸಾಮ್ರಾಜ್ಯದ ಸ್ಥಬ್ದಚಿತ್ರವನ್ನು ಸಿದ್ಧಗೊಳಿಸಲಾಗಿದೆ. ಅದರಲ್ಲಿ ಹಿಂದಿಯ ಬರವಣಿಗೆ ಮಾತ್ರವಿದ್ದು, ಕನ್ನಡವನ್ನು ಕಡೆಗಣಿಸಲಾಗಿದೆ. ಆಗಿರುವ ತಪ್ಪು ಸರಿಪಡಿಸಿ. ಅದಕ್ಕೆ ಅವಕಾಶ ದೊರೆಯದಿದ್ದರೆ ಸ್ಥಬ್ದಚಿತ್ರವನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಸಲಹೆ ನೀಡಿದರು.
ಕನ್ನಡಿಗರು ಹೆಚ್ಚಿರುವ ಮಹಾರಾಷ್ಟ್ರದ ಬಾಂಬೆ, ಸೊಲ್ಲಾಪುರ, ಕೊಲ್ಲಾಪುರದಲ್ಲಿ ಕನ್ನಡದ ಬಾವುಟ ಹಾರಿಸುವ ಗಟ್ಟಿ ನಿಲುವನ್ನು ಮುಖ್ಯಮಂತ್ರಿಗಳು ಕೈಗೊಳ್ಳಬೇಕು. ಅದಕ್ಕೆ ಮಂತ್ರಿಮಂಡಲ ಹಾಗೂ ಲೋಕಸಭಾ ಸದಸ್ಯರು ಧ್ವನಿಗೂಡಿಸಬೇಕು ಎಂದು
ಒತ್ತಾಯಿಸಿದರು.
ಹಂಪಾ ನಾಗರಾಜಯ್ಯ, ನಾಡಿನ ಹಿರಿಯ ಸಾಹಿತಿ. ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿ, ಮುಚ್ಚಳಿಕೆ ಬರೆಸಿಕೊಂಡಿದ್ದು ತಪ್ಪು. ಇದು ಅವರಿಗೆ ಮಾಡಿದ ಅವಮಾನ ಅಲ್ಲ. ಕನ್ನಡಿಗರಿಗೆ ಮಾಡಿದ ಅಪಮಾನ. ನಾಡೋಜ ಪುರಸ್ಕೃತರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಸಾಮಾನ್ಯ ಜ್ಞಾನ ಪಿಎಸ್‌ಐಗೆ ಇಲ್ವಾ? ಇಷ್ಟೂ ಘಟನೆ ನಡೆಯುವಾಗಲೂ ಸರ್ಕಾರ ಏನು ಮಾಡುತ್ತಿದೆ ಎಂದು ಹರಿಹಾಯ್ದರು.
ಓದಿ : ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.