ಕೋವಿಡ್‌ ಹರಡದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಿ

Team Udayavani, May 5, 2021, 11:00 PM IST

5-20

ಕೊಪ್ಪ: ಕೋವಿಡ್‌ ಶೀಘ್ರಗತಿಯಲ್ಲಿ ಹರಡುತ್ತಿದ್ದು ಮುಂದಿನ ಕೆಲ ದಿನಗಳು ನಿರ್ಣಾಯಕವಾಗಿವೆ. ಅ ಧಿಕಾರಿ ವರ್ಗದವರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಕೋವಿಡ್‌ ವ್ಯಾಪಿಸದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು. ಮಂಗಳವಾರ ಪಟ್ಟಣದ ಪುರಭವನದಲ್ಲಿ ಹಮ್ಮಿಕೊಂಡಿದ್ದ ಕೋವಿಡ್‌ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಚರ್ಚಿಸಲಾಯಿತು.

ಮುಂದಿನ ದಿನಗಳಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‌ಗಳ ಜೊತೆಗೆ ಖಾಸಗಿ ಆಸ್ಪತ್ರೆಗಳೊಂದಿಗೂ ಮಾತನಾಡಿ ಬೆಡ್‌ಗಳನ್ನು ಕಾಯ್ದಿರಿಸಬೇಕು. ಅಗತ್ಯ ಬಿದ್ದಲ್ಲಿ ಹಾಸ್ಟೆಲ್‌ಗ‌ಳು, ಮೊರಾರ್ಜಿ ಶಾಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಕೊಪ್ಪದಲ್ಲಿ ಎಎಲ್‌ಎನ್‌ ರಾವ್‌ ಆಯುರ್ವೆದಿಕ್‌ ಆಸ್ಪತ್ರೆ, ಶೃಂಗೇರಿಯಲ್ಲಿ ಶ್ರೀಮಠದ ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಕಾಯ್ದಿರಿಸಲು ವ್ಯವಸ್ಥೆ ಮಾಡಬೇಕು.

ಆಸ್ಪತ್ರೆಗಳ ಆಂಬ್ಯುಲೆನ್ಸ್‌ ವಾಹನದ ಜೊತೆಗೆ, ಮೂರು ತಾಲೂಕುಗಳ ಪಟ್ಟಣ ಪಂಚಾಯತ್‌ಗಳಿಗೆ ನೀಡಿರುವ ಆಂಬ್ಯುಲೆನ್ಸ್‌ಗಳನ್ನು ಬಳಸಿಕೊಳ್ಳಲು ವ್ಯವಸ್ಥೆ ಮಾಡಿ. ಕೆಟ್ಟು ಹೋಗಿರುವ ಆಂಬ್ಯುಲೆನ್ಸ್‌ ಗಳನ್ನು ದುರಸ್ತಿ ಮಾಡಿಸಿ. ಆಂಬ್ಯುಲೆನ್ಸ್‌ ಡ್ರೈವರ್‌ ಗಳು, ನರ್ಸ್‌ಗಳು, ಗ್ರೂಪ್‌- ಡಿ ನೌಕರರ ಕೊರತೆಯಿದ್ದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಿಯೋಜನೆ ಮಾಡಿಕೊಳ್ಳಿ ಎಂದರು. ಕೊಪ್ಪ ತಾಲೂಕು ಆರೋಗ್ಯಾ ಧಿಕಾರಿ ಮಹೇಂದ್ರ ಕಿರೀಟಿ ಮಾತನಾಡಿ, ಆರ್‌ಟಿಪಿಸಿಆರ್‌ ಫಲಿತಾಂಶ ವಿಳಂಬವಾಗುತ್ತಿದೆ.

ರ್ಯಾಪಿಡ್‌ ಟೆಸ್ಟ್‌ ಕಿಟ್‌ಗಳನ್ನು ಒದಗಿಸಬೇಕು. ಕೊಪ್ಪದಲ್ಲಿ ಕೋವಿಡ್‌ ವ್ಯಾಕ್ಸಿನ್‌ ಕೊರತೆಯಿದೆ. ಕ್ಷೇತ್ರದ ಮೂರು ತಾಲೂಕು ಆಸ್ಪತ್ರೆಗಳಲ್ಲಿ ಒಟ್ಟು 18 ವೆಂಟಿಲೇಟರ್‌ಗಳಿದ್ದರೂ ಟೆಕ್ನಿಶಿಯನ್‌ ಇಲ್ಲದೇ ಉಪಯೋಗವಾಗುತ್ತಿಲ್ಲ. ಸ್ಟಾಪ್‌ ನರ್ಸ್‌, ಗ್ರೂಪ್‌ ಡಿ. ನೌಕಕರ ಕೊರತೆಯಿದೆ. 1 ಆಂಬ್ಯುಲೆನ್ಸ್‌ ಕೆಟ್ಟು ನಿಂತಿದೆ ಎಂದರು. ಡಿವೈಎಸ್‌ಪಿ ಎಸ್‌. ರಾಜು ಮಾತನಾಡಿ, ಪೊಲೀಸ್‌ ಇಲಾಖೆಯಲ್ಲಿ ಈಗಾಗಲೇ ಕೆಲವರಿಗೆ ಕೊರೊನಾ ಸೋಂಕು ತಗಲಿದೆ. ಇತರ ಇಲಾಖೆಗಳ ಕೆಲವರಿಗೆ ಸೋಂಕು ತಗಲಿದೆ. ಇದರಿಂದ ಸೋಂಕಿತರು ಮತ್ತು ಅವರ ಪ್ರಾಥಮಿಕ ಸಂಪರ್ಕಿತರು ಸೇರಿ ಹೆಚ್ಚಿನ ಸಿಬ್ಬಂ ಗಳು ಕರ್ತವ್ಯಕ್ಕೆ ಹಾಜರಾಗಲು ಆಗುತ್ತಿಲ್ಲ. ಆರ್‌ಟಿಪಿಸಿಆರ್‌ ಫಲಿತಾಂಶ ವಿಳಂಬವಾಗುತ್ತಿದ್ದು, ರ್ಯಾಪಿಡ್‌ ಟೆಸ್ಟ್‌ ಕಿಟ್‌ ಇದ್ದಲ್ಲಿ ಬೇಗ ಫಲಿತಾಂಶ ಬಂದು ನೆಗೆಟಿವ್‌ ಇದ್ದರೆ ಬೇಗ ಕರ್ತವ್ಯಕ್ಕೆ ಹಾಜರಾಗಲು ಅನುಕೂಲವಾಗುತ್ತದೆ ಎಂದರು.

ಕೆಲವು ಕೊರೊನಾ ಸೋಂಕಿತರೇ ತಮ್ಮ ವಾಹನದಲ್ಲಿ ಜನರನ್ನು ಸಾಗಿಸುತ್ತಿದ್ದಾರೆ ಎಂಬ ದೂರುಗಳಿವೆ. ಶೃಂಗೇರಿಯಲ್ಲಿ ಕೊರೊನಾ ಹರಡುವ ತೀವ್ರತೆ ಹೆಚ್ಚಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್‌. ಜೀವರಾಜ್‌ ದೂರಿದರು. ಅಧಿ ಕಾರಿ ವರ್ಗ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಶೃಂಗೇರಿಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿರಿಸಿ ಜನರಲ್‌ ಪೇಷೆಂಟ್‌ಗಳಿಗೆ ಬೇರೆಡೆ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದು ಒಳ್ಳೆಯದು ಎಂದರು.

ಸಭೆಯಲ್ಲಿ ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ. ಪ್ರಾಣೇಶ್‌, ಶಾಸಕ ಟಿ.ಡಿ. ರಾಜೇಗೌಡ, ಜಿಪಂ ಸದಸ್ಯ ಎಸ್‌.ಎನ್‌. ರಾಮಸ್ವಾಮಿ, ಕೊಪ್ಪ ತಾಲೂಕು ಪಂಚಾಯತ್‌ ಅಧ್ಯಕ್ಷೆ ಜಯಂತಿ ನಾಗರಾಜ್‌, ನರಸಿಂಹರಾಜಪುರದ ಪ್ರೇಮಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.