ಕೊರೊನಾ ತಡೆಗೆ ಸಮನ್ವಯದಿಂದ ಕೆಲಸ ಮಾಡಿ
Team Udayavani, May 6, 2021, 10:47 PM IST
ಚಿಕ್ಕಮಗಳೂರು: ಕೋವಿಡ್ ಸೋಂಕು ತಡೆಗಟ್ಟಲು ಎಲ್ಲಾ ಇಲಾಖೆ ಅ ಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕೆಂದು ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಮಸ್ಯೆ ಅಥವಾ ಕೊರತೆ ಇದ್ದಲ್ಲಿ ಅವುಗಳನ್ನು ಶೀಘ್ರವೇ ಪರಿಹರಿಸಿಕೊಳ್ಳಬೇಕು. ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಕೋವಿಡ್ ನಿಯಂತ್ರಿ ಸಲು ಸಹರಿಸಬೇಕು. ಸರ್ಕಾರದ ಮಾರ್ಗಸೂಚಿ ಗಳನ್ನು ಕಡ್ಡಾಯವಾಗಿ ಕಾರ್ಯರೂಪಕ್ಕೆ ತರಬೇಕು ಎಂದರು.
ಕೋವಿಡ್ ಮೊದಲ ಅಲೆ ಸಂದರ್ಭ ದಲ್ಲಿ ಜನರ ಉತ್ತಮ ಸ ಂದನೆಯಿಂದ ಕೋವಿಡ್ ನಿಯಂತ್ರಿಸುವಲ್ಲಿ ಯಶಸ್ವಿಯಾಗಿ ದ್ದೆವು. 2ನೇ ಅಲೆ ಸಂದರ್ಭದಲ್ಲಿ ಜನರ ನಿರ್ಲಕ್ಷದಿಂದ ಸೋಂಕು ವ್ಯಪಾಕವಾಗಿ ಹರಡುತ್ತಿದೆ. ಸೋಂಕು ನಿಯಂತ್ರಣಕ್ಕೆ ಪೂರಕ ವ್ಯವಸ್ಥೆ ಯನ್ನು ಮಾಡಿಕೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮುಂದಾಗಬೇಕೆಂದು ತಿಳಿಸಿದರು.
ಕೋವಿಡ್ ನಿಯಂತ್ರಣ ಮಾಡಲು ಜಿಲ್ಲಾ ಡಳಿತಕ್ಕೆ ಸಂಪೂರ್ಣ ಅಧಿ ಕಾರ ನೀಡಿದ್ದು, ಎಲ್ಲಾ ಇಲಾಖೆ ಅಧಿ ಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. ಶಾಸಕ ಸಿ.ಟಿ.ರವಿ ಮಾತನಾಡಿ, ಸೋಂಕು ನಿಯಂತ್ರಣಕ್ಕೆ ಪೂರಕ ಸಿದ್ಧತೆ ಅವಶ್ಯವಿರುವು ದರಿಂದ ಸೋಂಕಿತರಿಗೆ ಹಾಸಿಗೆ, ಆಕ್ಸಿಜನ್, ವೆಂಟಿಲೇಟರ್ ಮತ್ತು ಲಸಿಕೆಯಂತಹ ವೈದ್ಯಕೀಯ ಸೌಲಭ್ಯಗಳ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಫಲಾನುಭವಿಗಳಿಗೆ ಯೋಜನೆಯಡಿ ಚಿಕಿತ್ಸೆ ನೀಡಬೇಕು. ಮತ್ತು ಈ ಯೋಜನೆಯಡಿ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆಗಳಲ್ಲಿ 50 ಹಾಸಿಗೆ ಮೀಸಲಿಡಬೇಕೆಂದು ತಿಳಿಸಿದರು. ಖಾಸಗಿ ಆಸ್ಪತ್ರೆಯಲ್ಲಿನ ವ್ಯವಸ್ಥೆಯನ್ನು ನೋಡಿಕೊಳ್ಳಲು ನೋಡಲ್ ಅಧಿ ಕಾರಿ ನೇಮಕ ಮಾಡಬೇಕು. ಆಂಬ್ಯುಲೆನ್ಸ್‌ಗಳನ್ನು ಕಂಡಿಷನ್ ಇರುವಂತೆ ನೋಡಿಕೊಳ್ಳಬೇಕು. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಆರೋಗ್ಯವನ್ನು ನಿತ್ಯ ವಿಚಾರಿಸು ತ್ತಿರಬೇಕೆಂದು ಅಧಿ ಕಾರಿಗಳಿಗೆ ಸೂಚಿಸಿದರು.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸ್ಥಳಾವಕಾಶವಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಸಿಗೆ ಸಿದ್ಧವಿಟ್ಟುಕೊಳ್ಳಬೇಕು. ಆಂಬ್ಯುಲೆನ್ಸ್ ಕೊರತೆಯನ್ನು ತಕ್ಷಣವೇ ನೀಗಿಸಬೇಕೆಂದರು. ಜಿಲ್ಲಾ ಧಿಕಾರಿ ಕೆ.ಎನ್.ರಮೇಶ್ ಮಾತ ನಾಡಿ, ಪ್ರತಿ ದಿನ ಆಕ್ಸಿಜನ್ ಎಷ್ಟು ಬಳಕೆಯಾ ಗುತ್ತಿದೆ. ಎಷ್ಟು ಕೊರತೆ ಇದೆ ಎಂದು ಮೇಲ್ವಿ ಚಾರಣೆ ನಡೆಸಲು ಪ್ರತಿ ತಾಲೂಕಿಗೆ ಒಬ್ಬ ವೈದ್ಯಾಧಿಕಾರಿಯನ್ನು ನೇಮಕ ಮಾಡಿ, ನಿಖರ ಮಾಹಿತಿ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿಗೆ ಸೂಚಿಸಿ ದರು.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ, ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಕೊರತೆ ಬಾರದಂತೆ ನಿಗಾ ವಹಿಸಬೇಕು. ಕೋವಿಡ್ ಕೆಲಸ ನಿರ್ವಹಿಸಲು ಸಿಬ್ಬಂ ದಿ ಕೊರತೆ ಕಂಡು ಬಂದಲ್ಲಿ ಜಿಲ್ಲಾಡಳಿತಕ್ಕೆ ವರದಿ ನೀಡುವಂತೆ ತಿಳಿಸಿದರು. ಕೋವಿಡ್ ಮತ್ತು ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ ಔಷ ಧಿ ಖರೀದಿಸಿ ಸಂಗ್ರಹಿಸಿ ಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ 3,57,354 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 3,35,944 ಮಂದಿ ನೆಗೆಟಿವ್ ಬಂದಿದೆ. 18,942 ಜನರಲ್ಲಿ ಸೋಂಕು ದೃಢವಾಗಿದೆ. 2,468 ಜನರ ಫಲಿ ತಾಂಶ ಬಾಕಿ ಇದೆ ಎಂದರು.
ಜಿಪಂ ಸಿಇಒ ಎಸ್.ಪೂವಿತ, ಎಸ್ಪಿ ಎಂ.ಎಚ್.ಅಕ್ಷಯ್, ಅಪರ ಡಿಸಿ ಬಿ.ಆರ್.ರೂಪ, ಉಪವಿಭಾಗಾಧಿ ಕಾರಿ ಎಲ್.ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.