Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹ
Team Udayavani, Nov 23, 2024, 3:41 PM IST
ಚಿಕ್ಕಮಗಳೂರು: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನ.23ರ ಶನಿವಾರ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ನಡೆದಿದೆ.
ಹೊಸಪುರ ಗ್ರಾಮದ ಜ್ಯೋತಿ ಹಾಗೂ ಚಂದ್ರು ದಂಪತಿಗಳ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ವಾಸ ಮಾಡಲು ಮನೆಯಿಲ್ಲದೇ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ದಂಪತಿಗಳು ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದರು. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ದಂಪತಿಗಳು ಕೂಲಿಗೆ ಹೋಗಿದ್ದಾಗ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ.
ಇದರಿಂದ ಬಡ ಕುಟುಂಬದ ದಂಪತಿಗಳು ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಗ ಮತ್ತು ಮಗಳು ಅತಂತ್ರರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮಕ್ಕಳು ಪುಸ್ತಕಗಳು ಸಹ ಸುಟ್ಟು ಹೋಗಿವೆ.
ಇವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಸರ್ಕಾರದ ವಸತಿ ಯೋಜನೆಗಳಿಂದ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಮೂಡಿಗೆರೆ ತಾಲೂಕಿನ ಅಕ್ರಮ ಸಕ್ರಮ ಸಮಿತಿ ಸದಸ್ಯ ಹರೀಶ್ ಪಲ್ಗುಣಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.