Chikkamagaluru: ಪಶು ಸಂಗೋಪನೆ- ರೇಷ್ಮೆಗೆ ಹೆಚ್ಚಿನ ಆದ್ಯತೆ: ಸಚಿವ ಕೆ. ವೆಂಕಟೇಶ್‌

Team Udayavani, Jan 29, 2025, 6:25 PM IST

Chikkamagaluru: ಪಶು ಸಂಗೋಪನೆ- ರೇಷ್ಮೆಗೆ ಹೆಚ್ಚಿನ ಆದ್ಯತೆ: ಸಚಿವ ಕೆ. ವೆಂಕಟೇಶ್‌

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್‌ ತಿಳಿಸಿದರು.

ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿ, ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ರೈತರ ಅನುಕೂಲಕ್ಕಾಗಿ ಪ್ರತ್ಯೇಕವಾಗಿ ಡೈರಿ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಡೈರಿ ತೆರೆಯುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕಡೂರು ಮತ್ತು ಅಜ್ಜಂಪುರ ಅಮೃತ್‌ ಮಹಲ್‌ ಕಾವಲ್‌ನಲ್ಲಿ ರಾಸುಗಳನ್ನು ಬಹಳ ಅಚ್ಚುಕಟ್ಟಾಗಿ ನೋಡಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಹ ರಾಸುಗಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕಡೂರು ಕ್ಷೇತ್ರದ ಶಾಸಕ ಕೆ.ಎಸ್‌.ಆನಂದ್‌ ಮಾತನಾಡಿ, ರಾಜ್ಯದ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ರಾಸುಗಳ ಹರಾಜಿನಲ್ಲಿ ಭಾಗವಹಿಸಿರುವುದು ವಿಶೇಷವಾಗಿದ್ದು, ಇದುವರೆಗೂ ಯಾರು ಸಹ ರಾಸುಗಳ ಹರಾಜಿನಲ್ಲಿ ಭಾಗವಹಿಸಿರುವ ಉದಾಹರಣೆಗಳಿಲ್ಲ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ| ಕೆ.ಪಿ.ಅಂಶುಮಂತ್‌ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆ ಮಲೆನಾಡು, ಬಯಲುಸೀಮೆ ಪ್ರದೇಶ ಹೊಂದಿದ್ದು, ಈ ಭಾಗದಲ್ಲಿ ಹೈನುಗಾರಿಕೆ ಮೂಲಕ ಬಹಳಷ್ಟು ರೈತರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಹಾಲು ಶಿವಮೊಗ್ಗ ಹಾಗೂ ಹಾಸನ ಡೈರಿಗೆ ಹೋಗುತ್ತಿದೆ. ಜಿಲ್ಲೆಯಲ್ಲಿ ಡೈರಿ ಸ್ಥಾಪನೆಗೆ ಬೇಕಾಗಿರುವ ಹಾಲು ಉತ್ಪಾದನೆ ನಮ್ಮ ಜಿಲ್ಲೆಯಲ್ಲಿ ಆಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಹಾಲಿನ ಡೈರಿ ಸ್ಥಾಪನೆಯಾದಲ್ಲಿ ಹೈನುಗಾರಿಕೆ ಅವಲಂಬಿತ ರೈತರಿಗೆ ಅನುಕೂಲವಾಗುತ್ತದೆ ಎಂದರು.

ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್‌.ಹರೀಶ್‌, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾ ಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಮಹಮದ್‌ ನಯಾಜ್‌, ತಾಲೂಕು ಗ್ಯಾರಂಟಿ ಯೋಜನೆ ಪ್ರಾ ಧಿಕಾರದ ಅಧ್ಯಕ್ಷ ಎಂ.ಮಲ್ಲೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ.ಮಂಜೇ ಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಪ್ರವೀಣ್‌ ಬೆಟ್ಟಗೆರೆ, ನಗರ ಕಾಂಗ್ರೆಸ್‌ ಅಧ್ಯಕ್ಷ ತನೋಜ್‌ ಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

Yogi (2)

Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

11

Rabkavi Banhatti: ಸಾಲಬಾಧೆಯಿಂದ ಬೇಸತ್ತು ಮಗ್ಗದ ಬಳಿಯೇ ನೇಕಾರ ಆತ್ಮಹ*ತ್ಯೆ

Yogi (2)

Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ

011

Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.