ಚಿಕ್ಕಮಗಳೂರು: ಬಾಡಿ ಬಿಲ್ಡರ್ ಕೊಲೆ ಆರೋಪ ಪ್ರಕರಣ, ಅಂಗಡಿಗಳ ಬಾಗಿಲು ಹಾಕಿಸಿ ಪ್ರತಿಭಟನೆ
Team Udayavani, Apr 9, 2021, 12:29 PM IST
ಚಿಕ್ಕಮಗಳೂರು : ಅನ್ಯ ಕೋಮಿನ ಯುವಕರ ಗುಂಪು ಹಿಂದು ಕಾರ್ಯನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರಿಂದ ಯುವಕ ಗಂಬೀರ ಗಾಯಗೊಂಡಿದ್ದ ಯುವಕ ಮನೋಜ್ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಎರಡು ಅನ್ನ ಕೋಮಿನ ಯುವಕರ ಗುಂಪಿನ ನಡುವೆ ಕ್ಷುಲಕ ಕಾರಣಕ್ಕೆ ಗುರುವಾರ ರಾತ್ರಿ ನಗರದ ದುಬೈನಗರದಲ್ಲಿ ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದಿದೆ.
ಇದನ್ನೂ ಓದಿ:ಡೆಬಿಟ್ ಕಾರ್ಡ ಮೂಲಕ ಎಸ್ ಬಿ ಐ ಇಎಂಐ ಸೌಲಭ್ಯ..! ಲಾಭ ಪಡೆಯುವುದು ಹೇಗೆ..?
ಈ ವೇಳೆ ಮನೋಜ್ ಮೇಲೆ ಮತ್ತೋಂದು ಗುಂಪಿನ ಯುವಕರು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮನೋಜ್ ನನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಗಾಯಗೊಂಡಿದ್ದ ಮನೋಜ್ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸಲೀಂ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ನಗರದ ಎಂ.ಜಿ ರಸ್ತೆಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಾಗಿಲು ಮುಚ್ಚಿಸಿ ಹನುಮಂತಪ್ಪ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದರು.
ಈ ವೇಳೆ ನಗರದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಪೊಲೀಸರು ಮಧ್ಯಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು. ಈ ವೇಳೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಸಿಪಿಐ ಸಲೀಂ ಒಂದು ಕೋಮಿನ ಪರ ಕೆಲಸ ಮಾಡುತ್ತಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.