Chikkamagaluru: ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ವಕೀಲನಿಗೆ ಪೊಲೀಸರಿಂದ ಹಲ್ಲೆ…
ವಕೀಲರಿಂದ ಪ್ರತಿಭಟನೆ
Team Udayavani, Dec 1, 2023, 9:37 AM IST
ಚಿಕ್ಕಮಗಳೂರು: ಹೆಲ್ಮೇಟ್ ಧರಿಸದ ಬೈಕ್ ಸವಾರ ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪ ತಡರಾತ್ರಿ ವಕೀಲರಿಂದ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.
ಹೆಲ್ಮೇಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಯುವ ವಕೀಲ ಪ್ರೀತಮ್ ಮೇಲೆ ಪೊಲೀಸರು ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆಂಬ ಆರೋಪವಿದ್ದು, ದಂಡ ಕಟ್ಟುವುದಾಗಿ ಹೇಳಿದರೂ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅದು ಮಾತ್ರವಲ್ಲದೆ ಪೊಲೀಸ್ ಠಾಣೆಗೂ ಕರೆದೊಯ್ಯಲಾಗಿದ್ದು, ಬೈಕ್ ಕೀ ಕಿತ್ತುಕೊಂಡಿದ್ದಾರೆಂದು ವಕೀಲ ಆರೋಪಿಸಿದ್ದಾನೆ.
ಯುವ ವಕೀಲನಿಗೆ ಎದೆ, ಬೆನ್ನು, ಕೈಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಕೀಲರ ಸಮೂಹ ಆಸ್ಪತ್ರೆ ಮತ್ತು ನಗರ ಪೊಲೀಸ್ ಠಾಣೆ ಮುಂದೇ ಜಮಾಯಿಸಿ, ಪೊಲೀಸರ ನಡೆ ವಿರೋಧಿಸಿ ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಬೇಟಿ ನೀಡಿದರು.
ವಕೀಲನ ಮೇಲೆ ಹಲ್ಲೆ ನಡೆಸಿರುವ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ವಕೀಲರು ತಡರಾತ್ರಿ ಎರಡು ಗಂಟೆಯವರೆಗೂ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ತೀವ್ರಗೊಳುತ್ತಿದ್ದಂತೆ ಶಶಿಕುಮಾರ್, ಗುರುಪ್ರಸಾದ್ ಎಂಬ ಪೊಲೀಸರ ಮೇಲೆ ಪ್ರಕರಣ ದಾಖಲಿಸಿ ಆರು ಜನ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ ವಿಕ್ರಮ್ ಅಮಟೆ ಆದೇಶ ಹೊರಡಿಸಿದ್ದಾರೆ. ಆರು ಜನ ಪೊಲೀಸರನ್ನು ಬಂಧಿಸಬೇಕೆಂದು ಜಿಲ್ಲಾ ವಕೀಲರ ಸಂಘ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
MUST WATCH
ಹೊಸ ಸೇರ್ಪಡೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.