ಚಿಕ್ಕಮಗಳೂರು: ಸಿನಿಮಾ ಪ್ರದರ್ಶನದ ವೇಳೆ ಗಲಾಟೆ, ಲಾಂಗ್ ನಿಂದ ಹಲ್ಲೆ
Team Udayavani, Jul 28, 2022, 9:32 PM IST
ಚಿಕ್ಕಮಗಳೂರು : ಸಿನಿಮಾ ಪ್ರದರ್ಶನದ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಲಾಂಗ್-ಮಚ್ಚುಗಳಿಂದ ಹೊಡೆದಾಡಿರುವ ಘಟನೆ ನಗರದ ಚಿತ್ರಮಂದಿರದಲ್ಲಿ ನಡೆದಿದೆ.
ಮ್ಯಾಟ್ನಿ ಶೋ ಆರಂಭವಾಗುತ್ತಿದ್ದಂತೆ ಚಿತ್ರಮಂದಿರದ ಒಳಗೆ ಬಾಗಿಲ ಪಕ್ಕದ ಸೀಟ್‍ನಲ್ಲಿ ಕೂತಿದ್ದ ಒಂದು ಯುವಕರ ಗುಂಪು ಮೇಲಿಂದ ಮೇಲೆ ಹೊರಗಡೆ ಹೋಗಿ ಬರುತ್ತಿದ್ದರು. ಈ ವೇಳೆ ಮತ್ತೊಂದು ಗುಂಪಿನ ಯುವಕರು ಎಷ್ಟು ಸಲ ಹೊರಗೆ ಬರುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಈ ವೇಳೆ ಲಾಂಗ್-ಮಚ್ಚುಗಳಿಂದ ಹಲ್ಲೆ ನಡೆಸಲಾಗಿದೆ.
ಒಳಗೆ ಆರಂಭವಾದ ಜಗಳ ಟಾಕೀಸ್‍ನ ಹೊರಾಂಗಣದಲ್ಲೂ ಮುಂದುವರೆದು ಹಲ್ಲೆ ಮಾಡಿ ಲಾಂಗ್ ಬೀಸಿದ್ದಾರೆ. ಭರತ್ ಎಂಬ ಯುವಕನಿಗೆ ತೀವ್ರ ಗಾಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಭರತ್ ಕಡೆ ಹುಡುಗರು ಆಸ್ಪತ್ರೆ ಮುಂಭಾಗ ಸೇರಿ ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆ ಮುಂಭಾಗ ಯುವಕರ ಗುಂಪನ್ನ ಕಂಡ ಪೊಲೀಸರು ಗದರಿಸಿ ಎಲ್ಲರನ್ನೂ ಚದುರಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆಗೆ ಹಳೇ ವೈಷಮ್ಯ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.