Chikkamagaluru: ಹಾರೆಯಿಂದ ತಲೆಗೆ ಹೊಡೆದು ಮಗನನ್ನೇ ಹತ್ಯೆ ಮಾಡಿದ ತಂದೆ
Team Udayavani, Aug 7, 2024, 7:17 PM IST
ಚಿಕ್ಕಮಗಳೂರು: ತಂದೆಯೇ ತನ್ನ ಮಗನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂದಿರಾ ನಗರ ಎಂಬಲ್ಲಿ ಈ ಘಟನೆ ನಡೆದಿದೆ.
ತಂದೆ ಗೋಪಾಲಗೌಡ ತನ್ನ ಮಗ ಪ್ರಸನ್ನ(38 ವರ್ಷ) ಎಂಬುವರನ್ನು ಮಂಗಳವಾರ ರಾತ್ರಿ ಮಾಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಇಂದಿರಾ ನಗರ ಮನೆಯಲ್ಲಿ ಒಟ್ಟಾಗಿ ವಾಸಿಸುತ್ತಿದ್ದ ತಂದೆ ಹಾಗೂ ಮಗ ಪರಸ್ಪರ ಜಗಳ ಮಾಡಿಕೊಂಡಿದ್ದು ಜಗಳ ವಿಕೋಪಕ್ಕೆ ಹೋಗಿ ಮನೆಯಲ್ಲಿದ್ದ ಹಾರೆಯಿಂದ ಮಗನ ತಲೆಗೆ ಹೊಡೆದಿದ್ದು ತೀವ್ರ ಗಾಯಗೊಂಡ ಮಗ ಪ್ರಸನ್ನ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೂಡಿಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕೊಲೆ ಆರೋಪಿ ಗೋಪಾಲಗೌಡನನ್ನು ಬಂಧಿಸಿದ್ದಾರೆ.
ಮೃತ ಪ್ರಸನ್ನ ವಿವಾಹವಾಗಿದ್ದು ಪತ್ನಿ ತನ್ನ ಮಕ್ಕಳೊಂದಿಗೆ ಬೇರೆಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ತಂದೆ ಮತ್ತು ಮಗ ಒಟ್ಟಾಗಿ ಇಂದಿರಾನಗರದ ಸೈಟ್ ಮನೆಯಲ್ಲಿ ವಾಸವಾಗಿದ್ದರು. ಪ್ರತಿದಿನ ಇಬ್ಬರು ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಗಲಾಟೆ ವಿಕೋಪಕ್ಕೆ ತಿರುಗಿ ಮಗನ ಕೊಲೆಯಲ್ಲಿ ಅಂತ್ಯವಾಗಿದೆ.
ಇದನ್ನೂ ಓದಿ:Paris Olympics: ವಿನೇಶ್ ಪೋಗಾಟ್ ಆರೋಗ್ಯ ವಿಚಾರಿಸಿದ ಐಒಎ ಅಧ್ಯಕ್ಷೆ ಪಿ.ಟಿ.ಉಷಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.