ಅನೈತಿಕ ಚಟುವಟಿಕೆ ತಾಣವಾದ ಉದ್ಯಾನವನ

ದಂಟರಮಕ್ಕಿ ಕೆರೆಯಲ್ಲಿ ಹೂಳು ತುಂಬಿ ದುರ್ವಾಸನೆ ವಿರೂಪಗೊಂಡ ವಿವೇಕಾನಂದರ ಪ್ರತಿಮೆ ಬಳಿ ಮೋಜು-ಮಸ್ತಿ

Team Udayavani, Mar 14, 2020, 3:50 PM IST

14-March-18

ಚಿಕ್ಕಮಗಳೂರು: ಜಿಲ್ಲಾ ಕೇಂದ್ರಕ್ಕೆ ಆಗಮಿಸುವ ಜನರನ್ನು ಸ್ವಾಗತಿಸುವ ದಂಟರಮಕ್ಕಿ ಕೆರೆ ಹೂಳು ತುಂಬಿಕೊಂಡು ದುರ್ವಾಸನೆ ಬೀರುತ್ತಿದೆ. ಮಾತ್ರವಲ್ಲ, ಕೆರೆಯ ಮಧ್ಯ ಭಾಗದಲ್ಲಿ ನಿರ್ಮಿಸಿರುವ ಉದ್ಯಾನವನದಲ್ಲಿ ಸ್ಥಾಪಿಸಿರುವ ಸ್ವಾಮಿ ವಿವೇಕಾನಂದರ ಪ್ರತಿಮೆ ವಿರೂಪಗೊಂಡ ಕಾರಣ ಹಿಂದೆ ದೊಡ್ಡ ಸುದ್ದಿ ಮಾಡಿತ್ತು. ಇದೀಗ ಅದೇ ಉದ್ಯಾನವನ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣಗಳಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ವಾಸ್ತವ್ಯ ಹೂಡುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುವ ಉದ್ದೇಶದಿಂದ ಈ ಹಿಂದೆ ದಂಟರಮಕ್ಕಿ ಕೆರೆಯ ಮಧ್ಯ ಭಾಗದಲ್ಲಿ ನಗರಸಭೆಯಿಂದ ಉದ್ಯಾನವನ್ನು ನಿರ್ಮಾಣ ಮಾಡಲಾಗಿದೆ. ದ್ವೀಪದಂತಿರುವ ಏರಿಯ ಮೇಲೆ ಬಿದಿರು ಸೇರಿದಂತೆ ಅನೇಕ ಗಿಡಗಳನ್ನು ಬೆಳೆಸಲಾಗಿದೆ. ಉದ್ಯಾನದಲ್ಲಿ ವಿಹರಿಸುವವರಿಗೆ ಅನುಕೂಲವಾಗುವ ದೃಷ್ಟಿಯಿಂದ ಫುಟ್‌ಪಾತ್‌ ನಿರ್ಮಾಣ ಮಾಡಲಾಗಿದೆ. ಮಧ್ಯಭಾಗದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ.

ವಿವೇಕಾನಂದರ ಪ್ರತಿಮೆ ವಿರೂಪಗೊಂಡಿರುವ ಕಾರಣಕ್ಕೆ ಹಿಂದೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆ ದಿನಗಳಲ್ಲಿ ಒಂದಿಷ್ಟು ಸರಿಪಡಿಸುವ ಕಾರ್ಯಕ್ಕೆ ಕೈ ಹಾಕಿದರೂ ವಿವೇಕಾನಂದರ ಪ್ರತಿಮೆ ಮಾತ್ರ ಇನ್ನೂ ಸುಂದರ ರೂಪ ಪಡೆದುಕೊಂಡಿಲ್ಲ. ಪ್ರತಿಮೆಯ ಸುತ್ತಲು ಗಿಡಗಂಟಿಗಳು ಬೆಳೆದು ನಿಂತಿದ್ದು, ಆದರ್ಶ ಪುರುಷನ ಸ್ಥಿತಿಕಂಡು ಪರಿತಪಿಸುವಂತಾಗಿದೆ.

ಇನ್ನೂ ಉದ್ಯಾನವನದ ಸುತ್ತಮುತ್ತಲು ಸಾರ್ವಜನಿಕರು ಕುಳಿತು ಕಾಲ ಕಳೆಯುತ್ತಾ ಸುತ್ತಮುತ್ತಲ ಪ್ರಕೃತಿ ಸೌಂದರ್ಯವನ್ನು ಸವಿಯಲಿ ಎಂಬ ಉದ್ದೇಶದಿಂದ ಪ್ರತಿಮೆಯ ಸುತ್ತ ಮೆಟ್ಟಿಲುಗಳನ್ನು ನಿರ್ಮಾಣ ಮಾಡಲಾಗಿದೆ. ಮೆಟ್ಟಿಲುಗಳ ಹಿಂಭಾಗದಲ್ಲಿ ಮಳಿಗೆ ರೂಪದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಮಳಿಗೆಯಂತಿರುವ ಸ್ಥಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಮಳಿಗೆಯೊಳಗೆ ಬೆಂಕಿ ಹಾಕಿ, ಮದ್ಯದ ಪಾರ್ಟಿ ಮಾಡಿ ಅವುಗಳ ಅವಶೇಷಗಳನ್ನು ಅಲ್ಲಿಯೇ ಬಿಡಲಾಗಿದೆ.

ಸುತ್ತಲ ಪ್ರದೇಶ ಮದ್ಯದ ಬಾಟಲಿಗಳಿಂದ ತುಂಬಿ ತುಳುಕುತ್ತಿವೆ. ಕೆಲವರು ಮದ್ಯದ ಬಾಟಲಿಗಳನ್ನು ಒಡೆದು ಹಾಕಿದ್ದು, ಬಾಟಲಿ ಚೂರುಗಳು ಚಲ್ಲಾಪಿಲ್ಲಿಯಾಗಿ ಎಲ್ಲೆಂದರಲ್ಲಿ ಬಿದ್ದಿವೆ. ಇಸ್ಪೀಟ್‌ ಅಡ್ಡೆಯಾಗಿ ನಿರ್ಮಾಣವಾಗಿದ್ದು, ಎಲ್ಲೆಂದರಲ್ಲಿ ಇಸ್ಪೀಟ್‌ ಎಲೆಗಳು ಬಿದ್ದಿವೆ. ಉದ್ಯಾನವನ ಅಭಿವೃದ್ಧಿ ಕಾಮಗಾರಿ ನನೆಗುದಿಗೆ ಬಿದ್ದಿರುವುದರಿಂದ ಜನ ಸಂಚಾರ ವಿರಳವಾಗಿದೆ. ಕಾಲೇಜು ವಿದ್ಯಾರ್ಥಿಗಳ ಧೂಮಪಾನ ಕೇಂದ್ರವಾಗಿರುವುದಲ್ಲದೇ, ಕಾಮುಕರ ಅಡ್ಡೆಯಾಗಿ ನಿರ್ಮಾಣವಾಗಿದೆ. ಉದ್ಯಾನವನ ಆವರಣದ ಸುತ್ತಲು ನೆಟ್ಟಿರುವ ಬಿದಿರು ಗಿಡಗಳ ಬುಡದಲ್ಲಿ ಮದ್ಯದ ಬಾಟಲಿಯ ಜೊತೆಗೆ ಕೆಲ ಮತ್ತೇರಿಸುವ ಸೆಲ್ಯೂಷನ್‌ನಂತಹ ಪ್ಯಾಕ್‌ಗಳು ಕಣ್ಣಿಗೆ ರಾಚುತ್ತವೆ. ಇದರ ನಡುವೆ ಸ್ವಾಮಿ ವಿವೇಕಾನಂದರ ಪ್ರತಿಮೆ ಹಿಂಭಾಗದಲ್ಲಿ ವಾಮಾಚಾರ ನಡೆಸಿರುವ ಕುರುಹುಗಳಿವೆ.

ಒಡೆದ ಮೊಟ್ಟೆ ಚೂರು, ಅನ್ನ, ಕುಂಕುಮ, ಪ್ರಾಣಿ ಅಥವಾ ಪಕ್ಷಿ ಬಲಿ ನೀಡಿ ವಾಮಾಚಾರ ನಡೆಸಿರುವ ಕುರುಹುಗಳು ಸಿಗುತ್ತವೆ. ಯುವ ಜನತೆಯ ಆದರ್ಶ ಪುರುಷನ ಪ್ರತಿಮೆ ಸುತ್ತಮುತ್ತಲ ಪ್ರದೇಶ ಅನೈತಿಕ ಚಟುವಟಿಕೆ ತಾಣವಾಗಿರುವುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ.

ದಂಟರಮಕ್ಕಿ ಕೆರೆ ಹಾಗೂ ಕೋಟೆ ಕೆರೆ ನಗರದ ಸೌಂದರ್ಯವನ್ನು ಮೆರಗುಗೊಳಿಸುವ ಎರಡು ಸುಂದರ ಕೆರೆಗಳಾಗಬೇಕಿತ್ತು ಆದರೆ, ಕಾಯಕಲ್ಪ ಕಾಣದೇ ಪಾಳುಬಿದ್ದ ಕೆರೆಯಂತಾಗಿದ್ದು, ನಗರದ ಅಂದವನ್ನೇ ಕೆಡಿಸುತ್ತಿವೆ. ದಂಟರಮಕ್ಕಿ ಕೆರೆಯಂಗಳದಲ್ಲಿನ ಸ್ವಾಮಿ ವಿವೇಕಾನಂದರ ಪ್ರತಿಮೆ ವಿರೂಪವಾಗಿರುವುದನ್ನು ಇದುವರೆಗೂ ಸರಿಪಡಿಸಿಲ್ಲ. ಇದು ಆದರ್ಶ ಪುರುಷನಿಗೆ ಮಾಡಿರುವ ಅವಮಾನ. ಉದ್ಯಾನವನ ಕೂಡ ಪಾಳು ಬಿದ್ದಿದ್ದು, ಅನೈತಿಕ ಚಟುವಟಿಕೆ ತಾಣವಾಗಿ ಮಾರ್ಪಟಿರುವುದು ಬೇಸರದ ಸಂಗತಿ.
ಗುರುದತ್‌, ಸ್ಥಳೀಯರು

ಪಾರ್ಕ್‌ ಸುತ್ತಮುತ್ತ ಮದ್ಯದ ಬಾಟಲಿಗಳೇ ತುಂಬಿದ್ದು, ಅನೈತಿಕ ಚಟುವಟಿಕೆ ತಾಣವಾಗಿ ಮಾರ್ಪಟಿದೆ. ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಶೀಘ್ರದಲ್ಲಿ ಸುಂದರ ಮೂರ್ತಿಯಾಗಿ ರೂಪಿಸಬೇಕು ಮತ್ತು ಉದ್ಯಾನವನ್ನು ಅಭಿವೃದ್ಧಿಪಡಿಸಿ, ಸುತ್ತಲು ಬೇಲಿ ನಿರ್ಮಿಸಿ ಕಾವಲುಗಾರರನ್ನು ನೇಮಿಸಲು ಕ್ರಮ
ಕೈಗೊಳ್ಳಬೇಕು.
ಸಂಜಯ್‌, ಸ್ಥಳೀಯರು

„ಸಂದೀಪ್‌ ಜಿ.ಎನ್‌. ಶೇಡಗಾರ

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.