Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
Team Udayavani, Apr 22, 2024, 4:14 PM IST
ಚಿಕ್ಕಮಗಳೂರು: ಎಚ್ ಡಿ ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು. ದೇವೇಗೌಡರನ್ನು ಏನಾದರೂ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ್ದರಾ? ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು ಅವರು. ಆಗ ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ. ನಾನು-ದೇವೇಗೌಡ ಎಲ್ಲ ಒಟ್ಟಿಗೆ ಇದ್ದೆವಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತರೀಕೆರೆಯಲ್ಲಿ ಮಾತನಾಡಿದ ಅವರು, ದೇಶ ಕಾಯಲು ಮೋದಿ, ಕಾವೇರಿ ಕಾಯಲು ಕುಮಾರಣ್ಣ ಬೇಕು ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ದೇಶದಲ್ಲಿ ಪ್ರಕ್ಷುಬ್ಧತೆ ಮಾಡಿದವರು ಯಾರು? ಬಿಜೆಪಿ ಸಮಾಜ ಒಡೆಯಲು ಯತ್ನಿಸುತ್ತಿದ್ದಾರೆ, ನಾವು ಅದಕ್ಕೆ ಭಾರತ್ ಜೋಡೋ ಯಾತ್ರೆ ಮಾಡಿದ್ದು ಎಂದರು.
ಕಾವೇರಿಗೆ ದೇವೇಗೌಡ, ಕುಮಾರಸ್ವಾಮಿ ಅವರ ಪಾತ್ರ ಏನು? ಅವರು ಏನಾದರೂ ಮಾಡಿದ್ದೇವೆ ಎಂದು ಹೇಳಿದ್ದಾರಾ? ಪ್ರಧಾನ ಮಂತ್ರಿ ಕೆಲಸವೇ ದೇಶ ಕಾಯುವುದು, ದೇಶಕ್ಕೆ ರಕ್ಷಣೆ ಕೊಡುವುದು. ಇಂದಿರಾಗಾಂಧಿ, ನೆಹರೂ, ರಾಜೀವ್ ಗಾಂಧಿ, ನರಸಿಂಹರಾವ್ ಮಾಡಲಿಲ್ವಾ. ಇವರು ಮಾತ್ರ ಕಾಯುತ್ತಿದ್ದಾರಾ ಎಂದು ಕೇಳಿದರು.
ರಾಜ್ಯ ಸರ್ಕಾರದ ವಿರುದ್ಧ ಚಿಪ್ಪು ಜಾಹೀರಾರು ಕೊಡುತ್ತೇವೆಂದ ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಾವು ಕೊಟ್ಟ ಮೇಲೆ ಅವರು ಯೋಚನೆ ಮಾಡುವುದು ಬೇರೆ. ಹೆಣ್ಣು ಮಕ್ಕಳಿಗೆ 2000 ಹಣ ಕೊಟ್ಟೆವು, ಅದು ಚಿಪ್ಪಾ. ಹೆಣ್ಣು ಮಕ್ಕಳು ಉಚಿತವಾಗಿ ಬಸ್ಸಿನಲ್ಲಿ ಓಡಾಡ್ತಿದ್ದಾರೆ. ಅನ್ನಭಾಗ್ಯ 5 ಕೆ.ಜಿ.ಜಾಸ್ತಿ ಮಾಡಿದ್ದು ಚಿಪ್ಪಾ? ಎಲ್ಲರಿಗೂ ಫ್ರೀಯಾಗಿ ಕರೆಂಟ್ ಕೊಡುವುದು ಚಿಪ್ಪಾ? ಯುವನಿಧಿ, ತಿಂಗಳಿಗೆ 4-5 ಸಾವಿರ ಕುಟುಂಬಕ್ಕೆ ಕೊಡುವುದು ಚಿಪ್ಪಾ? ಅವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.