ಶಿವಮೊಗ್ಗದಲ್ಲಿ ಕೋವಿಡ್ -ಜಿಲ್ಲೆಯಲ್ಲಿ ಡವ ಡವ!
Team Udayavani, May 11, 2020, 12:59 PM IST
ಚಿಕ್ಕಮಗಳೂರು: ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ 8 ಕೋವಿಡ್ ಪಾಸಿಟಿವ್ ಪ್ರಕರಣಗಳು ಭಾನುವಾರ ಕಂಡು ಬಂದಿದ್ದು, ಕಾಫಿ ನಾಡಿನ ಜನತೆಯಲ್ಲೂ ಈಗ ಡವ ಡವ… ಶುರುವಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ ಪಾಸಿಟಿವ್ ಪ್ರಕರಣ ಕಂಡು ಬಾರದ ಹಿನ್ನೆಲೆಯಲ್ಲಿ ಮೂರನೇ ಹಂತದ ಲಾಕ್‌ಡೌನ್ ನಿರ್ಬಂಧಗಳಿಗೆ ಸಡಲಿಕೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಒಂದೇ ಒಂದು ಪ್ರಕರಣ ಕಂಡು ಬಾರದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಹಾಸನ, ಜಿಲ್ಲೆ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದವು. ಆದರೆ, ಲಾಕ್‌ಡೌನ್ ಸಡಲಿಕೆ ನಂತರ ಚಿಕ್ಕಮಗಳೂರು ನೆರೆಯ ಜಿಲ್ಲೆ ದಾವಣಗೆರೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ದಾಖಲಾದ ನಂತರ ಹಸಿರು ವಲಯ ಪಟ್ಟಿಯಿಂದ ಹೊರಬಿತ್ತು. ನಂತರ ಚಿತ್ರದುರ್ಗ ಜಿಲ್ಲೆಯಲ್ಲೂ ಕೊರೊನಾ ಪ್ರಕರಣ ಕಂಡು ಬಂದಿದ್ದು, ಈಗ ನೆರೆಯ ಜಿಲ್ಲೆ ಶಿವಮೊಗ್ಗದಲ್ಲೂ ಪಾಸಿಟಿವ್ ಪ್ರಕರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕಾಫಿ ನಾಡಿನ ಜನರಲ್ಲೂ ಸಹಜವಾಗಿ ಆತಂಕ ಸೃಷ್ಟಿಯಾಗಿದೆ.
ಜಿಲ್ಲೆ ಹಸಿರು ವಲಯದಲ್ಲಿದ್ದು, ವಿದೇಶದಿಂದ ಮರಳಿದ ಮತ್ತು ಕೋವಿಡ್ ಸೋಂಕಿನ ಶಂಕೆಯಿರುವ 813 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಪರೀಕ್ಷಾ ವರದಿಗಳು ನೆಗೆಟಿವ್ ಬಂದಿದ್ದು, ಕೋವಿಡ್ ಮುಕ್ತ ಜಿಲ್ಲೆಯಾಗಿ ಗುರುತಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.