ಪ್ಲಾಸ್ಟಿಕ್ ಮುಕ್ತ ಗ್ರಾಮಕ್ಕೆ ಜನರ ಸಹಕಾರ ಅಗತ್ಯ
Team Udayavani, Feb 2, 2020, 5:10 PM IST
ಚಿಕ್ಕಮಗಳೂರು: ಪ್ಲಾಸ್ಟಿಕ್ ಮುಕ್ತ ಗ್ರಾಮ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ.ಪ್ಲಾಸ್ಟಿಕ್ ಬಳಕೆಯ ಬದಲು ಕಾಗದ ಹಾಗೂ ಬಟ್ಟೆಯ ಕವರ್ ಬಳಸಿ ಸ್ವಚ್ಛ ಗ್ರಾಮವಾಗಿಸಲು ಗ್ರಾಮಸ್ಥರು ಕೈಜೋಡಿಸಬೇಕೆಂದು ಬಣಕಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಮತ್ತಿಕಟ್ಟೆ ಹೇಳಿದರು.
ಬಣಕಲ್ ಗ್ರಾಮ ಪಂಚಾಯತ್ ಆವರಣದಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮದ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದ ವಸ್ತುವಾಗಿದ್ದು, ನಾವು ಉಪಯೋಗಿಸುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಸೆಯುವುದರಿಂದ ಅವು ಮಣ್ಣಿಗೆ ಸೇರಿ ಕರಗದೆ ಜಾನುವಾರುಗಳ ಹೊಟ್ಟೆ ಪಾಲಾಗುತ್ತಿವೆ. ಜಾನುವಾರುಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಕರಗದೆ ಅವು ಸಾವಿನಂಚಿಗೆ ತಲುಪಿವೆ. ಇಂತಹ ವಿಷಯುಕ್ತ ಪ್ಲಾಸ್ಟಿಕ್ ತೊಲಗಿಸಿ ಸ್ವಚ್ಛ ಭಾರತದ ಕನಸು ನನಸಾಗಲು ಮುಂದಾಗಬೇಕೆಂದು ತಿಳಿಸಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಮಾತನಾಡಿ, ದೇಶ ಸ್ವಚ್ಛವಾಗಲು ಗ್ರಾಮಗಳು ಮೊದಲು ಸ್ವಚ್ಛವಾಗಿರಬೇಕು. ವರ್ತಕರು ಕೂಡ ಪ್ಲಾಸ್ಟಿಕ್ ತೊಲಗಿಸಲು ಸಹಕರಿಸಬೇಕು. ಬಣಕಲ್‌ನಲ್ಲಿ ಫೆಬ್ರವರಿಯಿಂದ ಪ್ಲಾಸ್ಟಿಕ್ ಅನ್ನು ಸಂಪೂರ್ಣ ನಿಷೇಧಿಸಲು ವರ್ತಕರಿಗೆ ನೋಟಿಸ್ ನೀಡಿದ್ದು, ಇದಕ್ಕೆ ಸಹಕರಿಸಬೇಕು ಎಂದರು.
ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮೀ , ಮಾಜಿ ಅಧ್ಯಕ್ಷ ಬಿ.ಬಿ. ಸುರೇಶ್, ಸದಸ್ಯರಾದ ದಿಲ್‌ದಾರ್ ಬೇಗಂ, ಬಿ.ಕೆ ಸುರೇಶ್, ರಾಮಚಂದ್ರ, ಅನಿಲ್, ಪ್ರಶಾಂತಿ, ಮಯೂರ, ಭಾರತಿ, ಪ್ರಮೀಳಾ, ಲೆಕ್ಕಾಧಿಕಾರಿ ನಾಣಯ್ಯ, ಸಿಬ್ಬಂದಿ ಸುಧೀರ್, ಮಂಜುಳಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.