Chikkamagaluru ಜಿನ್ನಾ- ಕಾಂಗ್ರೆಸ್ ಮನಸ್ಥಿತಿ ಬೇರೆಯಲ್ಲ: ಸಿ.ಟಿ.ರವಿ
Team Udayavani, Dec 24, 2023, 7:25 PM IST
ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ರಾಜಕೀಯ ಲಾಭಕ್ಕೆ ಸಮಾಜದಲ್ಲಿನ ಶಾಂತಿ ಕದಡಿ ರಾಜಕೀಯ ಲಾಭ ಪಡೆಯುವ ಸಂಚು ಹೂಡಿದ್ದು ಅದು ಅವರ ಹೇಳಿಕೆಯಲ್ಲಿ ವ್ಯಕ್ತವಾಗಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಸಮವಸ್ತ್ರ ಇರಬೇಕೋ, ಬೇಡವೋ ಎನ್ನುವುದು ಚರ್ಚೆಯ ವಿಷಯವಾಗಬಾರದು. ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಯಾವ ಉದ್ದೇಶಕ್ಕೆ ತಂದಿದ್ದಾರೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. ಇದು ಅರ್ಥ ಮಾಡಿಕೊಳ್ಳದೆ ಶಾಲಾ-ಕಾಲೇಜು ಮಕ್ಕಳಲ್ಲಿಯೂ ಜಾತಿ ಮತ್ತು ಕೋಮುವಾದದ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ.
ಶಾಲಾ ಮಕ್ಕಳಲ್ಲಿ ವಿಷ ಬೀಜ ಬಿತ್ತುವುದು, ಕೋಮುವಾದ ಬಿತ್ತುವುದು ಅದೊಂದು ರಾಷ್ಟ್ರಘಾತಕ ಕೆಲಸ. ಮಹಮದ್ ಆಲಿ ಜಿನ್ನಾ ಮತ್ತು ಕಾಂಗ್ರೆಸ್ ಮನಸ್ಥಿತಿ ಬೇರೆ ಬೇರೆಯಲ್ಲ. ಜಿನ್ನಾ ಕೂಡ ಪ್ರತ್ಯೇಕತೆ ಭಾವನೆಯನ್ನು ಬಿತ್ತಿ ಬೆಳೆಸಿ, ಆ ಮೂಲಕ ಭಾರತದ ವಿಭಜನೆಗೆ ಕಾರಣನಾದ. ಇವತ್ತು ಕಾಂಗ್ರೆಸ್ ತನ್ನ ರಾಜಕೀಯ ಲಾಭಕ್ಕೆ ಶಾಲಾ ಮಕ್ಕಳಲ್ಲೂ ಪ್ರತ್ಯೇಕತೆ ಭಾವನೆ ಬಿತ್ತಿ ಸಮಾಜವನ್ನು ಒಡೆಯುತ್ತಿದೆ. ಇದು ಅಕ್ಷಮ್ಯ ಅಪರಾಧ. ಈ ಮನಸ್ಥಿತಿಯನ್ನು ಇತಿಹಾಸ ಮತ್ತು ವರ್ತಮಾನವೂ ಕ್ಷಮಿಸುವುದಿಲ್ಲ.
ಬಾಬಾಬುಡನ್ ದರ್ಗಾ ಹಾಗೂ ದತ್ತಪೀಠವೇ ಬೇರೆ ಬೇರೆ ಎನ್ನುವುದನ್ನು ನಿರಂತರವಾಗಿ ಹೇಳುತ್ತಾ ಬಂದಿದ್ದೇವೆ. ಈ ಬಗ್ಗೆ ತನಿಖೆ ನಡೆಸಿ ಸತ್ಯ ಮತ್ತು ದಾಖಲೆಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.