Chikkamagaluru: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ
Team Udayavani, Dec 9, 2023, 4:11 PM IST
ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಶನಿವಾರ ಪತ್ತೆಯಾಗಿದ್ದಾನೆ.
ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ಅಡಿ ಆಳಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಯುವಕ ಬೆಟ್ಟದಿಂದ ಪ್ರಪಾತಕ್ಕೆ ನಗೆದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹಿಸಲಾಗಿದೆ.
ಬೆಂಗಳೂರು ಮೂಲದ ಭರತ್ (30 ವರ್ಷ) ಸಾವಿಗೀಡಾಗಿರುವ ಯುವಕ.
ಡಿ. 6ರಂದು ಬೆಂಗಳೂರಿನಿಂದ ದುರ್ಗದಹಳ್ಳಿ ಸಮೀಪದ ರಾಣಿಝರಿಗೆ ಟ್ರಕ್ಕಿಂಗ್ ಎಂದು ಬಂದಿದ್ದ ಯುವಕ ನಾಪತ್ತೆಯಾಗಿದ್ದ. ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮೊಬೈಲ್ ನಾಟ್ ರೀಚಬಲ್ ಆಗಿತ್ತು. ರಾಣಿಝರಿ ಬಳಿ ಯುವಕನ ಬೈಕ್ ನಿಲ್ಲಿಸಲಾಗಿತ್ತು. ಬೈಕ್ ಬಳಿಯಲ್ಲಿ ಮೊಬೈಲ್, ಟೀ ಶರ್ಟ್, ಚಪ್ಪಲಿ ಸಿಕ್ಕಿದ್ದವು. ಬೈಕ್ ಗೆ ಐಡಿ ಕಾರ್ಡ್ ಮತ್ತು ಬ್ಯಾಗ್ ಸಿಕ್ಕಿಸಿ ನಾಪತ್ತೆಯಾಗಿದ್ದ.
ಶುಕ್ರವಾರ ಬೆಂಗಳೂರಿನಿಂದ ಅವರ ಕುಟುಂಬದವರು ಆಗಮಿಸಿದ್ದರು. ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇಂದು ಬೆಳಿಗ್ಗೆಯಿಂದ ಯುವಕನ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗಿತ್ತು.
ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಧರ್ಮಸ್ಥಳ ವಿಪತ್ತು ನಿರ್ವಹಣ ತಂಡ, ಬಣಕಲ್ ಸಮಾಜ ಸೇವಕ ಆರೀಫ್ ಮತ್ತು ಅವರ ಸ್ನೇಹಿತರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಏಳೆಂಟು ಡ್ರೋಣ್ ಕ್ಯಾಮರಗಳನ್ನು ಬಳಸಿಯೂ ಶೋಧ ನಡೆಸಲಾಗಿತ್ತು.
ಇಂದು ಮಧ್ಯಾಹ್ನದ ಹೊತ್ತಿಗೆ ಯುವಕ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಶೋಧ ಕಾರ್ಯ ನಡೆಸುತ್ತಿದ್ದ ತಂಡ ಸುಮಾರು 25 ಮಂದಿಯ ತಂಡ ಮೈದಾಡಿ ಕಡೆಯಿಂದ ಬೆಟ್ಟವನ್ನು ಇಳಿದು ಬೆಳ್ತಂಗಡಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶವವನ್ನು ಪತ್ತೆ ಹಚ್ಚಿದೆ. ಸುಮಾರು ನಾಲ್ಕು ಸಾವಿರ ಅಡಿಯಿಂದ ಯುವಕ ಕೆಳಗೆ ಬಿದ್ದಿದ್ದು, ಆತನ ದೇಹ ಛಿದ್ರವಾಗಿದ್ದು, ಕೊಳೆತ ಸ್ಥಿತಿಗೆ ತಲುಪಿದೆ ಎಂದು ತಿಳಿದುಬಂದಿದೆ.
ವ್ಯೂ ಪಾಯಿಂಟ್ ನಿಂದ ಹಾರಿ ಆತ್ಮಹತ್ಯೆ ?
ರಾಣಿಝರಿ ಸಮೀಪದಲ್ಲಿರುವ ವ್ಯೂ ಪಾಯಿಂಟ್ ನಿಂದಲೇ ಯುವಕ ಕೆಳಗೆ ಹಾರಿರುವ ಸಾಧ್ಯತೆಯಿದೆ ಎನ್ನಲಾಗಿದೆ. ವ್ಯೂ ಪಾಯಿಂಟ್ ನೇರದಲ್ಲಿಯೇ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.
ಭರತ್ ಇಂಜಿನಿಯರ್ ಪದವೀಧರನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.