ಮಂಗನ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕೆ.ಎಸ್.ಪ್ರಭು ಸ್ಪಷ್ಟನೆ
Team Udayavani, Jan 19, 2020, 7:50 PM IST
ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಮತ್ತೆ ಕಾಣಿಸಿಕೊಂಡಿದ್ದರಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಕೆ.ಎಸ್.ಪ್ರಭು ತಿಳಿಸಿದರು.
ಶನಿವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ತರೀಕೆರೆ ತಾಲೂಕಿನಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿತ್ತು. ಆರೋಗ್ಯ ಇಲಾಖೆ ತಕ್ಷಣ ಮುಂಜಾಗ್ರತೆ ಕೈಗೊಂಡ ಹಿನ್ನೆಲೆಯಲ್ಲಿ ಕಾಯಿಲೆ ಹರಡದಂತೆ ತಡೆಗಟ್ಟಲಾಯಿತು. 2020ರಲ್ಲಿ ಶಿವಮೊಗ್ಗ ಲ್ಲೆಯಲ್ಲಿ ಮತ್ತೆ ಮಂಗನಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಗೆ ವ್ಯಾಪಿಸದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
2019ರಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡ ಪ್ರದೇಶಗಳಲ್ಲಿ ಈಗಾಗಲೇ ಮೂರು ಸುತ್ತಿನ ಚುಚ್ಚುಮದ್ದು ನೀಡಲಾಗಿದೆ. ಅರಣ್ಯ ಪ್ರದೇಶದ ಜನರಿಗೆ ಡಿಎಂಪಿ ತೈಲವನ್ನು ವಿತರಣೆ ಮಾಡಲಾಗಿದೆ. ಅರಣ್ಯ ಪ್ರದೇಶದ ಜನರು ಇದನ್ನು ಬಳಕೆ ಮಾಡಿಕೊಳ್ಳಬೇಕು. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ ಕಾಯಿಲೆ ಕಂಡು ಬಂದಿರುವುದರಿಂದ ಅಗತ್ಯವಿರುವಷ್ಟು ಚುಚ್ಚುಮದ್ದು ಹಾಗೂ ಡಿಎಂಪಿ ತೈಲವನ್ನು ತರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದುವರೆಗೂ ಜಿಲ್ಲೆಯಲ್ಲಿ ಕೆಎಫ್‌ಡಿ ಪತ್ತೆಯಾಗಿಲ್ಲ. ಪಕ್ಕದ ಜಿಲ್ಲೆ ಶಿವಮೊಗ್ಗದಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ತೋಟಗಳಲ್ಲಿ ಕೆಲಸ ಮಾಡುವವರು, ಅರಣ್ಯ ಪ್ರದೇಶದೊಳಗೆ ಹೋಗುವವರು ಡಿಎಂಪಿ ತೈಲವನ್ನು ಮೈಗೆ ಹಚ್ಚಿಕೊಂಡು ಹೋಗುವುದರಿಂದ ಉಣ್ಣೆಗಳು ಕಡಿಯುವುದಿಲ್ಲ. ಜಿಲ್ಲೆಯ ಯಾವ ಭಾಗದಲ್ಲೂ ಕಾಯಿಲೆ ಕಂಡು ಬಂದಿಲ್ಲ. ಹಾಗಾಗಿ, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.