ಸಹಾಯಧನ ಸಾಲಕ್ಕೆ ಕಡಿತಗೊಳಿಸಿಕೊಂಡಲ್ಲಿ ಕ್ರಮ: ಸಿ.ಟಿ.ರವಿ

Team Udayavani, Apr 12, 2020, 4:26 PM IST

12-April-28

ಚಿಕ್ಕಮಗಳೂರು: ಹಿರೇಗೌಜದ ನ್ಯಾಯಬೆಲೆ ಅಂಗಡಿಗೆ ಸಚಿವ ಸಿ.ಟಿ ರವಿ ಭೇಟಿ ನೀಡಿ ದಾಸ್ತಾನು ಸಂಗ್ರಹಣೆ ಹಾಗೂ ಪಡಿತರ ವಿತರಣೆ ಕುರಿತು ಮಾಹಿತಿ ಪಡೆದರು.

ಚಿಕ್ಕಮಗಳೂರು: ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರ ಖಾತೆಗಳಿಗೆ ಬಿಡುಗಡೆಯಾಗಿರುವ ಸಹಾಯಧನವನ್ನು ಬ್ಯಾಂಕ್‌ ಸಾಲದ ಉದ್ದೇಶಕ್ಕೆ ಕಡಿತ ಮಾಡಬಾರದು. ಕಡಿತ ಮಾಡಿದರೆ ಅಂತಹ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಿ.ಟಿ.ರವಿ ಹೇಳಿದರು.

ಶನಿವಾರ ಲಕ್ಯಾ, ಹಿರೇಗೌಜ, ಬಿಳೆಕಲ್ಲಳ್ಳಿ, ಲಕ್ಕಮ್ಮನಹಳ್ಳಿ, ಹುಲಿಕೆರೆ, ನಿಡಘಟ್ಟ, ನಾಗರಾಳು, ಜೋಡಿಹೋಚಿಹಳ್ಳಿ, ದೇವನೂರು, ಚಿಕ್ಕದೇವನೂರು ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಕೊರೋನಾ ಸೋಂಕು ನಿಯಂತ್ರಣ ಕ್ರಮದ ಕುರಿತು ಗ್ರಾಮಮಟ್ಟದ ಟಾಸ್ಕ್ಫೋರ್ಸ್‌ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಹಣ ಬಿಡುಗಡೆ ಮಾಡಿದೆ. ಕೆಲ ಬ್ಯಾಂಕುಗಳಲ್ಲಿ ಹಣವನ್ನು ಸಾಲಕ್ಕೆ ಕಡಿತ ಮಾಡಿಕೊಳ್ಳುತ್ತಿರುವ ದೂರುಗಳು ಕೇಳಿ ಬರುತ್ತಿದ್ದು, ಸಾಲ ಕಡಿತಕ್ಕೆ ಅವಕಾಶವಿಲ್ಲ, ಅಂತಹ ಪ್ರಕರಣಗಳು ಕಂಡು ಬಂದರೆ ಬ್ಯಾಂಕ್‌ ವಿರುದ್ಧ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದರು.

ಎನ್‌.ಆರ್‌.ಇ.ಜಿ ಯೋಜನೆಯಡಿ ಕೆಲಸ ನಿರ್ವಹಿಸುವ ಪ್ರತಿ ಕೂಲಿ ಕಾರ್ಮಿಕರಿಗೆ ಕೆಲಸ ಒದಗಿಸಬೇಕು. ಕೃಷಿ ಚಟುವಟಿಕೆಗಳು, ಆಹಾರೋತ್ಪನ್ನ ಮಾರಾಟ ಹಾಗೂ ಸಾಗಾಟಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದರು. ಕೊರೋನಾ ಸೋಂಕು ತಡೆಗೆ ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆ ಅ ಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸುತ್ತಿದ್ದು ಕೊರೊನಾ ಸೋಂಕಿನ ಕುರಿತು ಎಚ್ಚರಿಕೆ ವಹಿಸಬೇಕು ಎಂದರು. ಆಶಾ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸಿ ಹೊರ ಜಿಲ್ಲೆ ಹೊರ ರಾಜ್ಯಗಳಿಂದ ಬಂದವರನ್ನು ಗುರುತಿಸಿ ಸೋಂಕಿನ ಲಕ್ಷಣ ಕಂಡು ಬಂದರೆ ಹೋಮ್‌ ಕ್ವಾರಂಟೈನ್‌ನಲ್ಲಿ ಇರುವಂತೆ ತಿಳಿಸಬೇಕು ಮತ್ತು ಸುರಕ್ಷಾ ಸಾಧನಗಳನ್ನು ಬಳಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಪ್ರತಿ ಹಳ್ಳಿಗಳಲ್ಲೂ ಪಡಿತರ ವಿತರಿಸಲಾಗುತ್ತಿದ್ದು, ವಿತರಣೆ ವೇಳೆ ಒ.ಟಿ.ಪಿ ಕಡ್ಡಾಯವಲ್ಲ ಎಂದು ಸರ್ಕಾರ ನಿರ್ದೇಶನ ನೀಡಿದೆ. ಅಲ್ಲದೇ ಪಡಿತರ ವಿತರಣೆ ಸಂದರ್ಭ ತೂಕದಲ್ಲಿ ವ್ಯತ್ಯಾಸದ ದೂರುಗಳು ಕೇಳಿ ಬರುತ್ತಿದ್ದು, ತೂಕದಲ್ಲಿ ಲೋಪದೋಷ ಆಗದಂತೆ ನೋಡಿಕೊಳ್ಳಬೇಕು ಎಂದ ಅವರು, ಅಲೆಮಾರಿಗಳು, ವಲಸೆ ಕಾರ್ಮಿಕರು, ಬಿ.ಪಿ.ಎಲ್‌. ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರು ಸೇರಿದಂತೆ ಯಾವುದೇ ಭಾಗದವರು ಇದ್ದಲ್ಲಿ ಅಂತವರಿಗೆ ಎಸ್‌.ಡಿ.ಆರ್‌.ಎಫ್‌ ಮೂಲಕ ಪಡಿತರ ವಿತರಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಸದಸ್ಯ ರವೀಂದ್ರ ಬೆಳವಾಡಿ, ತಾಲೂಕು ಪಂಚಾಯತ್‌ ಸದಸ್ಯ ಮಹೇಶ್‌, ತಹಶೀಲ್ದಾರ್‌ ನಂದಕುಮಾರ್‌, ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿ  ಕಾರಿ ಎಚ್‌.ಡಿ.ರೇವಣ್ಣ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ನಾಗರಾಜ್‌ ಕಳಾಸಪುರ ವೈದ್ಯಾ ಧಿಕಾರಿ ಡಾ| ಕಾರ್ತಿಕ್‌, ಮೆಸ್ಕಾಂನ ಕಾರ್ಯಪಾಲನಾ ಇಂಜಿನಿಯರ್‌ ಕಾರ್ತಿಕ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.