ರಾಜ್ಯದಲ್ಲಿ 83 ಸಾವಿರ ಮನೆ ನಿರ್ಮಾಣ
ತಾಂತ್ರಿಕ ಕಾರಣಗಳಿಂದ ಕೆಲ ಮನೆಗಳ ಕಾಮಗಾರಿ ಸ್ಥಗಿತ ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ
Team Udayavani, Feb 12, 2020, 3:12 PM IST
ಚಿಕ್ಕಮಗಳೂರು: ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯದಲ್ಲಿ 75 ಸಾವಿರ ಮನೆ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಕೊಳಗೇರಿ ಅಭಿವೃದ್ಧಿ ಮಂಡಳಿಯ ತಾಂತ್ರಿಕ ನಿರ್ದೇಶಕ ಮೋಹನ್ ಕುಮಾರ್ ತಿಳಿಸಿದರು.
ನಗರದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣವಾಗುತ್ತಿರುವ ಮನೆಗಳ ಪರಿಶೀಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 83 ಸಾವಿರ ಮನೆ ನಿರ್ಮಾಣ ಮಂಡಳಿಯಿಂದ ನಿರ್ಮಾಣ ಮಾಡಲಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ನಿವೇಶನ ಸಮಸ್ಯೆಯಿರುವ ಕಾರಣ ಅಂತಹವುಗಳನ್ನು ಹೊರತುಪಡಿಸಿ ಉಳಿದ ಮನೆಗಳ ನಿರ್ಮಾಣ ಕೆಲಸ ಆರಂಭಗೊಂಡಿದೆ. ಚಿಕ್ಕಮಗಳೂರು ನಗರದ ಎರಡು ಕೊಳಚೆ ಪ್ರದೇಶದಲ್ಲಿ 280 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಅದರ ಪ್ರಗತಿ ಪರಿಶೀಲನೆಗೆ ಆಗಮಿಸಿದ್ದು, ಕೆಲ ಕಾರಣಗಳಿಂದ ಕೆಲ ಮನೆಗಳು ಕೆಲಸ ನಿಂತುಕೊಂಡಿದೆ. ಅಂತಹ ಮನೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದು, ಶೀಘ್ರದಲ್ಲೇ ನಿಂತಿರುವ ಮನೆಗಳ ನಿರ್ಮಾಣ ಕೆಲಸವನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಎಲ್ಲ ಮನೆ ನಿರ್ಮಾಣ ಕಾರ್ಯ ನಾಲ್ಕೈದು ತಿಂಗಳಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಶಾಂತಿ ನಗರ ಮತ್ತು ತಮಿಳು ಕಾಲೋನಿಯಲ್ಲಿ ಎರಡು ಪ್ರದೇಶದಲ್ಲಿ ತಲಾ 140 ಮನೆಗಳು ನಿರ್ಮಾಣ ಕೆಲಸ ನಡೆಯುತ್ತಿದ್ದು, ಒಂದು ಮನೆ ನಿರ್ಮಾಣಕ್ಕೆ 4 ಲಕ್ಷದ 80 ಸಾವಿರದಿಂದ 5 ಲಕ್ಷದ 60 ಸಾವಿರ ರೂ.
ವರೆಗೂ ಹಣ ವ್ಯಯಿಸಲಾಗುತ್ತಿದೆ. ಈಗಾಗಲೇ ಹಾಸನದಲ್ಲಿ ನಿರ್ಮಾಣ ಹಂತದ ಮನೆಗಳನ್ನು ಪರಿಶೀಲನೆ ನಡೆಸಲಾಗಿದ್ದು, ಜಿಲ್ಲೆಯ ತರೀಕೆರೆ, ಬೀರೂರು, ಕಡೂರು ಸೇರಿದಂತೆ ವಿವಿಧೆಡೆ ಕೊಳಗೇರಿಗಳಲ್ಲಿ ನಿರ್ಮಾಣವಾಗುತ್ತಿರುವ ಮನೆ ಪರಿಶೀಲನೆ ನಡೆಸಲಾಗುವುದು ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ ಮಾತನಾಡಿ, ಇತ್ತೀಚೆಗೆ ಸಚಿವ ಸಿ.ಟಿ.ರವಿಯವರು ಕೊಳಗೇರಿ ಪ್ರದೇಶಕ್ಕೆ ಭೇಟಿ ನೀಡಿದಾಗ ಮನೆ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದೆ ಎಂದು ಸ್ಥಳೀಯರು ದೂರಿದ್ದರು. ಕೂಡಲೇ ವಸತಿ ಸಚಿವರು ಹಾಗೂ ಸಂಬಂಧಪಟ್ಟ ಅಧಿ ಕಾರಿಗಳಿಗೆ ಮಾತನಾಡಿ ಗುತ್ತಿಗೆದಾರರಿಗೆ ಹಣ ಮಂಜೂರು ಮಾಡಿ ಮನೆ ನಿರ್ಮಾಣ ಕೆಲಸ ಮುಂದುವರಿಸಿ ಶೀಘ್ರದಲ್ಲಿ ಎಲ್ಲ ಮನೆಗಳು ಪೂರ್ಣಗೊಳಿಸುವಂತೆ ಹೇಳಿದ್ದರು. ಈ ಸಂಬಂಧ ಬೆಂಗಳೂರಿನಿಂದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳ ತಂಡ ಆಗಮಿಸಿ ಪರಿಶೀಲಿಸಿದ್ದಾರೆ. 280 ಮನೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡಲಾಗಿದ್ದು, ಉಳಿದಂತೆ ಶಾಂತಿನಗರ, ತಮಿಳು ಕಾಲೋನಿ, ದಂಟರಮಕ್ಕಿ ಫಕೀರ ಕಾಲೋನಿಗಳಲ್ಲಿ ಸಾಮಾನ್ಯ ವರ್ಗದವರು ಸೇರಿದಂತೆ ಹಿಂದುಳಿದ ವರ್ಗಕ್ಕೆ 400 ಮನೆಗಳ ನಿರ್ಮಾಣಕ್ಕೆ ಟೆಂಡರ್ ಹಂತದಲ್ಲಿದೆ ಸದ್ಯದಲ್ಲೇ ಕೆಲಸ ಆರಂಭವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕಾರ್ಯಪಾಲಕ ಎಂಜಿನಿಯರ್ ಚನ್ನಕೇಶವ ಕರೇಗೌಡ, ಸ್ಥಳೀಯರಾದ ಶಂಕರ್, ಸುರೇಶ್, ವೆಂಕಟೇಶ್, ಗಣೇಶ್, ಮುರುಗಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.