ಕಾಫಿ ನಾಡಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಪನ್ನ
Team Udayavani, Jul 4, 2020, 12:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಕೋವಿಡ್ ಆತಂಕದ ನಡುವೆಯೂ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರ ಕಾಫಿ ನಾಡಿನಲ್ಲಿ ಸುಖಾಂತ್ಯ ಕಂಡಿತು. ಜೂ.25ರಿಂದ ಆರಂಭಗೊಂಡ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಎಸ್ಸೆಸ್ಸೆಲ್ಸಿ ಕೊನೆಯ ದಿನದ ತೃತೀಯ ಭಾಷೆ ಹಿಂದಿ ಪರೀಕ್ಷೆಗೆ ಜಿಲ್ಲೆಯಲ್ಲಿ 12,303 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 12,187 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, 116 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ ಕ್ವಾರಂಟೈನ್ ಪ್ರದೇಶದಿಂದ ಬಂದ 24 ವಿದ್ಯಾರ್ಥಿಗಳು ಹಾಗೂ ಅನಾರೋಗ್ಯದ ಕಾರಣದಿಂದ 39 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು.
ಹಿಂದಿ ಪರೀಕ್ಷೆಗೆ 551 ವಲಸೆ ವಿದ್ಯಾರ್ಥಿಗಳು ನೋಂದಾಯಿಸಿ ಕೊಂಡಿದ್ದರು. ಓರ್ವ ವಿದ್ಯಾರ್ಥಿ ಮಾತ್ರ ಗೈರು ಹಾಜರಾಗಿದ್ದ. ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿತ್ತು. ಜಿಲ್ಲೆಯಲ್ಲಿ ಕೋವಿಡ್ ಭೀತಿ ಇದ್ದರು ವಿದ್ಯಾರ್ಥಿಗಳು ಜಿಲ್ಲೆಯ 58 ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಉತ್ಸಾಹದಿಂದಲೇ ಬರೆದರು. ವಿದ್ಯಾರ್ಥಿ ಗಳು ಪರೀಕ್ಷಾ ಕೇಂದ್ರಗಳಿಗೆ ಬರಲು ಕೆಎಸ್ ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ಣಗೊಂಡಿದ್ದು, ಯಶಸ್ಸಿಗೆ ಸಹಕರಿಸಿದ ಎಲ್ಲಾ ವಿದ್ಯಾರ್ಥಿ ಗಳು ಮತ್ತು ಪೋಷಕರು, ಆರೋಗ್ಯ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಮತ್ತು ಇತರೆ ಸಂಘ- ಸಂಸ್ಥೆಗಳು ಜನಪ್ರತಿನಿಧಿಗಳು, ಜಿಲ್ಲಾಡ ಳಿತ, ಜಿಪಂ, ಶಾಲಾ ಆಡಳಿತ ಮಂಡಳಿ, ಖಜಾನೆ, ಸಾರಿಗೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಕರು, ಸಿಬ್ಬಂದಿ, ಅಧಿಕಾರಿ ವರ್ಗ ಸೇರಿದಂತೆ ಎಲ್ಲರಿಗೂ ಡಿಡಿಪಿಐ ಸಿ.ನಂಜಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.