Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ
ನಕ್ಸಲರ ಶರಣಾಗತಿಗೆ ಪೊಲೀಸ್ ಇಲಾಖೆ ಮೊದಲ ಆದ್ಯತೆ
Team Udayavani, Jan 2, 2025, 3:46 PM IST
ಚಿಕ್ಕಮಗಳೂರು: ನಕ್ಸಲರ ಶರಣಾಗತಿಗೆ ಪೊಲೀಸ್ ಇಲಾಖೆ ಮೊದಲ ಆದ್ಯತೆ. ನಿಮ್ಮ ಜತೆ ನಮ್ಮ ಸಹಕಾರವಿರುತ್ತದೆ. ಭೂಗತ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬನ್ನಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮನವಿ ಮಾಡಿದರು.
ಗುರುವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಕ್ಸಲ್ ಶರಣಾಗತಿ ಸಂಬಂಧ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಸರ್ಕಾರ ನಕ್ಸಲ್ ಶರಣಾಗತಿಗೆ ಪ್ರಾಮುಖ್ಯತೆ ನೀಡಿದೆ. ಜಿಲ್ಲೆಯಲ್ಲಿ ಈ ಹಿಂದೆಯೂ ನಕ್ಸಲರು ಶರಣಾಗತರಾಗಿದ್ದಾರೆ. ಕರ್ನಾಟಕ ಸೇರಿ ಹೊರ ರಾಜ್ಯದ ನಕ್ಸಲರಿಗೂ ಶರಣಾಗತಿ ಅವಕಾಶ ನೀಡಲಾಗಿದೆ ಎಂದರು.
ಶರಣಾಗತಿಯಾಗುವ ನಕ್ಸಲರು ತಮ್ಮನ್ನು ಸಂಪರ್ಕ ಮಾಡಬಹುದು. ನಾವೂ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ನಕ್ಸಲ್ ಶರಣಾಗತಿ ಮಾಡಿಸುವವರಿಗೂ ಪೊಲೀಸ್ ಇಲಾಖೆ ಬೆಂಬಲ ನೀಡುತ್ತದೆ ಎಂದ ಅವರು ಮಾಜಿ ನಕ್ಸಲರ ಸಮಸ್ಯೆ ಕುರಿತು ಜಿಲ್ಲಾಡಳಿತ ಜತೆ ಚರ್ಚಿಸಿ ಸಭೆ ಮಾಡುತ್ತೇವೆ. ಮಾಜಿ ನಕ್ಸಲರ ಸಮಸ್ಯೆಗಳಿದ್ದರೆ ತಮ್ಮನ್ನು ಖುದ್ದಾಗಿ ಭೇಟಿಯಾಗಿ ತಿಳಿಸಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.