![Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’](https://www.udayavani.com/wp-content/uploads/2025/02/Dubai1-415x234.jpg)
![Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’](https://www.udayavani.com/wp-content/uploads/2025/02/Dubai1-415x234.jpg)
Team Udayavani, Dec 12, 2023, 1:16 PM IST
ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಗೃಹಿಣಿಯೊಬ್ಬರು ಮನೆಯಲ್ಲಿ ಸಾವನಪ್ಪಿದ್ದು, ಮೃತ ಗೃಹಿಣಿ ಪೋಷಕರು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಶ್ವೇತಾ (31) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕುಟುಂಬಸ್ಥರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದರು.
ಈ ವೇಳೆ ಮೃತ ಶ್ವೇತಾ ಅವರ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದರು.
ಶ್ವೇತಾ ಅವರ ಪತಿ ದರ್ಶನ್ ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಶಂಕೆಯನ್ನು ಶ್ವೇತಾ ಕುಟುಂಬದವರು ವ್ಯಕ್ತಪಡಿಸಿದ್ದಾರೆ. ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ಮೂರು ವರ್ಷಗಳ ಹಿಂದೆ ಶ್ವೇತಾ ಹಾಗೂ ದರ್ಶನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನಲ್ಲಿ ನೆಲೆಸಿದ್ದರು. ಶ್ವೇತಾ ಹಾಗೂ ದರ್ಶನ್ ನಾಲ್ಕು ದಿನಗಳ ಹಿಂದೆ ಬೆಂಗಳೂರಿನಿಂದ ದೇವವೃಂದಕ್ಕೆ ಬಂದಿದ್ದರು. ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದರು.
ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹು ದೆಂದು ಶ್ವೇತಾ ಕುಟುಂಬದವರು ಆರೋಪಿಸಿ ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ
Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ
Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್ ಪಾವತಿ!
Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ
Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’
ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ
You seem to have an Ad Blocker on.
To continue reading, please turn it off or whitelist Udayavani.