ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ

ನಿಲಯ ಪಾಲಕರು-ಪ್ರಾಂಶುಪಾಲರು-ಶಿಕ್ಷಕರಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾಕೃಷ್ಣಪ್ಪ ಸಲಹೆ

Team Udayavani, Mar 4, 2020, 5:58 PM IST

4–March-29

ಚಿಕ್ಕಮಗಳೂರು: ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡಿ, ಅವರು ಉತ್ತಮ ಶಿಕ್ಷಣ ಪಡೆದುಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜೆಸಿಐ ಶೃಂಗೇರಿ ಘಟಕ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ನಿಲಯದ ಪ್ರಾಂಶುಪಾಲರು, ನಿಲಯ ಪಾಲಕರು, ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ಯಶಸ್ಸಿನ ಸೂತ್ರಗಳು ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಇತ್ತೀಚೆಗೆ ಹಾಸ್ಟೆಲ್‌ಗ‌ಳಲ್ಲಿ ಮಕ್ಕಳ ಕಣ್ಮರೆ ಪ್ರಕರಣ ಅಲ್ಲಿನ ದೋಷವನ್ನು ಎತ್ತಿ ತೋರಿಸುತ್ತದೆ. ನಿಲಯ ಪಾಲಕರು, ಪ್ರಾಂಶುಪಾಲರು, ಸಿಬ್ಬಂದಿ ಯಾವುದೇ ಸಮಸ್ಯೆಗಳಿದ್ದಲ್ಲಿ ಆಯಾ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದು, ವಿದ್ಯಾರ್ಥಿ ನಿಲಯದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಹೇಳಿದರು.

ಹಾಸ್ಟೆಲ್‌ಗ‌ಳಲ್ಲಿ ಮಕ್ಕಳಿಗೆ ಪ್ರತಿನಿತ್ಯ ನೀಡುತ್ತಿರುವ ಆಹಾರ ಚಾರ್ಟ್‌ ಹಾಕಬೇಕು. ಅಧಿಕಾರಿಗಳು, ಸಿಬ್ಬಂದಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ತರಬೇತಿ ಕಾರ್ಯಾಗಾರಗಳು ಉಪಯೋಗವಾಗಲಿವೆ ಎಂದು ತಿಳಿಸಿದರು.

ಹಾಸ್ಟೆಲ್‌ಗ‌ಳಲ್ಲಿ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಜಿಲ್ಲೆಯನ್ನು ಮಾದರಿ ಮಾಡಲು ಪ್ರತಿಯೊಬ್ಬರೂ ಶ್ರಮಿಸುವ ಮೂಲಕ ರಾಜ್ಯದಲ್ಲಿ ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್‌.ಪೂವಿತಾ ಮಾತನಾಡಿ, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ, ಯೋಗಕ್ಷೇಮ, ಉತ್ತಮ ಶಿಕ್ಷಣ ನೀಡುವ ಹೊಣೆ ನಿಲಯಪಾಲಕರದ್ದಾಗಿದೆ. ಸುರಕ್ಷತೆ ದೃಷ್ಟಿಯಿಂದ ರಾತ್ರಿ ವೇಳೆಯಲ್ಲಿ ನಿಲಯ ಪಾಲಕರು ಕಡ್ಡಾಯವಾಗಿ ಹಾಸ್ಟೆಲ್‌ನಲ್ಲಿಯೇ
ಉಳಿದುಕೊಳ್ಳುವಂತೆ ಸೂಚಿಸಿದರು.

ಯಾವುದೇ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ, ದುರಸ್ತಿ ಕಾರ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನನ್ನ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಮಕ್ಕಳ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾವಹಿಸಲು ಅವಕಾಶ ನೀಡಬೇಕು ಎಂದರು.

ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ವಾರ್ಡನ್‌ಗಳು ವಿದ್ಯಾರ್ಥಿಗಳ ಓದಿನ ಜೊತೆಗೆ ಸುರಕ್ಷತೆ, ಶುಚಿತ್ವದ ಬಗ್ಗೆ ಮಾರ್ಗದರ್ಶನ ನೀಡಬೇಕು. ಮುಂದಿನ ದಿನಗಳಲ್ಲಿ ಪ್ರತಿ ಹಾಸ್ಟೆಲ್‌ಗ‌ಳಿಗೂ ಭೇಟಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯತ್‌ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್‌ಕುಮಾರ್‌ ಮಾತನಾಡಿ, ಸರ್ಕಾರ ನೀಡುವ ಸವಲತ್ತುಗಳನ್ನು ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ನಿಲಯ ಪಾಲಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಗುಣಮಟ್ಟದ ಆಹಾರ, ಶುಚಿತ್ವ, ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯತ್‌ ಸದಸ್ಯ ಹಾಗೂ ಜೆಸಿಐ ಅಧ್ಯಕ್ಷ ಶೃಂಗೇರಿ ಶಿವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತರಬೇತಿ ಕಾರ್ಯಕ್ರಮಗಳು ಸರ್ಕಾರಿ ಅಧಿಕಾರಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸಂಸ್ಥೆಯಿಂದ 25ನೇ ತರಬೇತಿ ಕಾರ್ಯಾಗಾರ ನಡೆದಿದ್ದು, ನಮ್ಮಲ್ಲಿನ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂಬುದು ಕಾರ್ಯಾಗಾರದ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಿರೀಕ್ಷೆ, ಮಧುಬನಿ ಪುಸ್ತಕ ಲೋಕಾರ್ಪಣೆಗೊಳಿಸಿದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ, ರಾಷ್ಟ್ರೀಯ ತರಬೇತುದಾರ ಎನ್‌. ಕೆ.ವಿಜಯ್‌ಕುಮಾರ್‌ ವಿದ್ಯಾಥಿಗಳ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾರ್ಗದರ್ಶನ, ಶಿಕ್ಷಕರ ಪಾತ್ರ ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯೆ ಲೋಲಾಕ್ಷಿ ಬಾಯಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್‌, ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿ ಹಟ್ಟಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸೋಮಶೇಖರ್‌, ತರಬೇತಿ ವಿಭಾಗದ ಉಪಾಧ್ಯಕ್ಷ ಸುಜನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.