ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Team Udayavani, Sep 7, 2021, 5:29 PM IST

7-15

ಚಿಕ್ಕಮಗಳೂರು : ನಗರದ ಕುಡಿಯುವ ನೀರಿನ ಅಮೃತ್‌ ಯೋಜನೆ ಮತ್ತು ಒಳಚರಂಡಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಮೃತ್‌ ಕುಡಿಯುವ ನೀರಿನ ಯೋಜನೆ ಮತ್ತು ಒಳಚರಂಡಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಚಿಕ್ಕಮಗಳೂರು ನಗರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಅಮೃತ್‌ ಕುಡಿಯುವ ನೀರು ಯೋಜನೆ ಮತ್ತು ಒಳಚರಂಡಿ ಕಾಮಗಾರಿ ವಿಳಂಬವಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಅನಾನುಕೂಲವಾಗುತ್ತಿದೆ. ಈ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಟೆಂಡರ್‌ ನಿಬಂಧನೆಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಚಿಕ್ಕಮಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಯಡಿ ನಿರ್ಮಾಣ ಮಾಡಲು ಬಾಕಿ ಇರುವ ಯುಜಿಡಿ ಮ್ಯಾನ್‌ಹೋಲ್‌ಗ‌ಳ ನಿರ್ಮಾಣ ಕಾರ್ಯ ವಿಳಂಬವಾಗುತ್ತಿದೆ.

ಇದನ್ನೂ ಓದಿ : ಟೆಲಿಕಾಂ ವಲಯದಲ್ಲಿ ಕ್ರಾಂತಿ ಮಾಡಿದ ‘ಜಿಯೋ’ಗೆ ಈಗ ಐದು ವರ್ಷ!

ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಯುವಂತೆ ಒಳಚರಂಡಿ ಮಂಡಳಿ ಅಧಿಕಾರಿಗಳುಕ್ರಮಕೈಗೊಳ್ಳ ಬೇಕೆಂದು ಸೂಚಿಸಿದರು. ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ನಿಯೋಜಿಸಿ ಸೆಪ್ಪೆಂಬರ್‌ ಅಂತ್ಯದೊಳಗೆ ಈ ಎರಡು ಕಾಮಗಾರಿಗಳನ್ನು ಮುಕ್ತಾಯಗೊಳಿಸುವಂತೆ ಸಂಬಂಧ ಪಟ್ಟ ಗುತ್ತಿಗೆದಾರರಿಗೆ ಸೂಚಿಸಿದ ಅವರು, ಗುತ್ತಿಗೆದಾರರು ಕಾಮಗಾರಿ ನಿರ್ವಹಿಸುವಲ್ಲಿ ವಿಳಂಬ ಮಾಡಿದಲ್ಲಿ ಟೆಂಡರ್‌ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಒಳಚರಂಡಿ ಕಾಮಗಾರಿಗೆ ಸಂಬಂಧಿಸಿದಂತೆ ಈಗಿರುವ ಮ್ಯಾನ್‌ ಹೋಲ್‌ ಗ‌ಳ ದುರಸ್ಥಿ ಕಾರ್ಯವನ್ನು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು ‌ ಅನುಸಾರವಾಗಿ ಮಾಡಬೇಕು. ಮ್ಯಾನ್ ಹೋಲ್‌ ಗ‌ಳ ದುರಸ್ಥಿ ಕಾರ್ಯಕ್ಕೆ ಕಾರ್ಮಿಕ‌ರನ್ನು ಬಳಸದೆ  ಯಂತ್ರೋಪಕರಣಗಳ‌ನ್ನು ಬಳಸಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ತಿಳಿಸಿದರು.

ಅಮೃತ್‌ ಕುಡಿಯುವ ನೀರು ಯೋಜನೆ ಕಾಮಗಾರಿಯನ್ನು 23 ವಲಯಗಳಾಗಿ ಗುರುತಿಸಿದ್ದು, 8 ವಲಯಗಳಲ್ಲಿ  ‌ ಕಾಮಗಾರಿಯನ್ನು ಸಂಪೂರ್ಣಗೊಳಿಸಲಾಗಿದೆ. ಈ ತಿಂಗಳ ಒಳಗಾಗಿ 4 ವಲಯಗಳಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು ಎಂದರು. ರಾಷ್ಟ್ರೀಯ  ಹೆದ್ದಾರಿ ಕಾಮಗಾರಿ ಕೆಲವು ಕಡೆಗಳಲ್ಲಿ ನಿಧಾನ ‌ಗತಿಯಲ್ಲಿ ನಡೆಯುತ್ತಿದ್ದು ಕಾಮಗಾರಿ ಚುರುಕುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ‌ ಅಧಿಕಾರಿಗಳಿಗೆ ಸೂಚಿಸಿದ ಅವರು, ಎಐಟಿ ಅಧಿಕೃತದಿಂದ ಹಿರೇಮಗಳೂರು ಒರೆಗಿನಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗ‌ಲೇ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು,  ಸಂಬಂ‌ಧಪಟ್ಟ ಇಲಾಖೆ ಅಧಿಕಾರಿಗ‌ಳು ಅನ್ವಯದಿಂದ ‌ ಕಾರ್ಯ ನಿರ್ವಹಿಸಬೇಕೆಂದರು.

ಸಭೆಯಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾ ಧಿಕಾರದ ‌ ಆಯುಕ್ತ ಹಾಗೂ ನಗರಸಭೆ ಆಯುಕ್ತರಾದ ‌ ಬಿ. ಸಿ. ಬಸವರಾಜ್‌, ಜಿಲ್ಲಾ ನಗರಾಭಿವೃದ್ಧಿ ಕೋಶಾಧಿಕಾರಿ ಮೋಹನ್‌, ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ಜಗದೀಶ್‌, ನಗರ ನೀರು ಸರಬರಾಜು ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಮಲ್ಲೇಶ್‌ನಾಯಕ್‌ ಇತರರು ಇದ್ದರು.

ಇದನ್ನೂ ಓದಿ : ಬೆಲೆ ಏರಿಕೆಗೆ ಬಿಜೆಪಿ ಕಾರಣವಲ್ಲ: ಡಾ.ಅಶ್ವತ್ಥನಾರಾಯಣ

ಟಾಪ್ ನ್ಯೂಸ್

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?

Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?

water

ರಾಜ್ಯದ ಅಂತರ್ಜಲ ವಿಷಮಯ: ಪ್ರತಿಕೂಲ ಪರಿಣಾಮ ಏನು?

Priyank Kharge ರಾಜೀನಾಮೆ ಆಗ್ರಹಿಸಿ ನಾಳೆ ಬೃಹತ್‌ ಹೋರಾಟ: ಆರ್‌. ಅಶೋಕ್‌

Priyank Kharge ರಾಜೀನಾಮೆ ಆಗ್ರಹಿಸಿ ನಾಳೆ ಬೃಹತ್‌ ಹೋರಾಟ: ಆರ್‌. ಅಶೋಕ್‌

Gurugram: 10 ನಿಮಿಷದಲ್ಲಿ ಮನೆಬಾಗಿಲಿಗೆ ಆ್ಯಂಬುಲೆನ್ಸ್‌: ಬ್ಲಿಂಕಿಟ್‌ ಹೊಸ ಸೇವೆ

Gurugram: 10 ನಿಮಿಷದಲ್ಲಿ ಮನೆಬಾಗಿಲಿಗೆ ಆ್ಯಂಬುಲೆನ್ಸ್‌: ಬ್ಲಿಂಕಿಟ್‌ ಹೊಸ ಸೇವೆ

6 ಸ್ಮಾರ್ಟ್‌ ಸಿಟಿ ಕಾಮಗಾರಿಗಳಿಗೆ ತನಿಖಾಸ್ತ್ರ ; 3 ತಿಂಗಳಲ್ಲಿ ವರದಿಗೆ ಸೂಚನೆ

6 ಸ್ಮಾರ್ಟ್‌ ಸಿಟಿ ಕಾಮಗಾರಿಗಳಿಗೆ ತನಿಖಾಸ್ತ್ರ ; 3 ತಿಂಗಳಲ್ಲಿ ವರದಿಗೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

12-

Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?

Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?

water

ರಾಜ್ಯದ ಅಂತರ್ಜಲ ವಿಷಮಯ: ಪ್ರತಿಕೂಲ ಪರಿಣಾಮ ಏನು?

Priyank Kharge ರಾಜೀನಾಮೆ ಆಗ್ರಹಿಸಿ ನಾಳೆ ಬೃಹತ್‌ ಹೋರಾಟ: ಆರ್‌. ಅಶೋಕ್‌

Priyank Kharge ರಾಜೀನಾಮೆ ಆಗ್ರಹಿಸಿ ನಾಳೆ ಬೃಹತ್‌ ಹೋರಾಟ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.