ಯೋಗದಿಂದ ಮನಸ್ಸಿನ ಸ್ವಾಸ್ಥ್ಯ ರಕ್ಷಣೆ
Team Udayavani, Jun 25, 2020, 3:57 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ದೇಹ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಲು ಯೋಗ ಸಹಕಾರಿ ಎಂದು ಜಿಪಂ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್ ತಿಳಿಸಿದರು.
ಭಾನುವಾರ ನಗರದ ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ, ಶ್ರೀದೇವಿ ಗುರುಕುಲ, ಶ್ರೀ ಪಾರ್ವತಿ ಮಹಿಳಾ ಮಂಡಳಿ ಹಾಗೂ ಜಂಗಮ ಬಳಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 6ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶ್ರೀದೇವಿ ಗುರುಕುಲದ ಸಂಸ್ಥಾಪಕ ಡಾ| ದಯಾನಂದ ಮೂರ್ತಿಶಾಸ್ತ್ರಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ಕಾರ್ಯಾಧ್ಯಕ್ಷ ಪ್ರಭುಲಿಂಗಶಾಸ್ತ್ರಿ, ಶ್ರೀ ಪಾರ್ವತಿ ಮಹಿಳಾ ಮಂಡಳಿ ಅಧ್ಯಕ್ಷೆ ಸುಮಿತ್ರಾಶಾಸ್ತ್ರಿ, ಕಾರ್ಯದರ್ಶಿ ಭವಾನಿ ವಿಜಯಾನಂದ್, ಪುಷ್ಪಾ ಕುಮಾರಸ್ವಾಮಿ, ನಂದಿನಿ, ಸುಧಾ, ತಾರಾ ಮತ್ತು ರೇಖಾ ಉಪಸ್ಥಿತರಿದ್ದರು. ಯೋಗ ಶಿಕ್ಷಕಿ ಮಂಜುಳಾ ಉದಯ್ ಉಪನ್ಯಾಸ ನೀಡಿದರು. ಜಿಪಂ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬೀಕನಹಳ್ಳಿ ಸೋಮಶೇಖರ್ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.