ಹವಾಮಾನ ವೈಪರೀತ್ಯ: ರೈತರಿಗೆ ಆತಂಕ
Team Udayavani, Sep 13, 2021, 6:39 PM IST
ಚಿಕ್ಕಮಗಳೂರು: ಹವಮಾನ ವೈಪರೀತ್ಯದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಸುರಿಯುತ್ತಿರುವ ಮಳೆ ರೈತರ ಮೊಗದಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದಭಾರೀಮಳೆಯಾಗುತ್ತಿದ್ದು ಎರಡು ವರ್ಷಗಳಿಂದ ಅತಿವೃಷ್ಟಿಗೆ ತುತ್ತಾಗಿರುವ ರೈತರು ಜಮೀನು ಮನೆ, ಬೆಳೆಯನ್ನು ಕಳೆದುಕೊಂಡು ಕಂಗಾಲಾಗಿದ್ದರು.
ಇತ್ತೀಚೆಗೆ ಸುರಿದ ಅಕಾಲಿಕಮಳೆಯಿಂದಕಾಫಿಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದರು. ಸದ್ಯ ಜಿಲ್ಲೆಯ ಮಲೆನಾಡು ಭಾಗದಲ್ಲಿ ಹವಾಮಾನ ವೈಪರೀತ್ಯದಿಂದ ಮಳೆಯಾಗುತ್ತಿದೆ. ಕಳೆದ ಬುಧವಾರದಿಂದ ಬಿಟ್ಟೂ ಬಿಟ್ಟು ಮಳೆಯಾಗುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಭಾನುವಾರ ಬೆಳಗ್ಗೆಯಿಂದ ಸಂಜೆಯವರೆಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕು ಸೇರಿದಂತೆ ಕಡೂರು, ತರೀಕೆರೆ ಭಾಗದಲ್ಲಿ ಮೋಡ ಕವಿದವಾತಾವರಣನಿರ್ಮಾಣವಾಗಿದ್ದು ಆಗಾಗ್ಗೆ ಸಾಧಾರಣ ಮಳೆಯಾಗಿದೆ.
ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿಮಳೆಯಾಗುತ್ತಿದೆ.ತುಂಗಾ, ಭದ್ರಾ, ಹೇಮಾವತಿ ನದಿ ನೀರಿ ಹರಿವು ಸ್ವಲ್ಪಮಟ್ಟಿಗೆ ಏರಿಕೆಯಾಗಿದೆ. ನಿರಂತರ ಮಳೆಮಲೆನಾಡಿನರೈತರಲ್ಲಿಆತಂಕವನ್ನು ಮೂಡಿಸಿದೆ. ಜೂನ್, ಜುಲೈ ತಿಂಗಳಲ್ಲಿ ಸುರಿದ ಮಳೆ ಮಲೆನಾಡಿನ ಕೃಷಿಕರಲ್ಲಿ ಅತಿವೃಷ್ಟಿಯ ಆಂತಕ ಸೃಷ್ಟಿಸಿತ್ತು. ಆದರೆ ಆಗಸ್ಟ್‌ನಲ್ಲಿಮಳೆ ತಗ್ಗಿದ್ದರಿಂದ ನಿಟ್ಟುಸಿರು ಬಿಟ್ಟಿದ್ದರು. ಮಳೆ ಕ್ಷೀಣಿಸುತ್ತಿದ್ದಂತೆ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದರು.
ಭತ್ತದ ಗದ್ದೆಗಳು ಸೇರಿದಂತೆ ಕಾಫಿ, ಅಡಕೆ ತೋಟಗಳಲ್ಲಿ ಕೃಷಿ ಚಟುವಟಿಕೆ ಬಿರುಸಿನಿಂದ ಸಾಗಿತ್ತು. ಸದ್ಯ ಭತ್ತದ ನಾಟಿ ಕೆಲಸ ಪೂರ್ಣಗೊಂಡು ಗದ್ದೆಗಳು ಹಚ್ಚಹಸಿರಿನಿಂದಕಂಗೊಳಿಸುತ್ತಿವೆ.ಕಾಫಿ, ಅಡಕೆ ತೋಟಗಳಲ್ಲಿ ಕಳೆ, ಚಿಗುರು ತೆಗೆಯುವ ಕೆಲಸ ಪೂರ್ಣಗೊಂಡು ಗೊಬ್ಬರ, ಔಷಧ ಸಿಂಪಡಣೆ ಕಾರ್ಯ ನಡೆಯುತ್ತಿದೆ. ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಔಷಧ ಸಿಂಪಡಣೆ ಮತ್ತು ಗೊಬ್ಬರ ಹಾಕಲು ಅಡ್ಡಿಯಾಗಿದೆ. ಮಳೆಯಿಂದ ಕಾಫಿ, ಕಾಳುಮೆಣಸು, ಅಡಕೆ ಬೆಳೆಗಾರರಲ್ಲೂ ಆತಂಕಕ್ಕೆಕಾರಣವಾಗಿದೆ.
ಸತತಅತಿವೃಷ್ಟಿ, ಅಕಾಲಿಕ ಮಳೆ ಪರಿಣಾಮ ಕಳೆದ ಕೆಲ ವರ್ಷಗಳಿಂದಬೆಳೆನಷ್ಟಅನುಭವಿಸಿರುವ ಬೆಳೆಗಾರರು ಈ ಬಾರಿಯೂ ಬೆಳೆ ನಷ್ಟದ ಭೀತಿಯಲ್ಲಿದ್ದಾರೆ. ಈಗಾಗಲೇ ಅಡಕೆ, ಕಾಫಿ, ಕಾಳುಮೆಣಸು ತೋಟಗಳಲ್ಲಿ ಉತ್ತಮ ಫಸಲು ಬಂದಿದ್ದು, ಸತತ ಮಳೆಯಿಂದಾಗಿ ಬೆಳೆಗಳಿಗೆ ಕೊಳೆ ರೋಗ ನಿಧಾನವಾಗಿ ಆವರಿಸುತ್ತಿದೆ. ಬೆಳೆ ಉಳಿಸಿಕೊಳ್ಳಲು ಪಡಿಪಾಟಲು ಅನುಭವಿಸುತ್ತಿದ್ದಾರೆ.
ಕೊಳೆ ರೋಗಕ್ಕೆ ಔಷಧ ಸಿಂಪಡಣೆಗೆ ಮಳೆ ಅಡ್ಡಿಯಾಗುತ್ತಿದೆ. ಭೂಮಿಯಲ್ಲಿ ತೇವಾಂಶದ ಹೆಚ್ಚಳದಿಂದಾಗಿ ಕಾಫಿ, ಅಡಕೆ, ಕಾಳುಮೆಣಸು ಬೆಳೆಗಳು ಉದುರಲು ಆರಂಭಿಸಿರುವುದು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಒಟ್ಟಾರೆ ಕಳೆದ ಕೆಲ ವರ್ಷಗಳಿಂದ ಅತಿವೃಷ್ಟಿಯಿಂದಾಗಿ ಬೆಳೆನಷ್ಟ ಅನುಭವಿಸಿರುವ ರೈತರು ಈ ಬಾರಿಯಾದರೂ ಬೆಳೆದ ಬೆಳೆ ಕೈಹಿಡಿಯಲಿದೆಯೇ ಎಂಬ ಆಶಾಭಾವನೆಯಲ್ಲಿದ್ದಾರೆ. ಈ ಮಧ್ಯೆ ಹವಾಮಾನ ವೈಪರೀತ್ಯದಿಂದಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕೃಷಿಕರು ಬೇಸತ್ತು ಹೋಗುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.