ಕೋವಿಡ್‌ ನಿಯಂತ್ರಣಕ್ಕೆ ಸಕಲ ಸಿದ್ಧತೆ

Team Udayavani, Apr 19, 2021, 6:55 PM IST

19-19

ಚಿಕ್ಕಮಗಳೂರು: ದೇಶ ಹಾಗೂ ರಾಜ್ಯವನ್ನು ಕಾಡುತ್ತಿರುವ ಕೊರೊನಾ ಸೋಂಕು ಎರಡನೇ ಅಲೆಯ ಆರ್ಭಟ ಕಾμನಾಡಿನಲ್ಲೂ ಮುಂದುವರಿದಿದ್ದು, ಶೂನ್ಯಕ್ಕಿಂದ ಕೊರೊನಾ ಸೋಂಕು (ಶನಿವಾರ) 500ರ ಗಡಿಗೆ ಬಂದು ತಲುಪಿದೆ. ಸೋಂಕು ಹೆಚ್ಚಳದ ಬೆನ್ನಲ್ಲೇ ಜಿಲ್ಲೆಯ ಜನತೆ ಪ್ರವಾಸಿಗರ ನಿರ್ಬಂಧಕ್ಕೆ ಒತ್ತಾಯಿಸುತ್ತಿದ್ದು ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೊದಲ ಅಲೆ ಕೊರೊನಾ ಸೋಂಕು ಜಿಲ್ಲೆಯಲ್ಲಿ ಸಂಪೂರ್ಣ ಕ್ಷೀಣಿಸಿತ್ತು.

ಮತ್ತೆ ಎರಡನೇ ಅಲೆ ಆರಂಭದ ಬಳಿಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 500ರ ಗಡಿ ದಾಟುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳಗೊಳ್ಳುತ್ತಿರುವುದಕ್ಕೆ ಬೆದರಿರುವ ಜನತೆ ಪ್ರವಾಸಿಗರಿಗೆ, ಧಾರ್ಮಿಕ ಸ್ಥಳಗಳಿಗೆ ಆಗಮಿಸುವರಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ. ಕೊರೊನಾ ಸೋಂಕು ಹರಡುತ್ತಿರುವುದರ ನಡುವೆಯೂ ವಾರಾಂತ್ಯದಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದ್ದು, ಮಾಸ್ಕ್ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಬೇಕಾಬಿಟ್ಟಿ ತಿರುಗಾಡುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಜಿಲ್ಲೆಯ ಗಿರಿ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರನ್ನು ತಾಲೂಕಿನ ಕೈಮರ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಿ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ಕೋವಿಡ್‌ ಜಾಗೃತಿ ನೀಡಲಾಗುತ್ತಿದೆ.

ಗಿರಿ ಪ್ರದೇಶಕ್ಕೆ ತೆರಳುತ್ತಿದ್ದಂತೆ ಕೋವಿಡ್‌ ಮಾರ್ಗಸೂಚಿಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂಬುದು ಸ್ಥಳೀಯರ ಆರೋಪವಾಗಿದೆ. ಕೋವಿಡ್‌ ನಿಯಂತ್ರಣದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕ ಸಭೆ ಸಮಾರಂಭ, ಮನೋರಂಜನೆ ಕಾರ್ಯಕ್ರಮ ಮದುವೆ ಕಾರ್ಯಕ್ರಮಗಳಲ್ಲಿ ಜನರ ಸಂಖ್ಯೆ ಮಿತಿಗೊಳಿಸಿದೆ. ತೆರೆದ ಪ್ರದೇಶದಲ್ಲಿ ಮದುವೆ ಸಮಾರಂಭ 200 ಜನರು, ಕಲ್ಯಾಣ ಮಂಟಪ, ಸಭಾಂಗಣಗಳಲ್ಲಿ 100 ಜನರು, ಜನ್ಮ ದಿನಾಚರಣೆ ಇತರೆ ಕಾರ್ಯಕ್ರಮಗಳಲ್ಲಿ 25 ರಿಂದ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಂತ್ಯಸಂಸ್ಕಾರದಲ್ಲಿ 25 ರಿಂದ 50 ಜನರು, ರಾಜಕೀಯ ಸಮಾವೇಶಗಳಲ್ಲಿ 200 ಜನರನ್ನು ಮೀರದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೂ ಹಗಲಿರುಳು ಶ್ರಮಿಸುತ್ತಿದೆ. 654 ಹಾಸಿಗೆ ಸಿದ್ಧವಿಟ್ಟುಕೊಳ್ಳಲಾಗಿದೆ. ಸದ್ಯ 54 ಹಾಸಿಗೆ ಭರ್ತಿಯಾಗಿದ್ದು, ತಪಾಸಣೆಯನ್ನು ಹೆಚ್ಚಳಗೊಳಿಸಲಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕೊರೊನಾ ಸೋಂಕು ತಡೆಗೆ ಪ್ರವಾಸಿಗರಿಗೆ ತಡೆ ಒಡ್ಡಬೇಕೆಂಬುದು ಜನರ ಆಗ್ರಹವಾಗಿದೆ.

ಟಾಪ್ ನ್ಯೂಸ್

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ

Mundugaru-pejavara-sri2

Mundugaru:ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಪೇಜಾವರ ಶ್ರೀಗಳ ಸಂಚಾರ; ಕಾಡಿನಲ್ಲಿ ರಾಮಮಂತ್ರ ಘೋಷ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.