ಜಿಲ್ಲಾ ಸರ್ಜನ್ ನಾಯ್ಕ ವರ್ಗಾವಣೆ ರದ್ದುಗೊಳಿಸಿ
Team Udayavani, May 1, 2020, 3:14 PM IST
ಚಿಕ್ಕಮಗಳೂರು: ಜಿಲ್ಲಾ ಸರ್ಜನ್ ಡಾ| ಕುಮಾರ್ ನಾಯ್ಕ ವರ್ಗಾವಣೆ ರದ್ದುಪಡಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲು ಆಗಮಿಸಿದ್ದ ದಲಿತ ಸಂಘರ್ಷ ಸಮಿತಿ ಸದಸ್ಯರು.
ಚಿಕ್ಕಮಗಳೂರು: ಜಿಲ್ಲಾ ಸರ್ಜನ್ ಡಾ|ಎಸ್.ಕುಮಾರ್‌ನಾಯ್ಕರವರ ವರ್ಗಾವಣೆ ರದ್ದುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದದರು. ಡಾ|ಎಸ್.ಕುಮಾರ್ ನಾಯ್ಕ ಅವರು ಜಿಲ್ಲಾ ಸರ್ಜನ್ ಆದ ನಂತರ ನಗರದ ಸರ್ಕಾರಿ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮವಾಗಿ ಸ್ಪಂದಿ ಸುತ್ತಿದ್ದರು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕೋವಿಡ್ ವೈರಸ್ ತಡೆಗೆ ಹಗಲು ರಾತ್ರಿಯೆನ್ನದೆ ದುಡಿಯುತ್ತಿರುವ ಅವರನ್ನು ಇಂತಹ ಸನ್ನಿವೇಶದಲ್ಲಿ ಯಾವ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
ವರ್ಗಾವಣೆ ರದ್ದುಗೊಳಿಸದಿದ್ದಲ್ಲಿ ಲಾಕ್‌ಡೌನ್ ತೆರವಿನ ನಂತರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಖಜಾಂಚಿ ಆರ್.ಶೇಖರ್, ಮುಖಂಡರಾದ ಪರಮೇಶ್, ಕೃಷ್ಣಮೂರ್ತಿ ಇದ್ದರು.
ದಿಢೀರ್ ವರ್ಗಾವಣೆ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ| ಕುಮಾರ್ ನಾಯ್ಕ ಅವರನ್ನು ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಗುರುವಾರ ಆದೇಶ
ಹೊರಡಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ|ಮೋಹನ್ ಅವರನ್ನು ಈ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಕೋವಿಡ್ ತುರ್ತು ಸಂದರ್ಭದಲ್ಲಿ ಜಿಲ್ಲಾ
ಸರ್ಜನ್ ದಿಢೀರ್ ವರ್ಗಾವಣೆ ಸಾರ್ವಜನಿಕವಾಗಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.